WTC Final: ಡಬ್ಲ್ಯೂಟಿಸಿ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ! ಆಡುವ 11 ಆಟಗಾರರ ಪಟ್ಟಿ ಹೀಗಿದೆ

India Playing 11 for WTC Final: ನಿರೀಕ್ಷೆಯಂತೆ ಟೀಂ ಇಂಡಿಯಾ ಮೂವರು ವೇಗದ ಬೌಲರ್​ ಹಾಗೂ ಇಬ್ಬರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಇದರ ಜೊತೆಗೆ ಆರು ಬ್ಯಾಟ್ಸ್​ಮನ್​ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

WTC Final: ಡಬ್ಲ್ಯೂಟಿಸಿ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ! ಆಡುವ 11 ಆಟಗಾರರ ಪಟ್ಟಿ ಹೀಗಿದೆ
ಟೀಮ್ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jun 17, 2021 | 7:54 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕೆಲವೇ ಗಂಟೆಗಳ ದೂರದಲ್ಲಿದೆ. ಜೂನ್ 18 ರ ಬೆಳಿಗ್ಗೆ ಸೌತಾಂಪ್ಟನ್‌ನಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಟೆಸ್ಟ್​ ವಿಶ್ವಕಪ್​ ಎನ್ನಿಸಿಕೊಂಡಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ನಿರೀಕ್ಷೆಯಂತೆ ಟೀಂ ಇಂಡಿಯಾ ಮೂವರು ವೇಗದ ಬೌಲರ್​ ಹಾಗೂ ಇಬ್ಬರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಇದರ ಜೊತೆಗೆ ಆರು ಬ್ಯಾಟ್ಸ್​ಮನ್​ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್​ ಕೀಪಿಗ್​ ವಿಭಾಗವನ್ನು ರಿಷಭ್ ಪಂತ್ ನಿಭಾಯಿಸಲಿದ್ದಾರೆ. ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.

ಇಶಾಂತ್, ಶಮಿ, ಬುಮ್ರಾ, ಅಶ್ವಿನ್ ಮತ್ತು ಜಡೇಜಾ ಅವರ ಸಂಯೋಜನೆಯೊಂದಿಗೆ ಟೀಮ್ ಇಂಡಿಯಾ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲಿದೆ. ಇದಕ್ಕೂ ಮೊದಲು ಈ ಐದು ಆಟಗಾರರು ಒಟ್ಟಿಗೆ ಟೆಸ್ಟ್ ಆಡಿಲ್ಲ. ಅಚ್ಚರಿಯೆಂದರೆ, ಈ ಐದು ಜನರು ಕಳೆದ ಕೆಲವು ವರ್ಷಗಳಿಂದ ಭಾರತೀಯ ಬೌಲಿಂಗ್‌ನ ಪ್ರಮುಖ ಅಸ್ತ್ರಗಳಾಗಿದ್ದಾರೆ. ಸೌತಾಂಪ್ಟನ್ ಪಿಚ್ ಸ್ಪಿನ್ ಬೌಲಿಂಗ್​ಗೆ ಸಹಾಯ ಮಾಡುವ ಸಾಧ್ಯತೆಯಿಂದಾಗಿ ಭಾರತವು ಅಶ್ವಿನ್ ಮತ್ತು ಜಡೇಜಾ ಇಬ್ಬರಿಗೂ ಅವಕಾಶ ನೀಡಿದೆ. ಈ ಮೈದಾನದಲ್ಲಿ ಭಾರತ ಇದುವರೆಗೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದೆ ಮತ್ತು ಎರಡರಲ್ಲೂ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಅಲ್ಲದೆ, ಇಂಗ್ಲೆಂಡ್ ಸ್ಪಿನ್ನರ್ ಇಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಎರಡೂ ಬಾರಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಹುಶಃ ಈ ಇತಿಹಾಸದ ದೃಷ್ಟಿಯಿಂದ, ಭಾರತವು ಸ್ಪಿನ್ ಬೌಲಿಂಗ್​ಗೆ ಹೆಚ್ಚಿನ ಆಧ್ಯತೆ ನೀಡಿದೆ.

ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗ ಹೀಗಿದೆ ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯಾ ರಹಾನೆ(ಉಪನಾಯಕ), ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ರಿಷಭ್ ಪಂತ್, ಆರ್​.ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್​ ಶಮಿ.

ನ್ಯೂಜಿಲೆಂಡ್ ಆಡುವ ಇಲೆವೆನ್ ಘೋಷಿಸಲಿಲ್ಲ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕಾಗಿ ಭಾರತ ಈಗಾಗಲೇ ತನ್ನ ಅಂತಿಮ 15 ಆಟಗಾರರನ್ನು ಘೋಷಿಸಿತ್ತು. ಈಗ ಇವರುಗಳಲ್ಲಿ 11 ಜನರನ್ನು ಆಯ್ಕೆ ಮಾಡಲಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವು ಜೂನ್ 18 ರಂದು ಮಧ್ಯಾಹ್ನ 3 ಗಂಟೆಗೆ ಸೌತಾಂಪ್ಟನ್‌ನಲ್ಲಿ ಪ್ರಾರಂಭವಾಗಲಿದೆ. ಆದರೆ ಇದುವರೆಗೂ ನ್ಯೂಜಿಲೆಂಡ್‌ನ ಆಡುವ ಇಲೆವೆನ್ ಘೋಷಿಸಲಾಗಿಲ್ಲ. ಟಾಸ್ ಸಮಯದಲ್ಲಿ ಕಿವಿ ತಂಡವು ತನ್ನ ಆಡುವ ಇಲೆವೆನ್​ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಿಮ ಪಂದ್ಯವನ್ನು ಯಾರು ಗೆದ್ದರೂ ಅವರು ಟೆಸ್ಟ್‌ನಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡವಾಗುತ್ತಾರೆ. ಅಲ್ಲದೆ, ಅವರು ಐಸಿಸಿ ಟೆಸ್ಟ್ ಮೇಸ್ ಅನ್ನು ಟ್ರೋಫಿಯಾಗಿ ಪಡೆಯಲಿದ್ದಾರೆ.

Published On - 7:47 pm, Thu, 17 June 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್