Khelo India University Games: ಇಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಚಾಲನೆ

ಜೈನ್ ಕ್ಯಾಂಪಸ್ ಜೊತೆಗೆ ಕಂಠೀರವ ಸ್ಟೇಡಿಯಂ, ಹಾಕಿ ಸ್ಟೇಡಿಯಂ ಮತ್ತು ಸಾಯಿ ಸೌತ್ ಸೆಂಟರ್ ಅನ್ನು ಕ್ರೀಡಾಕೂಟದ ಸ್ಥಳವಾಗಿ ಆಯ್ಕೆ ಮಾಡಲಾಗಿದೆ.

Khelo India University Games: ಇಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಚಾಲನೆ
Khelo India University Games
Follow us
TV9 Web
| Updated By: Vinay Bhat

Updated on:Apr 24, 2022 | 9:57 AM

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ (Khelo India University Games) ಎರಡನೇ ಆವೃತ್ತಿಗೆ ಭಾನುವಾರ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪ್ರಶಸ್ತಿಗಳನ್ನು ಗೆದ್ದ ಕರ್ನಾಟಕದ ಅಗ್ರಮಾನ್ಯ ಕ್ರೀಡಾಪಟುಗಳಾದ ಪ್ರಕಾಶ್ ಪಡುಕೋಣೆ, ಪಂಕಜ್ ಅಡ್ವಾಣಿ, ಅಂಜು ಬಾಬಿ ಜಾರ್ಜ್, ರೀತ್ ಅಬ್ರಹಾಂ, ಅಶ್ವಿನಿ ನಾಚಪ್ಪ ಸೇರಿದಂತೆ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಭಾರತದ ಮುಂದಿನ ಪೀಳಿಗೆಯ ಕ್ರೀಡಾ ತಾರೆಗಳನ್ನು ಪರಿಚಯಿಸಲಿರುವ ಈ 10 ದಿನಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸುನೀಲ್ ಜೋಶಿ , ಎಚ್‌ಎನ್ ಗಿರೀಶ ಮತ್ತು ವಿಆರ್ ರಘುನಾಥ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜೈನ್ ಕ್ಯಾಂಪಸ್ ಜೊತೆಗೆ ಶ್ರೀ ಕಂಠೀರವ ಸ್ಟೇಡಿಯಂ, ಹಾಕಿ ಸ್ಟೇಡಿಯಂ ಮತ್ತು ಸಾಯಿ ಸೌತ್ ಸೆಂಟರ್ ಅನ್ನು ಕ್ರೀಡಾಕೂಟದ ಸ್ಥಳವಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯದ ಸಾರವನ್ನು ಪ್ರತಿಬಿಂಬಿಸುವ ವಿಶೇಷವಾಗಿ ನೃತ್ಯ ಸಂಯೋಜನೆಯ ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ಟೆಕ್ ಹಬ್ ಅನ್ನು ಪ್ರದರ್ಶಿಸುವ ಲೇಸರ್ ಶೋ ಉದ್ಘಾಟನಾ ಸಮಾರಂಭದ ಮುಖ್ಯಾಂಶಗಳಾಗಿವೆ ಎಂದು ಸಚಿವರು ಹೇಳಿದರು.

ಕ್ರೀಡಾಪಟುಗಳ ಪರವಾಗಿ ಒಲಿಂಪಿಯನ್ ಈಜುಪಟು ಶ್ರೀಹರಿ ನಟರಾಜ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಘಾಟನಾ ಸಮಾರಂಭವು ಆಹ್ವಾನಿತರಿಗೆ ಸೀಮಿತವಾಗಿರುವುದರಿಂದ, ಸಾರ್ವಜನಿಕರು ಇದನ್ನು ಕ್ರೀಡಾಂಗಣದ ಹೊರಗಿನ ದೈತ್ಯ ಪರದೆಯಲ್ಲಿ ವೀಕ್ಷಿಸಬಹುದು. ಉದ್ಘಾಟನಾ ಸಮಾರಂಭವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಬ್ಯಾಡ್ಮಿಂಟನ್, ಬ್ಯಾಸ್ಕೆಟ್‌ಬಾಲ್, ಶೂಟಿಂಗ್ ಮತ್ತು ವಾಲಿಬಾಲ್‌ನಲ್ಲಿ ಪ್ರಾಥಮಿಕ ಸುತ್ತುಗಳೊಂದಿಗೆ ಸುಮಾರು 800 ಮಂದಿ ವಿಶ್ವ ವಿದ್ಯಾಯಲಯದ ಕ್ರೀಡಾಪಟುಗಳು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಭಾಗವಹಿಸಲಿದ್ದಾರೆ.

ವಿಶೇಷ ಸೈಕಲ್ ಜಾಥ: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಪ್ರಯುಕ್ತ ಭಾನುವಾರ 25 ಕಿ.ಮೀ ಸೈಕಲ್ ಜಾಥ ಕೂಡ ಇರಲಿದೆ. ಈ ಜಾಥ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಿಂದ ಬೆಳಿಗ್ಗೆ 8.30 ಕ್ಕೆ ಶುರುವಾಗಲಿದೆ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 10:39 pm, Sat, 23 April 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್