AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ಮೆಲ್ಬರ್ನ್ ಪಂದ್ಯ ವೀಕ್ಷಿಸಿದ ಪ್ರೇಕ್ಷಕನೊಬ್ಬನಿಗೆ ಕೊರೊನಾ ಪಾಸಿಟಿವ್

ಮೆಲ್ಬರ್ನ್ ಟೆಸ್ಟ್ ಪಂದ್ಯವನ್ನು ಮೈದಾನದಲ್ಲಿ ವೀಕ್ಷಿಸಿದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಆತ ಕುಳಿತಿದ್ದ ಭಾಗದಲ್ಲಿದ್ದ ಇತರ ಪ್ರೇಕ್ಷಕರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮೆಲ್ಬರ್ನ್ ಕ್ರಿಕೆಟ್ ಕ್ಲಬ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

India vs Australia Test Series | ಮೆಲ್ಬರ್ನ್ ಪಂದ್ಯ ವೀಕ್ಷಿಸಿದ ಪ್ರೇಕ್ಷಕನೊಬ್ಬನಿಗೆ ಕೊರೊನಾ ಪಾಸಿಟಿವ್
ಮೆಲ್ಬರ್ನ್​ ಕ್ರಿಕೆಟ್ ಗ್ರೌಂಡ್
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 06, 2021 | 7:40 PM

Share

ಅಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಸದಸ್ಯರು ಕೊಂಚ ವಿಚಲಿತರಾಗಬಹುದಾದ ಸಂಗತಿಯೊಂದು ಮೆಲ್ಬರ್ನ್​ನಲ್ಲಿ ವರದಿಯಾಗಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಿದ ವ್ಯಕ್ತಿಯೊಬ್ಬನಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮೆಲ್ಬರ್ನ್ ಕ್ರಿಕೆಟ್ ಕ್ಲಬ್ (ಎಮ್​ಸಿಸಿ) ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 27ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ (ಎಮ್​ಸಿಜಿ) ಭಾರತ ಮತ್ತು ಆಸ್ಟ್ರೇಲಿಯಾಗಳ ನಡುವೆ ನಡೆದ ಎರಡನೇ ಟೆಸ್ಟ್​ನ ಎರಡನೇ ದಿನದಾಟವನ್ನು ನೋಡಿದವರೆಲ್ಲ ಕೊವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದೆ.

‘ಡಿಸೆಂಬರ್ 27ರ ರವಿವಾರದಂದು ಎಮ್​ಸಿಜಿ ಜೋನ್ 5ರ ದಿ ಗ್ರೇಟರ್ ಸದರ್ನ್ ಸ್ಟ್ಯಾಂಡ್​ನಲ್ಲಿ ಮಧ್ಯಾಹ್ನ 12.30ರಿಂದ 3.30ರ ನಡುವಿನ ಸಮಯದಲ್ಲಿ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್​ ಪಂದ್ಯದ ಎರಡನೇ ದಿನದಾಟವನ್ನು ವೀಕ್ಷಿಸಿದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಆ ಸಮಯದಲ್ಲಿ ಪಂದ್ಯ ವೀಕ್ಷಿಸಿದ ವ್ಯಕ್ತಿಯೊಬ್ಬನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಆ ಭಾಗದಲ್ಲಿ ಕುಳಿತು ಪಂದ್ಯ ನೋಡಿದವರು ಕೂಡಲೆ ಟೆಸ್ಟ್​ ಮಾಡಿಸಿಕೊಳ್ಳಬೇಕು ಮತ್ತು ರಿಸಲ್ಟ್ ನೆಗೆಟಿವ್ ಎಂದು ಖಾತ್ರಿಯಾಗುವವರೆಗೆ ತಮ್ಮನ್ನು ಐಸೊಲೇಟ್ ಮಾಡಿಕೊಳ್ಳಬೇಕು’ ಎಂದು ಎಮ್​ಸಿಸಿಯ ಅಧಿಕೃತ ಹೇಳಿಕೆ ತಿಳಿಸುತ್ತದೆ.

ಟೀಮ್ ಇಂಡಿಯಾದ ಸದಸ್ಯರು ಸಮಾಧಾನಪಟ್ಟುಕೊಳ್ಳಬಹುದಾದ ಅಂಶವೇನೆಂದರೆ ಅವರು ಮೆಲ್ಬರ್ನ್​ನಿಂದ ಸಿಡ್ನಿ ತಲುಪಿದ ಮೇಲೆ ಟೆಸ್ಟ್ ಮಾಡಲಾಗಿದ್ದು ಅವರೆಲ್ಲರ ರಿಸಲ್ಟ್ ನೆಗೆಟಿವ್ ಬಂದಿದೆ.

ಎಮ್​ಸಿಜಿಯಲ್ಲಿ ಸ್ಟೀವ್ ಸ್ಮಿತ್ ವಿಕೆಟ್​ ಪಡೆದು ಸಂಭ್ರಮಿಸುತ್ತಿರುವ ರವಿಚಂದ್ರನ್ ಅಶ್ವಿನ್

ಕೊವಿಡ್-19 ಪಿಡುಗಿನ ಕರಾಳ ಛಾಯೆ ಆಸ್ಟ್ರೇಲಿಯಾವನ್ನು ಬೆಂಬಿಡದೆ ಕಾಡುತ್ತಿರುವಂತಿದೆ. ಅಲ್ಲಿನ ಸರ್ಕಾರಗಳು ಸಾಕಷ್ಟು ಮುಂಜಾಗ್ರತೆಯ ಕ್ರಮಗಳನ್ನು ತೆಗೆದುಕೊಂಡರೂ ಅಲ್ಲಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತಲೆದೋರುತ್ತಿವೆ. ಎಮ್​ಸಿಜಿಯನ್ನು ಪ್ರತಿದಿನದ ಆಟ ಕೊನೆಗೊಂಡ ನಂತರ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿತ್ತು ಎಂದು ಎಮ್​ಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

‘ಸೋಂಕಿತ ವ್ಯಕ್ತಿ ಪಂದ್ಯ ನೋಡುವಾಗ ಆತನಿಗೆ ಅದರ ಅರಿವಿರಲಿಲ್ಲ. ವಿಷಯ ನಮ್ಮ ಗಮನಕ್ಕೆ ಬಂದ ನಂತರ ನಾವು ಇಡೀ ಸ್ಟೇಡಿಯಂನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದೇವೆ ಮತ್ತ ಪ್ರತಿನಿತ್ಯ ಅ ಕೆಲಸ ಜಾರಿಯಲ್ಲಿದೆ. ಪಂದ್ಯ ನಡೆಯುವಾಗಲೂ ಸ್ಟೇಡಿಯಂನ್ನು ದಿನದಾಟ ಕೊನೆಗೊಂಡ ನಂತರ ಸ್ಯಾನಿಟೈಸ್ ಮಾಡಲಾಗುತಿತ್ತು. ಮೈದಾನದ ಸುತ್ತ 275 ಸ್ಯಾನಿಟೈಸ್ ಕೇಂದ್ರಗಳನ್ನು ನಿರ್ಮಿಸಲಾಗಿತ್ತು,’ ಅಂತ ಎಮ್​ಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಏತನ್ಮಧ್ಯೆ, ನ್ಯೂ ಸೌತ್ ವೇಲ್ಸ್ ಸರ್ಕಾರವು ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವೆ ಸಿಡ್ನಿಯಲ್ಲಿ ಆರಂಭವಾಗಲಿರುವ ಮೂರನೆ ಟೆಸ್ಟ್​ ವೀಕ್ಷಿಸಲು ಎಸ್​ಸಿಜಿಗೆ ಬರುವ ಪ್ರತಿಯೊಬ್ಬ ವ್ಯಕ್ತಿ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕೆಂದು ಹೇಳಿದೆ.

India vs Australia Test Series | 3ನೇ ಟೆ​ಸ್ಟ್​ಗೆ ಭಾರತ ತಂಡ ಪ್ರಕಟ; ಟೆಸ್ಟ್ ಕ್ರಿಕೆಟ್​ಗೆ ಸೈನಿ​ ಪಾದಾರ್ಪಣೆ

Published On - 5:26 pm, Wed, 6 January 21

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!