ಏಷ್ಯನ್ ಗೇಮ್ಸ್: ಅಥ್ಲೆಟಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನ
Asian Games 2023: ಪ್ರಸ್ತುತ ಏಷ್ಯನ್ ಗೇಮ್ಸ್ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 12 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಭಾರತದ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದಿದ್ದಾರೆ. ಇದರೊಂದಿಗೆ ಅಥ್ಲೆಟಿಕ್ಸ್ನಲ್ಲಿ ಭಾರತ ತಂಡವು ಮೊದಲ ಸ್ವರ್ಣ ಪದಕದ ಖಾತೆ ತೆರೆದಿದೆ. ಈ ಪಂದ್ಯದಲ್ಲಿ 8:19:50 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಅವನಾಶ್ ಸಬ್ಲೆ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪರ ಹೊಸ ದಾಖಲೆ ಬರೆದರು.
2022 ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಅವಿನಾಶ್, ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದಾಗ್ಯೂ ತಮ್ಮ ರಾಷ್ಟ್ರೀಯ ದಾಖಲೆಯನ್ನು ಮುರಿಯಲಾಗಲಿಲ್ಲ. ಸ್ಟೀಪಲ್‌ಚೇಸ್‌ನಲ್ಲಿ ಕೇವಲ 8 ನಿಮಿಷ 11.20 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ಅವಿನಾಶ್ ಸೆಬ್ಲೆ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಈ ಮೂಲಕ ಜಪಾನ್‌ನ ಮಿಯುರಾ ರ್ಯುಜಿ (8:09.91) ನಂತರ ಏಷ್ಯಾದ ಎರಡನೇ ವೇಗದ ಸ್ಟೀಪಲ್‌ಚೇಸ್ ರೇಸರ್ ಎನಿಸಿಕೊಂಡಿದ್ದಾರೆ.
ನನಗೆ ಸ್ಟೀಪಲ್‌ಚೇಸ್ ಬಗ್ಗೆ ವಿಶ್ವಾಸವಿದೆ ಮತ್ತು ಆ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವುದು ನನ್ನ ಮುಖ್ಯ ಗುರಿಯಾಗಿದೆ. ಇದೀಗ 3000 ಮೀಟರ್ನಲ್ಲಿ ಯಶಸ್ವಿಯಾಗಿದ್ದು, ಇನ್ನು 5000 ಮೀಟರ್ ಸ್ಪರ್ಧೆಯಲ್ಲೂ ಕಣಕ್ಕಿಳಿಯಲಿದ್ದೇನೆ. ಹೀಗಾಗಿ ಅದರಲ್ಲೂ ಪದಕ ಗೆಲ್ಲುವ ವಿಶ್ವಾಸವಿದೆ ಎಂದು ಅವಿನಾಶ್ ಸೆಬ್ಲೆ ಹೇಳಿದ್ದಾರೆ.
🚨 India’s 1st Gold in Athletics and 12th Gold overall in Asian Games 2023.
Avinash Sable becomes first Indian to win 3000m steepchase gold in Asian Games. pic.twitter.com/woqz0HKwDk
— Indian Tech & Infra (@IndianTechGuide) October 1, 2023
ನಾಲ್ಕನೇ ಸ್ಥಾನದಲ್ಲಿ ಭಾರತ:
ಪ್ರಸ್ತುತ ಏಷ್ಯನ್ ಗೇಮ್ಸ್ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 12 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.
ಇದನ್ನೂ ಓದಿ: ಏಷ್ಯನ್ ಗೇಮ್ಸ್: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ
ಇನ್ನು 120 ಚಿನ್ನ, 71 ಬೆಳ್ಳಿ, 37 ಕಂಚಿನ ಪದಕಗಳೊಂದಿಗೆ ಒಟ್ಟು 228 ಪದಕಗಳನ್ನು ಗೆದ್ದಿರುವ ಆತಿಥೇಯ ಚೀನಾ (ಗಣತಂತ್ರ) ದೇಶವು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.