ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು.

  • TV9 Web Team
  • Published On - 14:50 PM, 27 Jan 2021
ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು
ಸೌರವ್​ ಗಂಗೂಲಿ

ಕೋಲ್ಕತ್ತಾ:  ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮರಳಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಬುಧವಾರ ಮಧ್ಯಾಹ್ನ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿದೆ.

ಸೌರವ್​ ಗಂಗೂಲಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಟ್ವಿಟ್ಟರ್​ನಲ್ಲಿ ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಮಾಡಿದ್ದಾರೆ. ಸದ್ಯ, ಗಂಗೂಲಿ ಅವರ ಆರೋಗ್ಯ ಪರಿಸ್ಥಿತಿ ಹೇಗಿದೆ ಎನ್ನುವ ವಿಚಾರದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು