AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಆಝಂ ಸಿಡಿಲಬ್ಬರದ ಬ್ಯಾಟಿಂಗ್; ಆದರೂ ಸೋತ್ರು..!

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅತ್ಯಂತ ನಿಧಾನಗತಿಯಲ್ಲಿ ಅರ್ಧಶತಕ ಬಾರಿಸಿದ ಹೀನಾಯ ದಾಖಲೆ ಬಾಬರ್ ಆಝಂ ಹೆಸರಿನಲ್ಲಿದೆ. ಇಸ್ಲಾಮಾಬಾದ್​ ಯುನೈಟೆಡ್ ತಂಡದ ವಿರುದ್ಧ ಬಾಬರ್ 50 ರನ್ ಪೂರೈಸಲು ಬರೋಬ್ಬರಿ 47 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೀಗ ಅದೇ ಬಾಬರ್ ಭರ್ಜರಿ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದಾರೆ.

ಬಾಬರ್ ಆಝಂ ಸಿಡಿಲಬ್ಬರದ ಬ್ಯಾಟಿಂಗ್; ಆದರೂ ಸೋತ್ರು..!
Babar Azam
ಝಾಹಿರ್ ಯೂಸುಫ್
|

Updated on: May 18, 2025 | 11:53 AM

Share

ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಟಿ20 ಕ್ರಿಕೆಟ್​ನಲ್ಲಿ ನಿಧಾನವಾಗಿ ಬ್ಯಾಟ್ ಬೀಸಿ ಹಲವು ಬಾರಿ ಟೀಕೆಗೆ ಗುರಿಯಾಗಿದ್ದಾರೆ. ಅದರಲ್ಲೂ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ 47 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅತ್ಯಂತ ಕೆಟ್ಟ ದಾಖಲೆಯನ್ನು ಸಹ ಬರೆದಿದ್ದಾರೆ. ಆದರೆ ಈ ಬಾರಿ ಬಾಬರ್ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿದ್ದಾರೆ. ಇದಾಗ್ಯೂ ಪೇಶಾವರ್ ಝಲ್ಮಿ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.

ರಾವಲ್ಪಿಂಡಿಯಲ್ಲಿ ನಡೆದ ಪಾಕಿಸ್ತಾನ್ ಸೂಪರ್ ಲೀಗ್​ನ 27ನೇ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಹಾಗೂ ಕರಾಚಿ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪೇಶಾವರ್ ಝಲ್ಮಿ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಕರಾಚಿ ಕಿಂಗ್ಸ್ ಪರ ನಾಯಕ ಡೇವಿಡ್ ವಾರ್ನರ್ ಸ್ಪೋಟಕ ಇನಿಂಗ್ಸ್ ಆಡಿದರು. 50 ಎಸೆತಗಳನ್ನು ಎದುರಿಸಿದ ವಾರ್ನರ್ 2 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 86 ರನ್ ಬಾರಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೇಮ್ಸ್ ವಿನ್ಸ್ 42 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 72 ರನ್ ಚಚ್ಚಿದರು. ಈ ಎರಡು ಭರ್ಜರಿ ಅರ್ಧಶತಕಗಳ ನೆರವಿನೊಂದಿಗೆ ಕರಾಚಿ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 237 ರನ್ ಕಲೆಹಾಕಿತು.

ಬಾಬರ್ ಸಿಡಿಲಬ್ಬರ:

238 ರನ್​ಗಳ ಕಠಿಣ ಗುರಿ ಪಡೆದ ಪೇಶಾವರ್ ಝಲ್ಮಿ ತಂಡಕ್ಕೆ ಸೈಮ್ ಅಯ್ಯೂಬ್ (47) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ಬಾಬರ್ ಆಝಂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ತಾನೆದುರಿಸಿದ ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಬಾಬರ್ ಮೈದಾನದ ಮೂಲೆ ಮೂಲೆಗೂ ಬೌಂಡರಿಗಳನ್ನು ಬಾರಿಸಿದರು.

ಅಲ್ಲದೆ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 94 ರನ್​ಗಳಿಸಿದ್ದ ಬಾಬರ್ ಆಝಂ ರನೌಟ್​ಗೆ ಬಲಿಯಾಗಬೇಕಾಯಿತು. ಪೇಶಾವರ್ ಝಲ್ಮಿ ತಂಡದ ನಾಯಕನ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರಾಚಿ ಕಿಂಗ್ಸ್ ಬೌಲರ್​ಗಳು ರನ್​ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಪರಿಣಾಮ ಪೇಶಾವರ್ ಝಲ್ಮಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 214 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕರಾಚಿ ಕಿಂಗ್ಸ್ ತಂಡವು 23 ರನ್​ಗಳ ಜಯ ಸಾಧಿಸಿದೆ.

ಇದನ್ನೂ ಓದಿ: IPL 2025: ಹೀಗಾದ್ರೆ RCB ಐಪಿಎಲ್​ನಿಂದ ಹೊರಬೀಳುವುದು ಖಚಿತ..!

ಇನ್ನು ಈ ಪಂದ್ಯದಲ್ಲಿ 50 ಎಸೆತಗಳಲ್ಲಿ 86 ರನ್ ಬಾರಿಸಿ ಮಿಂಚಿದ್ದ ಕರಾಚಿ ಕಿಂಗ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಅಲ್ಲದೆ ಈ ಗೆಲುವಿನೊಂದಿಗೆ ಕರಾಚಿ ಕಿಂಗ್ಸ್ ತಂಡ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ