Asian Games 2023: ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಫುಟ್ಬಾಲ್ ತಂಡ; ಗ್ರೀನ್ ಸಿಗ್ನಲ್ ನೀಡಿದ ಕ್ರೀಡಾ ಸಚಿವಾಲಯ

Asian Games 2023: ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಚೀನಾದಲ್ಲಿ ನಡೆಯಲಿರುವ ಏಷ್ಯಾಡ್‌ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ಫುಟ್ಬಾಲ್ ತಂಡಗಳು ಮೊದಲಬಾರಿಗೆ ಅಖಾಡಕ್ಕಿಳಿಯಲ್ಲಿವೆ.

Asian Games 2023: ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಫುಟ್ಬಾಲ್ ತಂಡ; ಗ್ರೀನ್ ಸಿಗ್ನಲ್ ನೀಡಿದ ಕ್ರೀಡಾ ಸಚಿವಾಲಯ
ಭಾರತದ ಪುಟ್ಭಾಲ್ ತಂಡ
Follow us
|

Updated on:Jul 27, 2023 | 7:22 AM

ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ಭಾರತ ಫುಟ್​ಬಾಲ್ ತಂಡ ಭಾಗವಹಿಸಲು ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಚೀನಾದಲ್ಲಿ ನಡೆಯಲಿರುವ ಏಷ್ಯಾಡ್‌ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು (Men’s and Women’s National Football Teams) ಮೊದಲ ಬಾರಿಗೆ ಅಖಾಡಕ್ಕಿಳಿಯಲ್ಲಿವೆ. ಈಗಿರುವ ಆಯ್ಕೆ ಮಾನದಂಡದಲ್ಲಿ ಸಡಿಲಿಕೆ ನೀಡಿದ ಬಳಿಕವೇ ಎರಡೂ ತಂಡಗಳಿಗೂ ಏಷ್ಯನ್ ಗೇಮ್ಸ್‌ಗೆ ತೆರಳುವ ಹಾದಿ ಸುಗಮವಾಗಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿರುವ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ಭಾರತ ಪುರುಷ ಹಾಗೂ ಮಹಿಳಾ ಫುಟ್ಬಾಲ್ ತಂಡಗಳಿಗೆ ಏಷ್ಯಾಡ್ ಆಡಲು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು (Ministry of Youth Affairs and Sports) ಎರಡೂ ತಂಡಗಳ ಭಾಗವಹಿಸುವಿಕೆಗಾಗಿ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿದೆ ಎಂದು ಬರೆದುಕೊಂಡಿದ್ದಾರೆ.

ವಾಸ್ತವವಾಗಿ, ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಶ್ರೇಯಾಂಕದಲ್ಲಿ ಏಷ್ಯಾದ ಟಾಪ್ 8 ರಲ್ಲಿ ಸೇರ್ಪಡೆಗೊಂಡಿಲ್ಲ. ಈ ಕಾರಣಕ್ಕಾಗಿ ಭಾರತೀಯ ಒಲಿಂಪಿಕ್ ಸಂಸ್ಥೆಯು ಏಷ್ಯಾಡ್​ನಲ್ಲಿ ಭಾಗವಹಿಸಲು ಅವಕಾಶ ನೀಡಿರಲಿಲ್ಲ. ಆದರೆ ಏಷ್ಯನ್ ಗೇಮ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಲು ಅವಕಾಶ ನೀಡಬೇಕೆಂದು ಭಾರತೀಯ ಫುಟ್‌ಬಾಲ್ ಫೆಡರೇಶನ್, ಏಷ್ಯನ್ ಗೇಮ್ಸ್‌ಗೆ ತಂಡಗಳನ್ನು ಕಳುಹಿಸುವಂತೆ ಕ್ರೀಡಾ ಸಚಿವಾಲಯಕ್ಕೆ ಮನವಿ ಮಾಡಿತ್ತು.

Shikhar Dhawan Career: ಏಷ್ಯನ್ ಗೇಮ್ಸ್​ಗೂ ಬೇಡವಾದ ಶಿಖರ್ ಧವನ್; ಗಬ್ಬರ್ ಕ್ರಿಕೆಟ್ ಕೆರಿಯರ್ ಅಂತ್ಯ..?

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ

ಕೊನೆಗೂ ಮನವಿಯನ್ನು ಪುರಸ್ಕರಿಸಿದ ಸಚಿವಾಲಯ ಕ್ರೀಡಾಕೂಟದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಫುಟ್​ಬಾಲ್ ತಂಡವನ್ನು ಕಣಕ್ಕಿಳಿಸಲು ಅವಕಾಶ ನೀಡಿದೆ. ಭಾರತೀಯ ಪುರುಷರ ತಂಡದ ಕೋಚ್ ಇಗೊರ್ ಸ್ಟಿಮ್ಯಾಕ್ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದರು. ಇದಾದ ಬಳಿಕ ಬುಧವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಅನುರಾಗ್ ಠಾಕೂರ್ ಟ್ವೀಟ್

ಈ ಬಗ್ಗೆ ತಮ್ಮ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಕ್ರೀಡಾ ಸಚಿವ ಅನುರಾಗ್ ಠಾಕೂರ್, ‘ದೇಶದ ಫುಟ್ಬಾಲ್ ಪ್ರೇಮಿಗಳಿಗೆ ಸಂತಸದ ಸುದ್ದಿಯಿದೆ. ನಮ್ಮ ಪುರುಷ ಮತ್ತು ಮಹಿಳಾ ತಂಡಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲಿವೆ. ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಎರಡೂ ತಂಡಗಳ ಭಾಗವಹಿಸುವಿಕೆಗಾಗಿ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿದೆ’ ಎಂಬ ಮಾಹಿತಿ ನೀಡಿದ್ದಾರೆ.

ವಿನಾಯಿತಿಗೆ ಕಾರಣ

ಅರ್ಹತೆ ಪಡೆಯದಿದ್ದರೂ ಎರಡೂ ತಂಡಗಳನ್ನು ಏಷ್ಯನ್ ಗೇಮ್ಸ್‌ಗೆ ಕಳುಹಿಸಲು ಕಾರಣವೇನು ಎಂಬುದನ್ನು ವಿವರಿಸಿದ ಕ್ರೀಡಾ ಸಚಿವರು, ‘ಎರಡೂ ತಂಡಗಳ ಪ್ರಸ್ತುತ ಪ್ರದರ್ಶನವನ್ನು ಪರಿಗಣಿಸಿ ನಿಯಮಗಳಲ್ಲಿ ಸಡಿಲಿಕೆ ನೀಡಲಾಗಿದೆ. ಪುರುಷರ ತಂಡ ಅದ್ಭುತ ಪ್ರದರ್ಶನ ಮುಂದುವರಿಸಿದೆ. ಇತ್ತೀಚೆಗೆ ತಂಡವು SAFF ಚಾಂಪಿಯನ್‌ಶಿಪ್ ಮತ್ತು ಇಂಟರ್‌ಕಾಂಟಿನೆಂಟಲ್ ಕಪ್ ಗೆದ್ದಿತ್ತು. ಹೀಗಾಗಿ ನಿಯಮಗಳಲ್ಲಿ ಸಡಿಲಿಕೆ ಮಾಡಬೇಕಾಯಿತು. ನಮ್ಮ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಇಡೀ ದೇಶವೇ ಹೆಮ್ಮೆಪಡುವ ಅವಕಾಶವನ್ನು ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:19 am, Thu, 27 July 23

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ