ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಶತಕ ಸಾಧನೆ; ಅ.10 ರಂದು ಸ್ಪರ್ಧಿಗಳೊಂದಿಗೆ ಮೋದಿ ಸಂವಾದ

Asian Games 2023: ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ.

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಶತಕ ಸಾಧನೆ; ಅ.10 ರಂದು ಸ್ಪರ್ಧಿಗಳೊಂದಿಗೆ ಮೋದಿ ಸಂವಾದ
ಪ್ರಧಾನಿ ಮೋದಿ ಶ್ಲಾಘನೆ
Follow us
ಪೃಥ್ವಿಶಂಕರ
|

Updated on:Oct 07, 2023 | 10:21 AM

ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ (Asian Games 2023) ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ ಭಾರತ ಇದುವರೆಗೆ ಒಟ್ಟು 100 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಸೇರಿವೆ. ಆರ್ಚರಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಜ್ಯೋತಿ ವೆನ್ನಮ್ ದಿನವನ್ನು ಆರಂಭಿಸಿದರೆ, ಅದಿತಿ ಸ್ವಾಮಿ ಕಾಂಪೌಂಡ್ ಆರ್ಚರಿಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು (Prime Minister Narendra Modi) ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ.

ಹೃತ್ಪೂರ್ವಕ ಅಭಿನಂದನೆಗಳು- ಮೋದಿ

ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್​ನಲ್ಲಿ ಬರದುಕೊಂಡಿದ್ದಾರೆ.

ಚಿನ್ನ ಗೆಲ್ಲುತ್ತಾ ರುತುರಾಜ್ ಪಡೆ?

ಭಾರತದಲ್ಲಿ ವಿಶ್ವಕಪ್ ಪಂದ್ಯಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಭಾರತ ತಂಡ ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಫೈನಲ್ ತಲುಪಿದೆ. ಪುರುಷರ ಕ್ರಿಕೆಟ್‌ನಲ್ಲಿ ಭಾರತ ಚಿನ್ನದ ಪದಕಕ್ಕಾಗಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಅಫ್ಘಾನಿಸ್ತಾನ ತಂಡ 2010 ಮತ್ತು 2014ರಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿತ್ತು. ಈ ಬಾರಿಯೂ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು. ಈಗ ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಕೂಡ ಇದೇ ರೀತಿಯ ಯಶಸ್ಸನ್ನು ಸಾಧಿಸುವ ನಿರೀಕ್ಷೆಯಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 am, Sat, 7 October 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ