ಭಾರತ vs ಆಸ್ಟ್ರೇಲಿಯಾ: ಪ್ಲಾಸ್ಟಿಕ್ ಬಳಕೆ, ಚಿನ್ನಸ್ವಾಮಿ ಸ್ಟೇಡಿಯಂಗೆ ದಂಡ

|

Updated on: Jan 21, 2020 | 4:08 PM

ಬೆಂಗಳೂರು: ಜನವರಿ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕದನದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತು. ಆದ್ರೆ ಅಂದಿನ ಪಂದ್ಯದಲ್ಲಿ ಪ್ಲಾಸ್ಟಿಕ್ ಬಳಸಿದ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನ ಆಡಳಿತ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ. ಭಾನುವಾರ ನಡೆದ ಭಾರತ-ಆಸ್ಟ್ರೇಲಿಯಾ ನಿರ್ಣಾಯಕ ಪಂದ್ಯದ ಆತಿಥ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣ ವಹಿಸಿಕೊಂಡಿತ್ತು. ಅಂದು ಕ್ರೀಡಾಂಗಣದ ಒಳಗಡೆಯಿದ್ದ ಕ್ಯಾಂಟೀನ್​ಗಳಲ್ಲಿ ಪ್ಲಾಸ್ಟಿಕ್ ಕಪ್ ಬಳಕೆ ಮಾಡಲಾಗಿದೆ. ಹೀಗಾಗಿ ಆಡಳಿತ ಮಂಡಳಿಗೆ ಬಿಬಿಎಂಪಿ ಉಪ ಆರೋಗ್ಯಾಧಿಕಾರಿ […]

ಭಾರತ vs ಆಸ್ಟ್ರೇಲಿಯಾ: ಪ್ಲಾಸ್ಟಿಕ್ ಬಳಕೆ, ಚಿನ್ನಸ್ವಾಮಿ ಸ್ಟೇಡಿಯಂಗೆ ದಂಡ
ಚಿನ್ನಸ್ವಾಮಿ ಕ್ರೀಡಾಂಗಣ
Follow us on

ಬೆಂಗಳೂರು: ಜನವರಿ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕದನದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತು. ಆದ್ರೆ ಅಂದಿನ ಪಂದ್ಯದಲ್ಲಿ ಪ್ಲಾಸ್ಟಿಕ್ ಬಳಸಿದ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನ ಆಡಳಿತ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ.

ಭಾನುವಾರ ನಡೆದ ಭಾರತ-ಆಸ್ಟ್ರೇಲಿಯಾ ನಿರ್ಣಾಯಕ ಪಂದ್ಯದ ಆತಿಥ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣ ವಹಿಸಿಕೊಂಡಿತ್ತು. ಅಂದು ಕ್ರೀಡಾಂಗಣದ ಒಳಗಡೆಯಿದ್ದ ಕ್ಯಾಂಟೀನ್​ಗಳಲ್ಲಿ ಪ್ಲಾಸ್ಟಿಕ್ ಕಪ್ ಬಳಕೆ ಮಾಡಲಾಗಿದೆ. ಹೀಗಾಗಿ ಆಡಳಿತ ಮಂಡಳಿಗೆ ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಸಂಗಮಿತ್ರ ಅವರು 50 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

Published On - 4:06 pm, Tue, 21 January 20