AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 ವಿಶ್ವಕಪ್: ICC ನಿರ್ಧಾರಕ್ಕೆ ಕಾಯಲು ಸಾಧ್ಯವಿಲ್ಲ ಎಂದು ಗುಡುಗಿದ BCCI

T20 ವಿಶ್ವಕಪ್ ಆಯೋಜನೆ ಬಗ್ಗೆ ಐಸಿಸಿ ಇನ್ನೂ ಸ್ಪಷ್ಟವಾದ ನಿರ್ಧಾರವನ್ನ ಕೈಗೊಳ್ಳಲು ವಿಳಂಬ ಮಾಡ್ತಿರೋದಕ್ಕೆ ಬಿಸಿಸಿಐ ಬೇಸರ ವ್ಯಕ್ತಪಡಿಸಿದೆ. ಆದ್ದರಿಂದ, ಇನ್ಮೇಲೆ ಐಸಿಸಿ ನಿರ್ಧಾರಕ್ಕೆ ಕಾಯದೇ ಪಂದ್ಯಾವಳಿಯ ಆಯೋಜನೆಯ ಬಗ್ಗೆ ನಿರ್ಧಾರ ಕೈಗೊಳ್ಳೋದಕ್ಕೆ ಮುಂದಾಗಿದೆ. ಜೂನ್​ನಲ್ಲಿ ಸಭೆ ಸೇರಿದ್ದ ಐಸಿಸಿ, ಜುಲೈ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ T20 ವಿಶ್ವಕಪ್ ಬಗ್ಗೆ ಅಂತಿಮ ನಿರ್ಧಾರವನ್ನ ಪ್ರಕಟಿಸೋದಾಗಿ ತಿಳಿಸಿತ್ತು. ಆದರೆ ಈ ಬಗ್ಗೆ ಇನ್ನೂ ಸಹ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ, T20 ವಿಶ್ವಕಪ್ ಬಗ್ಗೆ ಮುಂದುವರಿಯುವ ನಿರ್ಧಾರವನ್ನ ಬಿಸಿಸಿಐ ಕೈಗೊಂಡಿದೆ. […]

T20 ವಿಶ್ವಕಪ್: ICC ನಿರ್ಧಾರಕ್ಕೆ ಕಾಯಲು ಸಾಧ್ಯವಿಲ್ಲ ಎಂದು ಗುಡುಗಿದ BCCI
KUSHAL V
| Updated By: |

Updated on:Jul 06, 2020 | 4:49 PM

Share

T20 ವಿಶ್ವಕಪ್ ಆಯೋಜನೆ ಬಗ್ಗೆ ಐಸಿಸಿ ಇನ್ನೂ ಸ್ಪಷ್ಟವಾದ ನಿರ್ಧಾರವನ್ನ ಕೈಗೊಳ್ಳಲು ವಿಳಂಬ ಮಾಡ್ತಿರೋದಕ್ಕೆ ಬಿಸಿಸಿಐ ಬೇಸರ ವ್ಯಕ್ತಪಡಿಸಿದೆ. ಆದ್ದರಿಂದ, ಇನ್ಮೇಲೆ ಐಸಿಸಿ ನಿರ್ಧಾರಕ್ಕೆ ಕಾಯದೇ ಪಂದ್ಯಾವಳಿಯ ಆಯೋಜನೆಯ ಬಗ್ಗೆ ನಿರ್ಧಾರ ಕೈಗೊಳ್ಳೋದಕ್ಕೆ ಮುಂದಾಗಿದೆ.

ಜೂನ್​ನಲ್ಲಿ ಸಭೆ ಸೇರಿದ್ದ ಐಸಿಸಿ, ಜುಲೈ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ T20 ವಿಶ್ವಕಪ್ ಬಗ್ಗೆ ಅಂತಿಮ ನಿರ್ಧಾರವನ್ನ ಪ್ರಕಟಿಸೋದಾಗಿ ತಿಳಿಸಿತ್ತು. ಆದರೆ ಈ ಬಗ್ಗೆ ಇನ್ನೂ ಸಹ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ, T20 ವಿಶ್ವಕಪ್ ಬಗ್ಗೆ ಮುಂದುವರಿಯುವ ನಿರ್ಧಾರವನ್ನ ಬಿಸಿಸಿಐ ಕೈಗೊಂಡಿದೆ.

ಕೆಲವು ಪ್ರಕಟಣೆಗಳ ವಿಳಂಬದಿಂದಾಗಿ ಬಿಸಿಸಿಐ ಈಗಾಗಲೇ ಸಾಕಷ್ಟು ಸಮಯವನ್ನ ಕಳೆದುಕೊಂಡಿದೆ. ಯಾವಾಗ ಏನು ಮಾಡ್ಬೇಕು ಎಂದು ಬೇರೆಯವರು ನಿರ್ಧರಿಸೋವರೆಗೂ ನಾವು ಕಾಯುವುದಕ್ಕೆ ಸಾಧ್ಯವಿಲ್ಲ ಅನ್ನೋದು ನಮಗೆ ಮನವರಿಕೆಯಾಗಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸ್ಪಷ್ಟಪಡಿಸಿದ್ದಾರೆ.

ಅಮೆರಿಕದಲ್ಲಿ NBA ಸಂರಕ್ಷಿತ ವಲಯದಲ್ಲಿ ಪ್ರಾರಂಭವಾಗುತ್ತಿದೆ. ಇಂಗ್ಲಿಷ್ ಪ್ರೀಮಿಯರ್ ಲೀಗ್ ನಡೆಯುತ್ತಿದೆ. ಮತ್ತು FA ಕಪ್ ಪಂದ್ಯಾವಳಿಯೂ ಕೂಡ ಆರಂಭವಾಗಿದೆ. ಆಸ್ಟ್ರೇಲಿಯಾದ ದೇಶೀಯ ರಗ್ಬಿ ಲೀಗ್ ಕೂಡ ಪ್ರಾರಂಭವಾಗಲಿದೆ. ಹಾಗಾಗಿ ಸೆಪ್ಟೆಂಬರ್‌ನಿಂದ ಯೋಜನೆಗಳನ್ನು ರೂಪಿಸುವ ಅವಶ್ಯಕತೆಯ ಬಗ್ಗೆ ಬಿಸಿಸಿಐ ಎದುರುನೋಡುತ್ತಿದೆ ಎಂದು ಅರುಣ್ ಧುಮಾಲ್ ಹೇಳಿದ್ದಾರೆ.

ಈ ವರ್ಷ ನಡೆಯಬೇಕಾದ T20 ವಿಶ್ವಕಪ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳೋದಕ್ಕೆ ಐಸಿಸಿ ವಿಳಂಬ ಧೋರಣೆ ತಳೆದಿರೋದು ಉದ್ದೇಶ ಪೂರ್ವಕವೋ ಅನ್ನೋದು ಗೊತ್ತಿಲ್ಲ. ಆದರೆ, ಇದರ ಬಗ್ಗೆ ಚಿಂತಿಸದೆ, ಬಿಸಿಸಿಐ IPL ಆಯೋಜಿಸುವ ಬಗ್ಗೆ ಯೋಜನೆ ರೂಪಿಸಿದೆ.

Published On - 4:36 pm, Mon, 6 July 20

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!