FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!

FIFA World Cup 2022 Argentina Vs Croatia Report: ಸೆಮಿಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿದ ಅರ್ಜೆಂಟೀನಾ 6ನೇ ಬಾರಿಗೆ ಫಿಪಾ ವಿಶ್ವಕಪ್ ಫೈನಲ್ ಪ್ರವೇಶಿಸಿದೆ.

FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!
argentina vs croatia
Follow us
TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 7:59 AM

ಕತಾರ್‌ನಲ್ಲಿ ನಡೆಯುತ್ತಿರುವ ಫುಟ್‌ಬಾಲ್ ವಿಶ್ವಕಪ್‌ನ (FIFA World Cup 2022) ಮೊದಲ ಸೆಮಿಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಅರ್ಜೆಂಟೀನಾ ಎಂಟು ವರ್ಷಗಳ ನಂತರ ಫೈನಲ್‌ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು (Argentina beat Croatia) 3-0 ಗೋಲುಗಳ ಅಂತರದಿಂದ ಮಣಿಸಿದ ಅರ್ಜೆಂಟೀನಾ 6ನೇ ಬಾರಿಗೆ ಫಿಪಾ ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ತಂಡದ ಪರ ಲಿಯೋನೆಲ್ ಮೆಸ್ಸಿ (Lionel Messi) ಒಂದು ಗೋಲು ಹಾಗೂ ಜೂಲಿಯಾನ್​ ಅಲ್ವಾರೆಜ್ (Julian Alvarez) ಎರಡು ಗೋಲು ಬಾರಿಸಿ ಗೆಲುವಿನ ಹೀರೋ ಎನಿಸಿಕೊಂಡರು. ಇದಕ್ಕೂ ಮೊದಲು 2014ರಲ್ಲಿ ಅರ್ಜೆಂಟೀನಾ ಫೈನಲ್ ತಲುಪಿತ್ತಾದರೂ ಅಲ್ಲಿ ಜರ್ಮನಿ ವಿರುದ್ಧ ಸೋತು ಚಾಂಪಿಯನ್ ಪಟ್ಟಕ್ಕೇರುವ ಅವಕಾಶವನ್ನು ಕಳೆದುಕೊಂಡಿತ್ತು. ಈಗ ಡಿಸೆಂಬರ್ 18 ರಂದು ನಡೆಯಲಿರುವ ಫೈನಲ್​ನಲ್ಲಿ, ಫ್ರಾನ್ಸ್ ಅಥವಾ ಮೊರಾಕೊ ನಡುವಿನ ಸೆಮಿಫೈನಲ್ ಪಂದ್ಯದ ವಿಜೇತ ತಂಡವನ್ನು ಅರ್ಜೆಂಟೀನಾ ಎದುರಿಸಲಿದೆ.

ಲಿಯೋನೆಲ್ ಮೆಸ್ಸಿಯ ಅದ್ಭುತ ಆಟದಿಂದ ಅರ್ಜೆಂಟೀನಾ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಮೆಸ್ಸಿ ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಎರಡನೇ ಬಾರಿಗೆ ಫೈನಲ್ ಆಡಲಿದೆ. ಇದಕ್ಕೂ ಮೊದಲು 2014 ರಲ್ಲಿ, ಮೆಸ್ಸಿ ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಫೈನಲ್​ಗೆ ಲಗ್ಗೆ ಇಟ್ಟಿತ್ತು. ಆದರೆ ಫೈನಲ್​ನಲ್ಲಿ ಜರ್ಮನಿ ಎದುರು ಸೋತಿದ್ದರಿಂದ ಪ್ರಶಸ್ತಿ ಎತ್ತಿಹಿಡಿಯಲು ಸಾಧ್ಯವಾಗಿರಲಿಲ್ಲ.

ಮೆಸ್ಸಿ ಅದ್ಭುತ ಪ್ರದರ್ಶನ

ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೆಸ್ಸಿ ಅದ್ಭುತ ಪ್ರದರ್ಶನ ನೀಡಿ, ಪಂದ್ಯದ 34ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ತಂಡಕ್ಕೆ ಮೊದಲ ಗೋಲು ದಾಖಲಿಸಿದರು. ಇದಾದ ಬಳಿಕ ಜೂಲಿಯನ್ ಅಲ್ವಾರೆಜ್ 39ನೇ ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸಿದರು. ನಂತರ ಆಟದ 69 ನೇ ನಿಮಿಷದಲ್ಲಿ ಜೂಲಿಯಾನ್​ ಅಲ್ವಾರೆಜ್ ಮತ್ತೊಂದು ಗೋಲು ಬಾರಿಸುವ ಮೂಲಕ ಕ್ರೊಯೇಷಿಯಾ ತಂಡವನ್ನು ಪಂದ್ಯದಿಂದಲೇ ಹೊರಹಾಕಿದರು.

ಫಿಫಾ ವಿಶ್ವಕಪ್​ನಿಂದ ಬ್ರೆಜಿಲ್ ಔಟ್; ಮೈದಾನದಲ್ಲೇ ಕಣ್ಣೀರಿಟ್ಟು ಶಾಕಿಂಗ್ ಹೇಳಿಕೆ ನೀಡಿದ ನೇಮಾರ್..!

ಅರ್ಜೆಂಟೀನಾ ಫೈನಲ್ ಇತಿಹಾಸ

ಫಿಫಾ ವಿಶ್ವಕಪ್​ನಲ್ಲಿ ಇದುವರೆಗೆ ಆರು ಬಾರಿ ಬಾರಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಅರ್ಜೆಂಟೀನಾ ಹಲವು ಏರುಪೇರುಗಳನ್ನು ಕಂಡಿದೆ. 1930 ರಲ್ಲಿ ನಡೆದ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಫೈನಲ್​ಗೆ ಲಗ್ಗೆ ಇಟ್ಟಿದ್ದ ಅರ್ಜೆಂಟೀನಾ, ಆ ಪಂದ್ಯದಲ್ಲಿ ಉರುಗ್ವೆ ವಿರುದ್ಧ ಸೋತು ಪ್ರಶಸ್ತಿ ಕೈಚೆಲ್ಲಿತ್ತು. ನಂತರ 1978 ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಮಣಿಸಿದ ಅರ್ಜೆಂಟೀನಾ ಮೊದಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿದಿತ್ತು. ಅದರ ನಂತರ 1986 ರಲ್ಲಿ ಫೈನಲ್​ ಆಡಿದ್ದ ಅರ್ಜೆಂಟೀನಾ, ಪಶ್ಚಿಮ ಜರ್ಮನಿಯನ್ನು 3-2 ಗೋಲುಗಳಿಂದ ಸೋಲಿಸಿ ಮತ್ತೊಮ್ಮೆ ಪ್ರಶಸ್ತಿ ಬಾಚಿಕೊಂಡಿತ್ತು. 1990 ರಲ್ಲಿ ಮತ್ತೊಮ್ಮೆ ಫೈನಲ್​ಗೆ ಪ್ರವೇಶಿಸಿದ್ದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳಿಂದ ಸೋಲಿಸುವುದರೊಂದಿಗೆ ಪಶ್ಚಿಮ ಜರ್ಮನಿ ಚಾಂಪಿಯನ್ ಪಟ್ಟಕ್ಕೇರಿತ್ತು. 1990 ರ ನಂತರ 2014 ರಲ್ಲಿ ಅಂದರೆ ಬರೋಬ್ಬರಿ 24 ವರ್ಷಗಳ ಬಳಿಕ ಫೈನಲ್​ಗೆ ಲಗ್ಗೆ ಇಟ್ಟಿದ್ದ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಜರ್ಮನಿ ವಿಶ್ವ ಸಾಮ್ರಾಟನಾಗಿ ಮೆರೆದಾಡಿತ್ತು.

ಸೋಲಿಗೆ ಸೇಡು ತೀರಿಸಿಕೊಂಡ ಅರ್ಜೆಂಟೀನಾ

ಈ ಗೆಲುವಿನೊಂದಿಗೆ ಅರ್ಜೆಂಟೀನಾ ಕಳೆದ ವಿಶ್ವಕಪ್‌ನಲ್ಲಿ ಕ್ರೊಯೇಷಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡಿದೆ. ರಷ್ಯಾದಲ್ಲಿ ನಡೆದ 2018 ರ ವಿಶ್ವಕಪ್‌ನ ಗುಂಪು ಸುತ್ತಿನಲ್ಲಿ ಕ್ರೊಯೇಷಿಯಾ ಅರ್ಜೆಂಟೀನಾವನ್ನು 3-0 ಗೋಲುಗಳಿಂದ ಸೋಲಿಸಿತ್ತು. ವಿಶ್ವಕಪ್‌ನಲ್ಲಿ ಕ್ರೊವೇಷಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಅರ್ಜೆಂಟೀನಾ ತಂಡ ಇದುವರೆಗೆ ಎರಡು ಬಾರಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 am, Wed, 14 December 22

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್