AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಅನಿಲ್ ಕುಂಬ್ಳೆಗೆ ವಿಶೇಷ ಗೌರವ; 2028ರ ಒಲಿಂಪಿಕ್ಸ್ ಕ್ರಿಕೆಟ್ ಬಗ್ಗೆಯೂ ಚರ್ಚೆ

ಅನಿಲ್ ಕುಂಬ್ಳೆ ಅವರಿಗೆ ಅಮೆರಿಕದಲ್ಲಿ ವಿಶೇಷ ಗೌರವ ನೀಡಲಾಗಿದೆ. ಕ್ಯಾಲಿಫೋರ್ನಿಯಾದ ಸದರ್ನ್ ಕ್ಯಾಲಿಫೋರ್ನಿಯಾ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಯುಎಸ್‌ನಲ್ಲಿ ಕ್ರಿಕೆಟ್ ಬೆಳವಣಿಗೆಯನ್ನು ಶ್ಲಾಘಿಸಿದರು. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ 128 ವರ್ಷಗಳ ಬಳಿಕ ಕ್ರಿಕೆಟ್ ಮರಳುತ್ತಿದ್ದು, ಇದು ಅಮೆರಿಕದಲ್ಲಿ ಆಟದ ಜನಪ್ರಿಯತೆಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ಅಮೆರಿಕದಲ್ಲಿ ಅನಿಲ್ ಕುಂಬ್ಳೆಗೆ ವಿಶೇಷ ಗೌರವ; 2028ರ ಒಲಿಂಪಿಕ್ಸ್ ಕ್ರಿಕೆಟ್ ಬಗ್ಗೆಯೂ ಚರ್ಚೆ
Anil Kumble
ಪೃಥ್ವಿಶಂಕರ
|

Updated on: Nov 29, 2026 | 7:53 PM

Share

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಅಮೆರಿಕದಲ್ಲಿ ವಿಶೇಷ ಗೌರವ ನೀಡಲಾಗಿದೆ. ಕ್ಯಾಲಿಫೋರ್ನಿಯಾದ ಮಾಂಟೆಬೆಲ್ಲೊದಲ್ಲಿ ನಡೆದ ಸದರ್ನ್ ಕ್ಯಾಲಿಫೋರ್ನಿಯಾ ಕ್ರಿಕೆಟ್ ಅಸೋಸಿಯೇಷನ್​ನ 82ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲಾಸ್ ಏಂಜಲೀಸ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಡಾ. ಕೆ.ಜೆ. ಶ್ರೀನಿವಾಸ ಕೂಡ ಈ ಕಾರ್ಯಕ್ರಮದಲ್ಲಿ ಕುಂಬ್ಳೆ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಸ್ಥಳೀಯ ಕ್ರಿಕೆಟಿಗರು, ತಂಡಗಳು ಹಾಗೂ ಕ್ರಿಕೆಟ್ ಬೆಳವಣಿಗೆಗೆ ಶ್ರಮಿಸಿದ ಸ್ವಯಂಸೇವಕರ ಸಾಧನೆಯನ್ನು ಗುರುತಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಮೆರಿಕದಲ್ಲಿ ದಿನದಿಂದ ದಿನಕ್ಕೆ ಕ್ರಿಕೆಟ್ ಜನಪ್ರಿಯತೆ ಹೆಚ್ಚುತ್ತಿರುವುದನ್ನು ಈ ಸಮಾರಂಭದಲ್ಲಿ ಸಂಭ್ರಮಿಸಲಾಯಿತು. ದಕ್ಷಿಣ ಕ್ಯಾಲಿಫೋರ್ನಿಯಾದ ವಿವಿಧ ಭಾಗಗಳಿಂದ ಕ್ರಿಕೆಟ್ ಅಭಿಮಾನಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದರು.

ಕ್ರಿಕೆಟ್ ಅಭಿವೃದ್ಧಿಗೆ ವಿಶೇಷ ಯೋಜನೆಗೆ ಕರೆ

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾರತದ ಕಾನ್ಸುಲ್ ಜನರಲ್ ಡಾ. ಕೆ.ಜೆ. ಶ್ರೀನಿವಾಸ, ಅಮೆರಿಕದಲ್ಲಿ ಕ್ರಿಕೆಟ್ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು. ಕ್ರಿಕೆಟ್ ಆಟಗಾರರಲ್ಲಿ ಶಿಸ್ತು, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಇಂತಹ ಯೋಜನೆ ಸಹಕಾರಿಯಾಗಲಿದೆ. ಕ್ರಿಕೆಟ್ ಆಟದ ಮೂಲ ಸಂಪ್ರದಾಯಗಳನ್ನು ಉಳಿಸಿಕೊಂಡು ಮುಂದಿನ ಪೀಳಿಗೆಯ ಆಟಗಾರರನ್ನು ಬೆಳೆಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಕುರಿತು ಲಾಸ್ ಏಂಜಲೀಸ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕಚೇರಿ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಅನಿಲ್ ಕುಂಬ್ಳೆ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಕ್ರಿಕೆಟಿಗರ ಸಾಧನೆ ಹಾಗೂ ಅಮೆರಿಕದಲ್ಲಿ ಕ್ರಿಕೆಟ್ ಬೆಳೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ತಿಳಿಸಿದೆ.

128 ವರ್ಷಗಳ ಬಳಿಕ ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ

ಇನ್ನು ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕಾದಿದೆ. 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮತ್ತೆ ಸ್ಥಾನ ಪಡೆಯಲಿದೆ. ಬರೋಬ್ಬರಿ 128 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. 1900ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕೊನೆಯ ಬಾರಿಗೆ ಕ್ರಿಕೆಟ್ ಆಡಿಸಲಾಗಿತ್ತು. ಇದೀಗ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.

IND vs SA: ‘ನೀವು ಆತ್ಮಾವಲೋಕನ ಮಾಡಿಕೊಳ್ಳಬೇಕು’; ಗಂಭೀರ್ ತಂತ್ರವನ್ನು ಪ್ರಶ್ನಿಸಿದ ಕುಂಬ್ಳೆ

2 ವಿಭಾಗದಲ್ಲಿ ತಲಾ 6 ತಂಡಗಳು

ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ತಲಾ ಆರು ತಂಡಗಳು ಕಣಕ್ಕಿಳಿಯಲಿವೆ. ಪ್ರತಿ ತಂಡದಲ್ಲಿ ಗರಿಷ್ಠ 15 ಆಟಗಾರರಿಗೆ ಅವಕಾಶ ಸಿಗಲಿದೆ. ಎರಡೂ ವಿಭಾಗಗಳಿಗೆ ತಲಾ 90 ಆಟಗಾರರ ಕೋಟಾ ನಿಗದಿಪಡಿಸಲಾಗಿದೆ. ಪುರುಷರ ಮತ್ತು ಮಹಿಳೆಯರ ಪಂದ್ಯಾವಳಿಗಳನ್ನು ಸೇರಿಸಿ ಒಟ್ಟು 28 ಪಂದ್ಯಗಳು ನಡೆಯಲಿವೆ. ಹೀಗೆ 128 ವರ್ಷಗಳ ಬಳಿಕ ಒಲಿಂಪಿಕ್ಸ್‌ಗೆ ಕ್ರಿಕೆಟ್ ಮರಳುತ್ತಿರುವುದು ವಿಶ್ವದ ಕ್ರಿಕೆಟ್ ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ