350 ದಿನಗಳ ನಂತರ ಭಾರತ-ಪಾಕ್ ಕಾಳಗ; ಹಾಕಿ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

Asian Champions Trophy 2024: ಟೂರ್ನಿಯಲ್ಲಿ ಟೀಂ ಇಂಡಿಯಾ ಆಡಿರುವ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ ಸೆಮಿಫೈನಲ್‌ಗೂ ಟಿಕೆಟ್ ಖಚಿತಪಡಿಸಿಕೊಂಡಿದೆ. ಆದರೆ ಪಾಕಿಸ್ತಾನ ತಂಡ ಆಡಿರುವ 3 ಪಂದ್ಯಗಳಲ್ಲಿ 2 ಡ್ರಾ ಮತ್ತು 1 ಗೆಲುವಿನೊಂದಿಗೆ 5 ಅಂಕ ಸಂಪಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ

350 ದಿನಗಳ ನಂತರ ಭಾರತ-ಪಾಕ್ ಕಾಳಗ; ಹಾಕಿ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಭಾರತ- ಪಾಕಿಸ್ತಾನ
Follow us
|

Updated on:Sep 13, 2024 | 8:57 PM

ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರೀಡೆಯಲ್ಲಿ ಯಾವುದೇ ಸ್ಪರ್ಧೆ ನಡೆದರು ಅದರ ರೋಚಕತೆ ಉತ್ತುಂಗಕ್ಕೇರುತ್ತದೆ. ಅಭಿಮಾನಿಗಳು ಕೂಡ ಈ ಉಭಯ ದೇಶಗಳ ಸ್ಪರ್ಧಾ ಕಾಳಗವನ್ನು ವೀಕ್ಷಿಸಲು ಎದುರು ನೋಡುತ್ತಿರುತ್ತಾರೆ. ಇದೀಗ ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ವರ್ಷದ ಬಳಿಕ ಮುಖಾಮುಖಿಯಾಗಲು ಸಜ್ಜಾಗಿವೆ. ಕೊನೆಯ ಬಾರಿ ಎರಡೂ ತಂಡಗಳು ಈ ಪಂದ್ಯಾವಳಿಯಲ್ಲಿ 30 ಸೆಪ್ಟೆಂಬರ್ 2023 ರಂದು ಪರಸ್ಪರ ಸೆಣಸಾಡಿದ್ದವು. ಇದೀಗ ಮತ್ತೊಮ್ಮೆ ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗಕ್ಕೆ ಸರ್ವ ತಯಾರಿ ಮಾಡಿಕೊಂಡಿವೆ.

ಇನ್ನು ಟೂರ್ನಿಯಲ್ಲಿ ಟೀಂ ಇಂಡಿಯಾ ಆಡಿರುವ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ ಸೆಮಿಫೈನಲ್‌ಗೂ ಟಿಕೆಟ್ ಖಚಿತಪಡಿಸಿಕೊಂಡಿದೆ. ಆದರೆ ಪಾಕಿಸ್ತಾನ ತಂಡ ಆಡಿರುವ 3 ಪಂದ್ಯಗಳಲ್ಲಿ 2 ಡ್ರಾ ಮತ್ತು 1 ಗೆಲುವಿನೊಂದಿಗೆ 5 ಅಂಕ ಸಂಪಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈಗ ಈ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೂ ಮುನ್ನ ಸೆಪ್ಟೆಂಬರ್ 14 ರ ಶನಿವಾರದಂದು ಗುಂಪು ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಯಾರದ್ದು ಮೇಲುಗೈ?

ಹಾಕಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ 180 ಪಂದ್ಯಗಳು ನಡೆದಿವೆ. ಇದರಲ್ಲಿ ಪಾಕ್ ತಂಡ ಮೇಲುಗೈ ಸಾಧಿಸಿದ್ದು, ಒಟ್ಟು 82 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 66 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 32 ಪಂದ್ಯಗಳು ಡ್ರಾ ಆಗಿವೆ. ಆದಾಗ್ಯೂ, ಕಳೆದ 11 ವರ್ಷಗಳಲ್ಲಿ ಅಂದರೆ 2013 ರಿಂದ, ಭಾರತವು ಪಾಕಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ಈ ಅವಧಿಯಲ್ಲಿ 25 ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 16 ಮತ್ತು ಪಾಕಿಸ್ತಾನ ಹಾಕಿ ತಂಡ 5 ಪಂದ್ಯಗಳನ್ನು ಗೆದ್ದಿದ್ದರೆ, 4 ಪಂದ್ಯಗಳು ಡ್ರಾಗೊಂಡಿವೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಬಗ್ಗೆ ಮಾತನಾಡುವುದಾದರೆ, ಟೀಮ್ ಇಂಡಿಯಾ ಇದರಲ್ಲಿಯೂ ಮೇಲುಗೈ ಸಾಧಿಸಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳು 11 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ 7 ಪಂದ್ಯಗಳನ್ನು ಭಾರತ ಗೆದ್ದಿದ್ದರೆ, 2 ಪಂದ್ಯಗಳನ್ನು ಪಾಕಿಸ್ತಾನ ಗೆದ್ದಿದೆ. ಉಳಿದಂತೆ 2 ಪಂದ್ಯಗಳು ಡ್ರಾ ಆಗಿವೆ. ಕಳೆದ ಬಾರಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾದಾಗ ಭಾರತ 10-2 ರಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಹಾಗಾಗಿ ಕಳೆದ ಕೆಲವು ವರ್ಷಗಳ ಪ್ರದರ್ಶನ ಹಾಗೂ ಪ್ರಸಕ್ತ ಟೂರ್ನಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನವನ್ನು ನೋಡಿದರೆ, ಪಾಕಿಸ್ತಾನಕ್ಕಿಂತ ಭಾರತ ಬಲಿಷ್ಠವಾಗಿದೆ ಎಂಬುದು ಸಾಭೀತಾಗುತ್ತದೆ.

ಪಂದ್ಯವನ್ನು ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಹಾಕಿ ಪಂದ್ಯವು ಸೆಪ್ಟೆಂಬರ್ 14 ರ ಶನಿವಾರ ಮಧ್ಯಾಹ್ನ 1:15 ಕ್ಕೆ ಪ್ರಾರಂಭವಾಗಲಿದೆ. ವೀಕ್ಷಕರು ಇದನ್ನು ಸೋನಿ ಸ್ಪೋರ್ಟ್ಸ್ ಟೆನ್ 1 ಮತ್ತು ಟೆನ್ 1 HD ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು SonyLIV ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Fri, 13 September 24

ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!