ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು

ಅಕ್ಟೋಬರ್​ 12, 1949ರಲ್ಲಿ ಜನಿಸಿದ ಬಿ. ವಿಜಯ್​ಕೃಷ್ಣ ಅವರ ಪೂರ್ಣ ಹೆಸರು ಭರಮಯ್ಯ ವಿಜಯ್​ಕೃಷ್ಣ. ಆದರೆ, ಅವರ ವಿಜಿ ಎಂಬ ಅಡ್ಡಹೆಸರು ಹೆಚ್ಚು ಚಾಲ್ತಿಯಲ್ಲಿತ್ತು.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು
ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ
Follow us
TV9 Web
| Updated By: shruti hegde

Updated on:Jun 17, 2021 | 9:59 AM

ಬೆಂಗಳೂರು: ಮಾಜಿ ಕ್ರಿಕೆಟಿಗ, ಕರ್ನಾಟಕ ತಂಡದ ಪರ ಆಡುತ್ತಿದ್ದ ಎಡಗೈ ಬ್ಯಾಟ್ಸ್​ಮನ್​ ಬಿ ವಿಜಯಕೃಷ್ಣ ಇಂದು (ಜೂನ್ 17) ಮುಂಜಾನೆ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್​ಕೃಷ್ಣ ಬಹು ಅಂಗಾಂಗ ವೈಫಲ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇಂದು ಮುಂಜಾನೆ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿ ಸುಮಾರು 5.50ರ ಹೊತ್ತಿದೆ ಕಣ್ಮುಚ್ಚಿದ್ದಾರೆ.

ಲೆಫ್ಟ್​ ಆರ್ಮ್​ ಸ್ಪಿನ್ನರ್ ಹಾಗೂ ಲೆಫ್ಟ್​ ಹ್ಯಾಂಡ್ ಬ್ಯಾಟ್ಸ್​ಮನ್​ ಆಗಿ ಸುಮಾರು 15 ವರ್ಷಗಳ ಆಡಿದ ಅವರು 80 ಪ್ರಮುಖ ಪಂದ್ಯಗಳಿಂದ ಒಟ್ಟು 2000ಕ್ಕೂ ಹೆಚ್ಚು ರನ್​ ಗಳಿಸಿ, 194 ವಿಕೆಟ್ ಪಡೆದಿದ್ದಾರೆ.

ಕರ್ನಾಟಕದ ಪರ ಆಡುತ್ತಿದ್ದ ಕೆ.ನಾಗಭೂಷಣ್ ಅವರ ಪ್ರೋತ್ಸಾಹದಿಂದ ಮೈದಾನಕ್ಕಿಳಿದ ವಿಜಯ್​ಕೃಷ್ಣ ಅತ್ಯುತ್ತಮ ಆಲ್​ರೌಂಡರ್ ಆಗಿ ಪ್ರದರ್ಶನ ನೀಡಿದರು. ನಾಗಭೂಷಣ್ ಅವರ ಸಹಕಾರದೊಂದಿಗೆ ಕಾರ್​ ಶೆಡ್​ನಲ್ಲಿ ಟೆನ್ನಿಸ್​ ಬಾಲ್​ ಮೂಲಕ ಬೌಲಿಂಗ್ ಅಭ್ಯಾಸ ಮಾಡಿಕೊಂಡ ಅವರು 1968-69ನೇ ಸಾಲಿನಲ್ಲಿ ಆಡಿದ ಮೊದಲ ರಣಜಿ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮೂರು ವಿಕೆಟ್ ಪಡೆದಿದ್ದರು. ಅಲ್ಲದೇ ಅದರ ನಂತರ ಮದ್ರಾಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್ ಪಡೆದು ಸೈ ಎನ್ನಿಸಿಕೊಂಡಿದ್ದರು.

ಇದನ್ನೂ ಓದಿ: ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್ 

17 ಎಸೆತಗಳಲ್ಲಿ 90 ರನ್! ಈ ಆಂಗ್ಲ ಕ್ರಿಕೆಟಿಗನ ಸಿಕ್ಸರ್​ ಸುನಾಮಿಗೆ ಎದುರಾಳಿ ತಂಡ ಕೊಚ್ಚಿ ಹೋಗಿತ್ತು

Published On - 9:59 am, Thu, 17 June 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ