Australian Open: ಇತಿಹಾಸ ನಿರ್ಮಿಸಿದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್ ಜೋಡಿ..!

Australian Open 2024: ಭಾರತದ ಲೆಜೆಂಡರಿ ಟೆನಿಸ್ ತಾರೆ ರೋಹನ್ ಬೋಪಣ್ಣ ಅವರ ಕನಸು ಕೊನೆಗೂ ನನಸಾಗಿದೆ. ಕನ್ನಡಿಗ ರೋಹನ್ ಬೋಪಣ್ಣ ಹಾಗೂ ಅವರ ಸಹ ಆಟಗಾರ ಮ್ಯಾಥ್ಯೂ ಎಬ್ಡೆನ್ ಆಸ್ಟ್ರೇಲಿಯನ್ ಓಪನ್‌ನಲ್ಲಿ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

Australian Open: ಇತಿಹಾಸ ನಿರ್ಮಿಸಿದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್ ಜೋಡಿ..!
ರೋಹನ್ ಬೋಪಣ್ಣ ಹಾಗೂ ಮ್ಯಾಥ್ಯೂ ಎಬ್ಡೆನ್
Follow us
|

Updated on:Jan 27, 2024 | 6:47 PM

ಭಾರತದ ಲೆಜೆಂಡರಿ ಟೆನಿಸ್ ತಾರೆ ರೋಹನ್ ಬೋಪಣ್ಣ ಅವರ ಕನಸು ಕೊನೆಗೂ ನನಸಾಗಿದೆ. ಕನ್ನಡಿಗ ರೋಹನ್ ಬೋಪಣ್ಣ ಹಾಗೂ ಅವರ ಸಹ ಆಟಗಾರ ಮ್ಯಾಥ್ಯೂ ಎಬ್ಡೆನ್ ( Rohan Bopanna-Matthew Ebden) ಆಸ್ಟ್ರೇಲಿಯನ್ ಓಪನ್‌ನಲ್ಲಿ ಪುರುಷರ ಡಬಲ್ಸ್ ಪ್ರಶಸ್ತಿಯನ್ನು (Australian Open Men’s Doubles Final) ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಜನವರಿ 27 ರ ಶನಿವಾರದಂದು ಮೆಲ್ಬೋರ್ನ್ ಪಾರ್ಕ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ, ಇಟಲಿಯ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರೆ ವವಾಸ್ಸೋರಿ ಜೋಡಿಯನ್ನು 7-5, 7-5 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಇದರೊಂದಿಗೆ ಬೋಪಣ್ಣ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್‌ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದರು. ಅಷ್ಟೇ ಅಲ್ಲದೆ 43ನೇ ವಯಸ್ಸಿನಲ್ಲಿ ಈ ಪ್ರಶಸ್ತಿ ಗೆದ್ದು, ಗ್ರ್ಯಾಂಡ್ ಸ್ಲಾಮ್‌ನಲ್ಲಿ ಯಾವುದೇ ಪುರುಷರ ಈವೆಂಟ್ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಬೋಪಣ್ಣ ಪಾತ್ರರಾದರು.

ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್‌

ಕಳೆದ ವರ್ಷ ಯುಎಸ್ ಓಪನ್‌ನ ಫೈನಲ್‌ನಲ್ಲಿ ಬೋಪಣ್ಣ ಮತ್ತು ಎಬ್ಡೆನ್ ಜೋಡಿ ಸೋಲು ಅನುಭವಿಸಿ ಖಾಲಿ ಕೈಯಲ್ಲಿ ವಾಪಸ್ಸಾಗಿತ್ತು. ಆದರೆ ಹೊಸ ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್‌ನಲ್ಲಿ ಈ ಜೋಡಿ ಪ್ರಶಸ್ತಿ ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ. 2003 ರಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಬೋಪಣ್ಣ, ಪುರುಷರ ಡಬಲ್ಸ್‌ನಲ್ಲಿ ಇದುವರೆಗೂ ಒಂದೇ ಒಂದು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಆ ಪ್ರಶಸ್ತಿಯ ಬರವನ್ನು ಬೋಪಣ್ಣ ನೀಗಿಸಿಕೊಂಡಿದ್ದಾರೆ. ಇದು ಬೋಪಣ್ಣ ಅವರ ಮೊದಲ ಪುರುಷರ ಡಬಲ್ಸ್‌ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದ್ದರೆ, 2017 ರಲ್ಲಿ ನಡೆದ ಫ್ರೆಂಚ್ ಓಪನ್‌ನಲ್ಲಿ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೋಪಣ್ಣ ತಮ್ಮ ವೃತ್ತಿಜೀವನದಲ್ಲಿ ಏಕೈಕ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಜಯಿಸುವಲ್ಲಿ ಯಶಸ್ವಿಯಾಗಿದ್ದರು.

ಮೆಲ್ಬೋರ್ನ್ ಪಾರ್ಕ್‌ನಲ್ಲಿ ನಡೆದ ಈ ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಜೋಡಿ ಗೆಲುವಿಗೆ ಹೆಚ್ಚು ಶ್ರಮಪಡಬೇಕಾಗಲಿಲ್ಲ. ಪಂದ್ಯಾವಳಿಯಲ್ಲಿ ಎರಡನೇ ಶ್ರೇಯಾಂಕದ ಈ ಜೋಡಿಯು ಮೊದಲ ಸೆಟ್‌ನಲ್ಲಿ ಸ್ವಲ್ಪ ಪೈಪೋಟಿಯನ್ನು ಎದುರಿಸಿತು. ಹೀಗಾಗಿ ಮೊದಲ ಸೆಟ್‌ ಟೈ ಬ್ರೇಕರ್‌ನಲ್ಲಿ ಕೊನೆಗೊಂಡಿತು. ಎರಡನೇ ಸೆಟ್ ಕೂಡ ಟೈ-ಬ್ರೇಕರ್‌ನತ್ತ ಸಾಗುತ್ತಿರುವಂತೆ ತೋರಿತು. ಆದರೆ ಸ್ಕೋರ್ 5-5 ರಲ್ಲಿ ಟೈ ಆದ ನಂತರ ಬೋಲೈ-ವಾವಸೋರಿ ಅವರ ಸರ್ವನ್ನು ಮುರಿದ ಬೋಪಣ್ಣ ಮತ್ತು ಎಬ್ಡೆನ್ ಜೋಡಿ ತಮ್ಮ ಸರ್ವ್‌ನಲ್ಲಿ ಪ್ರಶಸ್ತಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.

Padma Award 2024: 20 ವರ್ಷ, 1000 ಕ್ಕೂ ಹೆಚ್ಚು ಪಂದ್ಯ; ಕನ್ನಡಿಗ ರೋಹನ್ ಬೋಪಣ್ಣಗೆ ಪದ್ಮಶ್ರೀ ಗೌರವ..!

ಬೋಪಣ್ಣ ಅವರಿಗೆ ಪದ್ಮಶ್ರೀ

ಇಂದು ಆಸ್ಟ್ರೇಲಿಯನ್ ಓಪನ್‌ ಗೆದ್ದಿರುವ ಬೋಪಣ್ಣ ಅವರಿಗೆ ಈ ವಾರ ಮುಟ್ಟಿದೆಲ್ಲ ಚಿನ್ನವೆಂಬಂತಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ಬೋಪಣ್ಣ ಎಟಿಪಿ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೇರಿದ್ದರು. ಇದರೊಂದಿಗೆ ನಂಬರ್-1 ರ ್ಯಾಂಕ್ ತಲುಪಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಇದಾದ ಒಂದು ದಿನದ ನಂತರ, ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿತ್ತು. ಇದೀಗ ಅವರು ಮೊದಲ ಬಾರಿಗೆ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ತಮ್ಮ ಕಾಯುವಿಕೆಯನ್ನು ಕೊನೆಗೊಳಿಸಿದ್ದಾರೆ.

Published On - 6:16 pm, Sat, 27 January 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್