3 ಪಂದ್ಯಗಳಲ್ಲಿ 452 ರನ್: ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಎಡಗೈ ದಾಂಡಿಗ

India vs Australia Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಇನ್ನುಳಿದ ಎರಡು ಪಂದ್ಯಗಳು ಡಿಸೆಂಬರ್ 26 ಮತ್ತು ಜನವರಿ 3 ರಿಂದ ಶುರುವಾಗಲಿದೆ.

3 ಪಂದ್ಯಗಳಲ್ಲಿ 452 ರನ್: ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಎಡಗೈ ದಾಂಡಿಗ
Alex Carey
Follow us
ಝಾಹಿರ್ ಯೂಸುಫ್
|

Updated on: Nov 20, 2024 | 9:05 AM

ನವೆಂಬರ್ 22 ರಿಂದ ಶುರುವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಭರ್ಜರಿ ಸಿದ್ಧತೆಯಲ್ಲಿದೆ. ಈ ಸರಣಿ ಗೆಲ್ಲಲು ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್ ಮತ್ತು ರಿಷಭ್ ಪಂತ್ ಅವರನ್ನು ಟಾರ್ಗೆಟ್ ಮಾಡುವುದರಲ್ಲಿ ಅನುಮಾನವೇ ಇಲ್ಲ. ಇತ್ತ ಟೀಮ್ ಇಂಡಿಯಾ ಪಾಲಿಗೆ ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಹಾಗೂ ಮಾರ್ನಸ್ ಲಾಬುಶೇನ್ ವಿಕೆಟ್​ಗಳು ನಿರ್ಣಾಯಕ.

ಈ ಮೂರು ವಿಕೆಟ್​ಗಳನ್ನು ಕಬಳಿಸಲು ಭರ್ಜರಿ ಪ್ಲ್ಯಾನ್ ರೂಪಿಸಿರುವ ಟೀಮ್ ಇಂಡಿಯಾಗೆ ಇದೀಗ ಅಲೆಕ್ಸ್ ಕ್ಯಾರಿಯ ಫಾರ್ಮ್ ಹೊಸ ಚಿಂತೆಯನ್ನು ಉಂಟು ಮಾಡಿದೆ. ಏಕೆಂದರೆ ಕ್ಯಾರಿ ಅದ್ಭುತ ಫಾರ್ಮ್​​ನಲ್ಲಿದ್ದು, ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಸ್ಟ್ರೇಲಿಯಾಗೆ ಆಧಾರಸ್ತಂಭವಾಗುವ ಸಾಧ್ಯತೆಯಿದೆ.

ಎರಡು ತಿಂಗಳ ಹಿಂದೆಯಷ್ಟೇ ಇಂಗ್ಲೆಂಡ್ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕ್ಯಾರಿ ಇದೀಗ ಆಸ್ಟ್ರೇಲಿಯಾದ ದೇಶೀಯ ಪ್ರಥಮ ದರ್ಜೆ ಟೂರ್ನಿ ಶೆಫೀಲ್ಡ್ ಶೀಲ್ಡ್​ನಲ್ಲೂ ಉತ್ತಮ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಸಿದ್ಧತೆಗಾಗಿ ಸೌತ್ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿರುವ ಕ್ಯಾರಿ ಕೇವಲ 3 ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ 90 ರ ಸರಾಸರಿಯಲ್ಲಿ 452 ರನ್ ಕಲೆಹಾಕಿದ್ದಾರೆ.

ಈ ವೇಳೆ ಅಲೆಕ್ಸ್ ಕ್ಯಾರಿ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿದೆ. ಅಲ್ಲದೆ 6 ಇನಿಂಗ್ಸ್​ಗಳಲ್ಲಿ ಕ್ರಮವಾಗಿ 90, 111, 42, 123*, 44, 42 ರನ್ ಕಲೆಹಾಕಿದ್ದಾರೆ. ಅಂದರೆ ಕಳೆದ ಆರು ಇನಿಂಗ್ಸ್​ಗಳಲ್ಲಿ ಅಲೆಕ್ಸ್ ಕ್ಯಾರಿ 40 ಕ್ಕಿಂತ ಕಡಿಮೆ ಸ್ಕೋರ್​ಗಳಿಸಿಲ್ಲ ಎಂಬುದು ವಿಶೇಷ.

ಈ ಪ್ರಚಂಡ ಫಾರ್ಮ್​ ಟೀಮ್ ಇಂಡಿಯಾ ಪಾಲಿಗೆ ಮುಳುವಾಗುವ ಸಾಧ್ಯತೆಯಿದೆ. ಏಕೆಂದರೆ ಭಾರತದ ವಿರುದ್ಧದ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆಯುವುದು ಖಚಿತ. ಅತ್ತ ಟಾಪ್ ಆರ್ಡರ್​​ನಲ್ಲಿ ಉಸ್ಮಾನ್ ಖ್ವಾಜಾ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್ ಮತ್ತು ಟ್ರಾವಿಸ್ ಹೆಡ್ ಇದ್ದರೆ, ಇದೀಗ ಮಧ್ಯಮ ಕ್ರಮಾಂಕದಲ್ಲಿ ಇನ್ ಫಾರ್ಮ್​ನಲ್ಲಿರುವ ಕ್ಯಾರಿ ಬ್ಯಾಟ್ ಬೀಸಲಿದ್ದಾರೆ.

ಅಲೆಕ್ಸ್​ ಕ್ಯಾರಿಯ ಈ ಭರ್ಜರಿ ಫಾರ್ಮ್​​ ಇದೀಗ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಚಿಂತೆಯನ್ನು ದೂರ ಮಾಡಿದೆ. ಏಕೆಂದರೆ ಒಂದೆಡೆ ಕ್ಯಾರಿ ಕ್ರೀಸ್ ಕಚ್ಚಿ ನಿಂತರೆ, ಪ್ಯಾಟ್ ಕಮಿನ್ಸ್ ಸೇರಿದಂತೆ ಬೌಲರ್​ಗಳು ಕೂಡ ಕೆಳ ಕ್ರಮಾಂಕದಲ್ಲಿ ಸಾಥ್ ನೀಡಲಿದ್ದಾರೆ. ಅದರಲ್ಲೂ ಸಂದರ್ಭಕ್ಕೆ ತಕ್ಕಂತೆ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿರುವ ಕ್ಯಾರಿ ಬಿರುಸಿನ ಬ್ಯಾಟಿಂಗ್​ಗೂ ಹೆಸರುವಾಸಿ. ಹೀಗಾಗಿ ಯಾವುದೇ ಸಂದರ್ಭದಲ್ಲೂ ಪಂದ್ಯದ ಗತಿ ಬದಲಿಸಬಲ್ಲ ಆಟಗಾರ.

ಇದನ್ನೂ ಓದಿ: ಪಾಕಿಸ್ತಾನ್ ವಿರುದ್ಧ ಆಸ್ಟ್ರೇಲಿಯಾಗೆ ದಾಖಲೆ ವಿಜಯ

ಹೀಗಾಗಿಯೇ ಇದೀಗ ಅಲೆಕ್ಸ್ ಕ್ಯಾರಿಯ ಭರ್ಜರಿ ಫಾರ್ಮ್​ನಿಂದ ಆಸ್ಟ್ರೇಲಿಯಾ ತಂಡವು ಫುಲ್ ಖುಷಿಯಲ್ಲಿದೆ. ಆದರೆ ಮತ್ತೊಂದೆಡೆ ಸ್ಟಾರ್ ಆಟಗಾರರಿಗೆ ಪ್ಲ್ಯಾನ್ ರೂಪಿಸಿದ್ದ ಟೀಮ್ ಇಂಡಿಯಾ ಇದೀಗ ಅಲೆಕ್ಸ್ ಕ್ಯಾರಿಯನ್ನು ಕಟ್ಟಿ ಹಾಕಲು ವಿಶೇಷ ಯೋಜನೆ ರೂಪಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ