AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ 1983ರ ವಿಶ್ವಕಪ್ ವಿಜೇತರ ಹೇಳಿಕೆ; ನನಗೂ ಅದಕ್ಕೂ ಸಂಬಂಧವಿಲ್ಲ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾನು ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಸಮರ್ಥ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ ಎಂದು ನಾನು ನಂಬುತ್ತೇನೆ ಎಂದ ರೋಜರ್ ಬಿನ್ನಿ

ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ 1983ರ ವಿಶ್ವಕಪ್ ವಿಜೇತರ ಹೇಳಿಕೆ; ನನಗೂ ಅದಕ್ಕೂ ಸಂಬಂಧವಿಲ್ಲ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
ರೋಜರ್ ಬಿನ್ನಿ
ರಶ್ಮಿ ಕಲ್ಲಕಟ್ಟ
|

Updated on: Jun 03, 2023 | 8:37 PM

Share

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh)ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು (Wrestlers Protest) ಬೆಂಬಲಿಸಿ 1983 ರ ವಿಶ್ವಕಪ್ ವಿಜೇತ ತಂಡದ ಆಟಗಾರರು ಹೇಳಿಕೆ ಪ್ರಕಟಿಸಿದ್ದರು. ಆದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ (Roger Binny) ಹೇಳಿದ್ದಾರೆ. ಸೌರವ್ ಗಂಗೂಲಿ ಅವರು ಹುದ್ದೆಯಿಂದ ಕೆಳಗಿಳಿದ ನಂತರ ಅಕ್ಟೋಬರ್ 2022 ರಲ್ಲಿ ಬಿನ್ನಿ ಅವರನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾನು ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಸಮರ್ಥ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ ಎಂದು ನಾನು ನಂಬುತ್ತೇನೆ. ಮಾಜಿ ಕ್ರಿಕೆಟಿಗನಾಗಿ, ಕ್ರೀಡೆಯನ್ನು ರಾಜಕೀಯದೊಂದಿಗೆ ಬೆರೆಸಬಾರದು ಎಂದು ಬಿನ್ನಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ ಶುಕ್ರವಾರ, 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರು ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲ ವ್ಯಕ್ತಪಡಿಸಿದ್ದು,ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದರು. ಪ್ರತಿಭಟನಾ ನಿರತರ ಮೇಲೆ ದೆಹಲಿ ಪೊಲೀಸರು ನಡೆಸಿದ ದಬ್ಬಾಳಿಕೆ ನೋಡಿ ನಮಗೆ ಬೇಸರವಾಗಿದೆ. ದೇಶದ ಕಾನೂನು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಒಲಿಂಪಿಯನ್‌ಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ಬಂಧಿಸಬೇಕು ಮತ್ತು ಮಹಿಳಾ ಕುಸ್ತಿಪಟುಗಳ ಲೈಂಗಿಕ ಶೋಷಣೆಯ ಆರೋಪಗಳ ಬಗ್ಗೆ ಪಾರದರ್ಶಕ ತನಿಖೆಗೆ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಈ ಮೂವರು ಮೇ 30 ರಂದು ಹರಿದ್ವಾರಕ್ಕೆ ಹೋಗಿ ತಮ್ಮ ಅಂತರಾಷ್ಟ್ರೀಯ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವುದಾಗಿ ಘೋಷಿಸಿದ್ದರು. ಆದರೆ ಅಷ್ಟರಲ್ಲಿ ರೈತ ಮುಖಂಡರ ಮಧ್ಯಪ್ರವೇಶದಿಂದ ಕುಸ್ತಿಪಟುಗಳು ನಿರ್ಧಾರದಿಂದ ಹಿಂದೆ ಸರಿದಿದ್ದರು.

ಇದನ್ನೂ ಓದಿ: ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ನೇತೃತ್ವದ 1983 ಚಾಂಪಿಯನ್ಸ್ ತಂಡದ ಸದಸ್ಯರ ಕಿವಿಮಾತು

ಭಾನುವಾರ ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಅಲ್ಲಿಗೆ ಮೆರವಣಿಗೆ ನಡೆಸುಲು ಮುಂದಾದ ಕುಸ್ತಿಪಟುಗಳನ್ನು ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಇದಾದ ನಂತರಪ್ರತಿಭಟನೆಯ ಸ್ಥಳವಾದ ನವದೆಹಲಿಯ ಜಂತರ್ ಮಂತರ್‌ನಿಂದ ಕುಸ್ತಿಪಟುಗಳನ್ನು ತೆರವು ಮಾಡಿದ್ದರು.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಸ್ವತಂತ್ರ ತನಿಖೆಗೆ ನಡೆಸಬೇಕು ಎಂದು ಮಾಜಿ ಭಾರತೀಯ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ರಾಬಿನ್ ಉತ್ತಪ್ಪ ಮತ್ತು ಇರ್ಫಾನ್ ಪಠಾಣ್ ಕೂಡಾ ಒತ್ತಾಯಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ