ಜಪಾನ್ ಮಣಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್​ಗೆ ಲಗ್ಗೆ ಇಟ್ಟ ಭಾರತ ಹಾಕಿ ತಂಡ..!

Asian Champions Trophy 2023: ಭಾರತ ಹಾಕಿ ತಂಡ ಏಷ್ಯನ್ ಚಾಂಪಿಯನ್ ಆಗಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಚೆನ್ನೈನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಕಿ ತಂಡ, ಜಪಾನ್ ತಂಡವನ್ನು 0-5 ಅಂತರದಿಂದ ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಜಪಾನ್ ಮಣಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್​ಗೆ ಲಗ್ಗೆ ಇಟ್ಟ ಭಾರತ ಹಾಕಿ ತಂಡ..!
ಭಾರತ ಹಾಕಿ ತಂಡ
Follow us
ಪೃಥ್ವಿಶಂಕರ
|

Updated on:Aug 12, 2023 | 7:15 AM

ಭಾರತ ಹಾಕಿ ತಂಡ (Indian hockey team) ಏಷ್ಯನ್ ಚಾಂಪಿಯನ್ ಆಗಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಚೆನ್ನೈನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ (Asian Champions Trophy 2023) ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಕಿ ತಂಡ, ಜಪಾನ್ ತಂಡವನ್ನು (India vs Japan Hockey Match) 5-0 ಅಂತರದಿಂದ ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ವಾಸ್ತವವಾಗಿ ಈ ಪಂದ್ಯಾವಳಿಯ ಗುಂಪು ಹಂತದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಎರಡೂ ತಂಡಗಳಿಂದ ಸಮಬಲದ ಹೋರಾಟ ಕಂಡುಬಂದಿದ್ದರಿಂದ ಪಂದ್ಯ 1-1 ರಿಂದ ಡ್ರಾದಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಸೆಮಿಫೈನಲ್ ಪಂದ್ಯ ರೋಚಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಭಾರತದ ತಂತ್ರದ ಮುಂದೆ ಜಪಾನ್ ತಂಡದ ಆಟ ನಡೆಯಲಿಲ್ಲ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ (Team India) ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಫೈನಲ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಎದುರಿಸಲಿದೆ.

ಏಷ್ಯನ್ ಗೇಮ್ಸ್‌ಗೂ ಮುನ್ನ ನಡೆಯುತ್ತಿರುವ ಈ ಪಂದ್ಯಾವಳಿಯಲ್ಲಿ ಎರಡೂ ಸೆಮಿಫೈನಲ್ ಪಂದ್ಯಗಳು ಆಗಸ್ಟ್ 11 ಶುಕ್ರವಾರದಂದು ಚೆನ್ನೈನಲ್ಲಿ ನಡೆದವು. ಮೊದಲ ಸೆಮಿಫೈನಲ್‌ನಲ್ಲಿ ಮಲೇಷ್ಯಾ ಮತ್ತು ದಕ್ಷಿಣ ಕೊರಿಯಾ ಮುಖಾಮುಖಿಯಾಗಿದ್ದವು. 2021 ರಲ್ಲಿ ನಡೆದ ಹಿಂದಿನ ಚಾಂಪಿಯನ್‌ಶಿಪ್‌ನ ಪ್ರಶಸ್ತಿಯನ್ನು ಕೊರಿಯಾ ಗೆದ್ದಿತ್ತು. ಆದರೆ, ಈ ಬಾರಿ ತಂಡ ಫೈನಲ್‌ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಗ್ರೂಪ್ ಹಂತದಲ್ಲಿಯೇ ಮಲೇಷ್ಯಾವನ್ನು 1-0 ಅಂತರದಿಂದ ಸೋಲಿಸಿದ್ದ ಕೊರಿಯಾ ತಂಡ ಸೆಮಿಫೈನಲ್‌ನಲ್ಲಿ6-2 ಅಂತರದಿಂದ ಮಲೇಷ್ಯಾದೆದುರು ಸೋಲೊಪ್ಪಿಕೊಂಡಿತು.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ 2-7 ಅಂತರದ ಜಯ ಸಾಧಿಸಿದ ಭಾರತ ಹಾಕಿ ತಂಡ

ಭಾರತದ ಮುಂದೆ ಮಂಡಿಯೂರಿದ ಜಪಾನ್

ಮೂರು ಬಾರಿ ಏಷ್ಯನ್ ಚಾಂಪಿಯನ್ ಆಗಿರುವ ಭಾರತ ಹಾಗೂ ಪ್ರಸ್ತುತ ಏಷ್ಯನ್ ಗೇಮ್ಸ್ ಚಾಂಪಿಯನ್ ಜಪಾನ್ ಎದುರು ಎರಡನೇ ಸೆಮಿಫೈನಲ್ ಪಂದ್ಯ ನಡೆಯಿತು. ಆರಂಭದಲ್ಲಿ ಎರಡೂ ತಂಡಗಳು ಕೆಲವು ಅವಕಾಶಗಳನ್ನು ಸೃಷ್ಟಿಸಿದವು. ಆದರೆ ಎರಡೂ ತಂಡಗಳು ಗೋಲು ದಾಖಲಿಸುವಲ್ಲಿ ಯಶಸ್ವಿಯಾಗಲಿಲ್ಲ. ಭಾರತ ತಂಡವು ಆರಂಭದಿಂದಲೂ ಹೆಚ್ಚು ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಇದರ ಹೊರತಾಗಿಯೂ ಮೊದಲ ಕ್ವಾರ್ಟರ್‌ನಲ್ಲಿ ಯಾವುದೇ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ.

ಆದರೆ ಎರಡನೇ ಕ್ವಾರ್ಟರ್‌ನ ಆರಂಭದಲ್ಲಿ ಭಾರತದ ಪರ ಆಕಾಶದೀಪ್ 19ನೇ ನಿಮಿಷದಲ್ಲಿ ಗೋಲು ಬಾರಿಸಿ, ತಂಡದ ಖಾತೆ ತೆರೆದರು. ಇಲ್ಲಿಂದ ಗೋಲುಗಳ ಮಳೆ ಶುರುವಾಯಿತು. ಮುಂದಿನ 11 ನಿಮಿಷಗಳಲ್ಲಿ ಭಾರತ ಎರಡು ಗೋಲು ದಾಖಲಿಸುವಲ್ಲಿ ಯಶಸ್ವಿಯಾಯಿತು. 23ನೇ ನಿಮಿಷದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತೊಂದು ‘ಬುಲೆಟ್’ ಪೆನಾಲ್ಟಿ ಕಾರ್ನರ್ ಮೂಲಕ ಜಪಾನ್ ರಕ್ಷಣಾ ವಿಭಾಗವನ್ನು ಭೇದಿಸಿದರೆ, 30ನೇ ನಿಮಿಷದಲ್ಲಿ ಮನದೀಪ್ ಸಿಂಗ್ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು.

ನಾಲ್ಕನೇ ಪ್ರಶಸ್ತಿಯತ್ತ ಭಾರತ

ಇದಾದ ಬಳಿಕ ಭಾರತದ ಗೆಲುವು ಬಹುತೇಕ ಖಚಿತವಾಗಿದ್ದು, ಮುಂದಿನ ಎರಡು ಕ್ವಾರ್ಟರ್‌ಗಳಲ್ಲಿ ಭಾರತ ಇನ್ನೆರಡು ಗೋಲು ಗಳಿಸುವ ಮೂಲಕ ಜಯಭೇರಿ ಬಾರಿಸಿತು. 39ನೇ ನಿಮಿಷದಲ್ಲಿ ಸುಮಿತ್ ಮತ್ತು 51ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಗೋಲು ಬಾರಿಸಿ ಭಾರತಕ್ಕೆ 5-0 ಅಂತರದ ಜಯ ತಂದುಕೊಟ್ಟರು. ಈ ಮೂಲಕ ಟೀಂ ಇಂಡಿಯಾ ಐದನೇ ಬಾರಿಗೆ ಈ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ್ದು, ಸ್ಟಾರ್ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಅವರ 300ನೇ ಅಂತಾರಾಷ್ಟ್ರೀಯ ಪಂದ್ಯದ ಸಂಭ್ರಮವನ್ನೂ ಸ್ಮರಣೀಯವಾಗಿಸಿದೆ.

ಇದೀಗ ಭಾರತ ಫೈನಲ್‌ನಲ್ಲಿ ಮಲೇಷ್ಯಾವನ್ನು ಎದುರಿಸಲಿದೆ. ಇನ್ನು ಉಭಯ ತಂಡಗಳ ನಡುವೆ ಗುಂಪು ಹಂತದಲ್ಲೂ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಭಾರತ ಹಾಕಿ ತಂಡ ಮಲೇಷ್ಯಾವನ್ನು 5-0 ಅಂತರದಿಂದ ಏಕಪಕ್ಷೀಯವಾಗಿ ಸೋಲಿಸಿತ್ತು. ಹೀಗಾಗಿ ಫೈನಲ್ ಪಂದ್ಯದಲ್ಲೂ ಭಾರತವೇ ಗೆಲ್ಲುವ ಫೆವರೆಟ್ ಆಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:58 am, Sat, 12 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್