ಪದಕಗಳ ಶತಕ; ಏಷ್ಯನ್ ಗೇಮ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ..!

Asian Games 2023: ಏಷ್ಯನ್ ಗೇಮ್ಸ್ ಹಾಕಿ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದರೊಂಧಿಗೆ ಭಾರತ ಈ ಕ್ರೀಡಾಕೂಟದಲ್ಲಿ 100 ಪದಕಗಳನ್ನು ಗೆಲ್ಲುವುದು ಕೂಡ ಖಚಿತವಾಗಿದೆ. ಭಾರತವು ಈ ಕಾಂಟಿನೆಂಟಲ್ ಈವೆಂಟ್‌ನಲ್ಲಿ ಇದುವರೆಗೆ 95 ಪದಕಗಳನ್ನು ಗೆದ್ದಿದ್ದು, ಪದಕಗಳ ಶತಕ ಪೂರೈಸಲು ಇನ್ನು 5 ಪದಕಗಳ ಅವಶ್ಯಕತೆ ಇದೆ.

ಪದಕಗಳ ಶತಕ; ಏಷ್ಯನ್ ಗೇಮ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ..!
ಏಷ್ಯನ್ ಗೇಮ್ಸ್​
Follow us
|

Updated on:Oct 06, 2023 | 7:27 PM

ಏಷ್ಯನ್ ಗೇಮ್ಸ್ (Asian Games 2023) ಹಾಕಿ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಭಾರತ ಈ ಕ್ರೀಡಾಕೂಟದಲ್ಲಿ 100 ಪದಕಗಳನ್ನು ಗೆಲ್ಲುವುದು ಕೂಡ ಖಚಿತವಾಗಿದೆ. ಭಾರತವು ಈ ಕಾಂಟಿನೆಂಟಲ್ ಈವೆಂಟ್‌ನಲ್ಲಿ ಇದುವರೆಗೆ 95 ಪದಕಗಳನ್ನು ಗೆದ್ದಿದ್ದು, ಪದಕಗಳ ಶತಕ ಪೂರೈಸಲು ಇನ್ನು 5 ಪದಕಗಳ ಅವಶ್ಯಕತೆ ಇದೆ. ಆದರೆ ಈಗಾಗಲೇ ಈ 5 ಪದಕಗಳು ಭಾರತಕ್ಕೆ ಖಾತೆಗೆ ಬೀಳುವುದು ಖಚಿತವಾಗಿದೆ. ಏಷ್ಯನ್ ಗೇಮ್ಸ್‌ನ 13ನೇ ದಿನದಂದು ಸೋನಮ್ (Sonam Malik) ಹಾಗೂ ಕಿರಣ್ ಬಿಷ್ಣೋಯ್ (Kiran Bishnoi) ಕುಸ್ತಿಯಲ್ಲಿ ಕಂಚಿನ ಪದಕವನ್ನು ಗೆದ್ದರೆ, ಭಾರತೀಯ ಪುರುಷರ ತಂಡವು ಬ್ರಿಡ್ಜ್‌ನಲ್ಲಿ ಬೆಳ್ಳಿ ಗೆದ್ದು ದಿನದ ಏಳನೇ ಪದಕವನ್ನು ಗೆದ್ದುಕೊಂಡಿತು.

ಇನ್ನು ಏಷ್ಯನ್ ಗೇಮ್ಸ್​ನ 11 ನೇ ದಿನದಂದು 12 ಪದಕಗಳನ್ನು ಗೆಲ್ಲುವ ಮೂಲಕ ಭಾರತ 70 ಪದಕಗಳ ಗಡಿ ದಾಟಿತ್ತು. ಆದರೆ ಇದೀಗ ಶತಕದ ಗಡಿಯನ್ನು ತಲುಪುವ ಮೂಲಕ ‘ಅಬ್ ಕಿ ಬಾರ್, 100 ಪಾರ್’ ಧ್ಯೇಯವಾಕ್ಯವನ್ನು ಭಾರತದ ಸ್ಪರ್ಧಿಗಳು ನಿಜವಾಗಿಸಿದ್ದಾರೆ.

Breaking: ಏಷ್ಯನ್ ಗೇಮ್ಸ್‌ನಲ್ಲಿ ಜಪಾನ್ ಮಣಿಸಿ ಐತಿಹಾಸಿಕ ಚಿನ್ನ ಗೆದ್ದ ಭಾರತ ಹಾಕಿ ತಂಡ..!

ಅಥ್ಲೀಟಿಕ್ಸ್​ನಲ್ಲಿ ಗಮನಾರ್ಹ ಪ್ರದರ್ಶನ

ಅಥ್ಲೀಟಿಕ್ಸ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಭಾರತದ ಅಥ್ಲೀಟ್​ಗಳು 6 ಚಿನ್ನ, 14 ಬೆಳ್ಳಿ ಮತ್ತು ಒಂಬತ್ತು ಕಂಚು ಸೇರಿದಂತೆ 29 ಪದಕಗಳೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದರು. ಇದರಲ್ಲಿ ನೀರಜ್ ಚೋಪ್ರಾ (ಪುರುಷರ ಜಾವೆಲಿನ್), ಅಣ್ಣು ರಾಣಿ (ಮಹಿಳೆಯರ ಜಾವೆಲಿನ್), ತಜಿಂದರ್‌ಪಾಲ್ ಸಿಂಗ್ ತೂರ್ (ಪುರುಷರ ಶಾಟ್‌ಪುಟ್), ಅವಿನಾಶ್ ಸೇಬಲ್ (ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್), ಪಾರುಲ್ ಚೌಧರಿ (ಮಹಿಳೆಯರ 5000 ಮೀ) ಮತ್ತು ಮುಹಮ್ಮದ್ ಅನಾಸ್, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ಮತ್ತು ರಾಜೇಶ್ ರಮೇಶ್ (ಪುರುಷರ 4×400 ಮೀ ರಿಲೇ) ಆರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಶೂಟಿಂಗ್​ನಲ್ಲಿ ಸಾಧನೆ

ಏತನ್ಮಧ್ಯೆ, ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು ಆರು ಕಂಚು ಸೇರಿದಂತೆ ಒಟ್ಟು 22 ಪದಕಗಳೊಂದಿಗೆ ಭಾರತೀಯ ಶೂಟರ್‌ಗಳು ಮನೆಗೆ ಮರಳಿದ್ದರು. ಇದೀಗ ಪುರುಷರ ಕ್ರಿಕೆಟ್ ತಂಡ ಫೈನಲ್ ತಲುಪಿದ್ದು ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತಪಡಿಸಿದೆ. ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಸೆಮಿಫೈನಲ್‌ ಪ್ರವೇಶಿಸಿರುವುದರಿಂದ ಕನಿಷ್ಠ ಕಂಚಿನ ಪದಕ ಗೆಲ್ಲುವುದು ಖಚಿತವಾಗಿದೆ.

100 ಪದಕಗಳು ಖಚಿತ

2023 ರ ಆವೃತ್ತಿಯ ಮೊದಲು ಏಷ್ಯನ್ ಗೇಮ್ಸ್‌ನಲ್ಲಿ ಭಾರತ, 2018 ರಲ್ಲಿ ಜಕಾರ್ತಾದಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್​ನಲ್ಲಿ ದಾಖಲೆಯ 70 ಪದಕಗಳನ್ನು ಗೆದ್ದ್ದು ಇತಿಹಾಸ ನಿರ್ಮಿಸಿತ್ತು. ಆದರೆ ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ 100 ಪದಕಗಳನ್ನು ಗೆದ್ದಿರುವುದು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Fri, 6 October 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು