Asian Athletics Championships 2023: ಜಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಗೆದ್ದ ಹಾಸನದ ಡಿಪಿ ಮನು! ವಿಡಿಯೋ ನೋಡಿ

Asian Athletics Championships 2023: ಈ ಬಾರಿ ಕ್ರೀಡಾಕೂಟದಲ್ಲಿ ಭಾರತ ಪರ 6 ಚಿನ್ನ, 12 ಬೆಳ್ಳಿ, 9 ಕಂಚಿನ ಪದಕಗಳಿಗೆ ಮುತ್ತಿಟ್ಟ ಅಥ್ಲಿಟ್​ಗಳು ಪದಕಗಳ ಪಟ್ಟಿಯಲ್ಲಿ ಭಾರತಕ್ಕೆ 3ನೇ ಸ್ಥಾನ ತಂದುಕೊಟ್ಟಿದ್ದಾರೆ.

Asian Athletics Championships 2023: ಜಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಗೆದ್ದ ಹಾಸನದ ಡಿಪಿ ಮನು! ವಿಡಿಯೋ ನೋಡಿ
ಡಿಪಿ ಮನು (ಪ್ರಾತಿನಿಧಿಕ ಚಿತ್ರ)
Follow us
ಪೃಥ್ವಿಶಂಕರ
|

Updated on:Jul 17, 2023 | 10:15 AM

ಜುಲೈ 12 ರಿಂದ 16 ರವರೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸುಪಾಚಲ್ಸೈ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 25 ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ (Asian Athletics Championships 2023) ಭಾರತದ ಅಥ್ಲಿಟ್​ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಬಾರಿ ಕ್ರೀಡಾಕೂಟದಲ್ಲಿ ಭಾರತ ಪರ 6 ಚಿನ್ನ, 12 ಬೆಳ್ಳಿ, 9 ಕಂಚಿನ ಪದಕಗಳಿಗೆ ಮುತ್ತಿಟ್ಟ ಅಥ್ಲಿಟ್​ಗಳು ಪದಕಗಳ ಪಟ್ಟಿಯಲ್ಲಿ ಭಾರತಕ್ಕೆ 3ನೇ ಸ್ಥಾನ ತಂದುಕೊಟ್ಟಿದ್ದಾರೆ. ಈ ವರ್ಷ ಜಪಾನ್ 16 ಚಿನ್ನ, 11 ಬೆಳ್ಳಿ ಮತ್ತು 10 ಕಂಚಿನ ಪದಕ ಸೇರಿದಂತೆ ಒಟ್ಟು 37 ಪದಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡರೆ, ಚೀನಾ 8 ಚಿನ್ನ, 8 ಬೆಳ್ಳಿ ಮತ್ತು 6 ಕಂಚು ಸೇರಿದಂತೆ ಒಟ್ಟು 22 ಪದಕಗಳನ್ನು ಗೆದ್ದು 2ನೇ ಸ್ಥಾನ ಪಡೆದುಕೊಂಡಿತು.

ಈ ಹಿಂದೆ ಅಂದರೆ 2017ರ ಆವೃತ್ತಿಯಲ್ಲಿ 9 ಚಿನ್ನ, 6 ಬೆಳ್ಳಿ ಮತ್ತು 12 ಕಂಚಿನ ಪದಕ ಗೆದ್ದಿದ್ದ ಭಾರತ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತ್ತು. ಆ ಬಳಿಕ 2019ರಲ್ಲಿ ದೋಹಾದಲ್ಲಿ ನಡೆದಿದ್ದ ಆವೃತ್ತಿಯಲ್ಲಿ ಎರಡು ಚಿನ್ನ, ಏಳು ಬೆಳ್ಳಿ ಮತ್ತು ಏಳು ಕಂಚು ಸೇರಿದಂತೆ 16 ಪದಕಗಳನ್ನು ಗೆದ್ದಿದ್ದ ಭಾರತ, ಈ ಬಾರಿ ಪದಕಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿತ್ತಾದರೂ, ಪದಕಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲವಾಯಿತು.

ಬೆಳ್ಳಿ ಗೆದ್ದ ಡಿಪಿ ಮನು

ಇನ್ನು ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಭಾಗವಹಿಸಿದ್ದ ಹಾಸನದ ಹೆಮ್ಮೆಯ ಕುವರ ಡಿಪಿ ಮನು ಜಾವೆಲಿನ್ ಥ್ರೋ ವಿಭಾಗದಲ್ಲಿ 81.01 ಮೀ ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಒಲಂಪಿಕ್ಸ್ ಹೀರೋ ನೀರಜ್ ಚೋಪ್ರಾ ಅವರು ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಶಿಪ್‌ಗಾಗಿ ತಯಾರಿ ನಡೆಸುತ್ತಿರುವ ಕಾರಣ ಈ ಕ್ರೀಡಾಕೂಟದಿಂದ ಹಿಂದೆ ಸರಿದಿದ್ದರು. ಹೀಗಾಗಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಭರವಸೆಯಾಗಿದ್ದ ಮನು ಕೇವಲ 2 ಮೀಟರ್ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದರು.

ಸ್ವಲ್ಪದರಲ್ಲೇ ಚಿನ್ನದ ಪದಕ ಮಿಸ್

ಭಾನುವಾರದಂದು ನಡೆದ ಜಾವೆಲಿನ್ ಥ್ರೋ ಫೈನಲ್​ನಲ್ಲಿ ಮನು ವಾಸ್ತವವಾಗಿ ಮೊದಲ ಎಸೆತದ ನಂತರ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದರು. ಮೊದಲ ಸುತ್ತಿನಲ್ಲಿ 78.2 ಮೀ ದೂರ ಜಾವೆಲಿನ್ ಎಸೆದ ಮನು ಚಿನ್ನದ ಪದಕ ಸ್ಪರ್ಧೆಯಲ್ಲಿ ಮುನ್ನಡೆಯಲ್ಲಿದ್ದರು. ಎರಡನೇ ಸುತ್ತಿನಲ್ಲೂ ತಮ್ಮ ಪ್ರದರ್ಶನವನ್ನು ಸುಧಾರಿಸುವಲ್ಲಿ ಯಶಸ್ವಿಯಾದ ಮನು 79.83 ಮೀ ಎಸೆಯುವ ಮೂಲಕ ಚಿನ್ನದ ಪದಕದ ರೇಸ್​ನಲ್ಲಿ 2 ಮೀಟರ್‌ಗಳ ಮುನ್ನಡೆ ಕಾಯ್ದುಕೊಂಡರು. ಆದಾಗ್ಯೂ, ಜಪಾನ್‌ನ ರೋಡೆರಿಕ್ ಜೆಂಕೆ ಡೀನ್, ಮೂರನೇ ಸುತ್ತಿನಲ್ಲಿ 83.15 ಮೀ ದೂರ ಎಸೆಯುವ ಮೂಲಕ ಮನು ಅವರಿಂದ ಚಿನ್ನದ ಪದಕವನ್ನು ಕಿತ್ತುಕೊಂಡರು.

ಜಾವೆಲಿನ್ ಥ್ರೋ ವಿಭಾಗದಲ್ಲಿ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಹಾಸನದ ಮನು ಶೆಟ್ಟಿ!

ಕೊನೆಯ ಎಸೆತದಲ್ಲಿ ಮ್ಯಾಜಿಕ್

ಕೊನೆಯ ಸುತ್ತಿನಲ್ಲಿ ಪಾಕಿಸ್ತಾನದ ಮುಹಮ್ಮದ್ ಯಾಸಿರ್‌ ಅವರಿಂದ ಮನು ಕಠಿಣ ಸ್ಪರ್ಧೆಯನ್ನು ಎದುರಿಸಿದ್ದರಿಂದ ಸ್ಪರ್ಧೆಯು ರೋಮಾಂಚಕತೆ ಹೆಚ್ಚಿಸಿತು. ಕೊನೆಯ ಸುತ್ತಿನಲ್ಲಿ ಯಾಸಿರ್, 79.93 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಕ್ಷಣಮಾತ್ರದಲ್ಲಿ ಮನು ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದರು. ಆದಾಗ್ಯೂ, ಹೋರಾಟ ಬಿಡದ ಮನು ತಮ್ಮ ಆರನೇ ಪ್ರಯತ್ನದಲ್ಲಿ 81.01 ಮೀ ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಪ್ರಸಕ್ತ ಸೀಸನ್​ನಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ನಂತರ ಏಷ್ಯನ್ ಜಾವೆಲಿನ್ ಎಸೆತಗಾರರಲ್ಲಿ ಮನು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಪ್ರಸಕ್ತ ಸೀಸನ್​ನಲ್ಲಿ 84.33 ಮೀ. ದೂರ ಜಾವೆಲಿನ್ ಎಸೆದಿರುವುದು ಮನು ಅವರ ಅತ್ಯುತ್ತಮ ಪ್ರಯತ್ನವಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:12 am, Mon, 17 July 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್