AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

149 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಕಂಡರಿಯದ ದಾಖಲೆ ಬರೆದ ವಿಂಡೀಸ್ ದಾಂಡಿಗರು

ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ಅದ್ಭುತ ಇನಿಂಗ್ಸ್ ಒಂದಕ್ಕೆ ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನ ಸಾಕ್ಷಿಯಾಗಿದೆ. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೇವಲ ತಮ್ಮ 3ನೇ ಟೆಸ್ಟ್ ಇನಿಂಗ್ಸ್ ಆಡುತ್ತಿದ್ದ 28 ವರ್ಷದ ವಿಕೆಟ್‌ಕೀಪರ್ ಬ್ಯಾಟರ್ ಅಮೀರ್ ಜಾಂಗೂ, ನಾಯಕ ರೋಸ್ಟನ್ ಚೇಸ್ ಜೊತೆಗೂಡಿ ಕ್ರಿಕೆಟ್ ಜಗತ್ತೇ ನಿಬ್ಬೆರಗಾಗುವಂತಹ ಸಾರ್ವಕಾಲಿಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

149 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಕಂಡರಿಯದ ದಾಖಲೆ ಬರೆದ ವಿಂಡೀಸ್ ದಾಂಡಿಗರು
West IndiesImage Credit source: GettyImages
ಝಾಹಿರ್ ಯೂಸುಫ್
|

Updated on: Jun 28, 2026 | 8:41 AM

Share

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ವೆಸ್ಟ್ ಇಂಡೀಸ್ ತಂಡದ ದಾಂಡಿಗ ಅಮೀರ್ ಜಾಂಗೂ ಮತ್ತು ನಾಯಕ ರೋಸ್ಟನ್ ಚೇಸ್. ಅದು ಕೂಡ 6ನೇ ವಿಕೆಟ್​ಗೆ ಅತ್ಯದ್ಭುತ ಜೊತೆಯಾಟವಾಡುವ ಮೂಲಕ.  ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ ಪ್ರಥಮ ಇನಿಂಗ್ಸ್​ನಲ್ಲಿ 308 ರನ್​ ಕಲೆಹಾಕಿದ್ದರು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಪರ ಅಮೀರ್ ಜಾಂಗೂ ಹಾಗೂ ರೋಸ್ಟನ್ ಚೇಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಬ್ಯಾಟಿಂಗ್​ನೊಂದಿಗೆ ಈ ಜೋಡಿಯು 6ನೇ ವಿಕೆಟ್​ಗೆ ಬರೋಬ್ಬರಿ 401 ರನ್​ ಪೇರಿಸಿದರು. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ 6ನೇ ವಿಕೆಟ್​ಗೆ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಬೆನ್ ಸ್ಟೋಕ್ಸ್ ಮತ್ತು ಜಾನಿ ಬೈರ್‌ಸ್ಟೋವ್ ಜೋಡಿ ಹೆಸರಿನಲ್ಲಿತ್ತು. 2016 ರಲ್ಲಿ ಸ್ಟೋಕ್ಸ್ ಹಾಗೂ ಬೈರ್​ಸ್ಟೋವ್ 6ನೇ ವಿಕೆಟ್​ಗೆ 399 ರನ್ ಸೇರಿಸಿದ್ದು ಇದುವರೆಗಿನ ಸಾರ್ವಕಾಲಿಕ ದಾಖಲೆಯಾಗಿತ್ತು.

ಇದೀಗ ಆರನೇ ವಿಕೆಟ್​ಗೆ 401 ರನ್​ಗಳ ಜೊತೆಯಾಟವಾಡುವ ಮೂಲಕ ಅಮೀರ್ ಜಾಂಗೂ ಹಾಗೂ ರೋಸ್ಟನ್ ಚೇಸ್ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಆರನೇ ವಿಕೆಟ್​ಗೆ 400+ ರನ್​ಗಳ ಜೊತೆಯಾಟವಾಡಿದ ಮೊದಲ ಜೋಡಿ ಎನಿಸಿಕೊಂಡಿದ್ದಾರೆ. ಈ ಮೂಲಕ 149 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಬೃಹತ್ ಮೊತ್ತ ಪೇರಿಸಿದ ವೆಸ್ಟ್ ಇಂಡೀಸ್:

ಶ್ರೀಲಂಕಾ ತಂಡ 308 ರನ್​ಗಳ ಪ್ರಥಮ ಇನಿಂಗ್ಸ್​ಗೆ ಉತ್ತರವಾಗಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ವೆಸ್ಟ್ ಇಂಡೀಸ್ ಬರೋಬ್ಬರಿ 626 ರನ್ ಕಲೆಹಾಕಿದೆ.

  • ಈ ಪಂದ್ಯದಲ್ಲಿ 373 ಎಸೆತಗಳನ್ನು ಎದುರಿಸಿದ ಅಮೀರ್ ಜಾಂಗೂ 3 ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 233 ರನ್ ಕಲೆಹಾಕಿದ್ದಾರೆ.
  • ಮತ್ತೊಂದೆಡೆ ಜಾಂಗೂಗೆ ಉತ್ತಮ ಸಾಥ್ ನೀಡಿದ ರೋಸ್ಟನ್ ಚೇಸ್ 324 ಎಸೆತಗಳಲ್ಲಿ 193 ರನ್ ಕಲೆಹಾಕಿದ್ದಾರೆ.

ಇದನ್ನೂ ಓದಿ: ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ..!

ಈ ಮೂಲಕ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 318 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಶ್ರೀಲಂಕಾ ತಂಡವು 3ನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 15 ರನ್ ಕಲೆಹಾಕಿದೆ. ಅಲ್ಲದೆ 303 ರನ್​ಗಳ ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!