Beijing Olympics: ಬೀಜಿಂಗ್ ಒಲಿಂಪಿಕ್ಸ್​ಗೆ ಅಮೆರಿಕ ಬಹಿಷ್ಕಾರ: ಬಹಿರಂಗ ಎಚ್ಚರಿಕೆ ನೀಡಿದ ಚೀನಾ

Beijing Winter Olympics: ವಿಂಟರ್ ಒಲಿಂಪಿಕ್ಸ್ ಎಂಬುದು ರಾಜಕೀಯ ವೇದಿಕೆಯಲ್ಲ. ಅಮೆರಿಕ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಮತ್ತು ದುರ್ಬಲಗೊಳಿಸಲು ಮುಂದಾಗಿದ್ದಾರೆ ಝಾವೊ ನೇರವಾಗಿ ಆರೋಪಿಸಿದ್ದಾರೆ.

Beijing Olympics: ಬೀಜಿಂಗ್ ಒಲಿಂಪಿಕ್ಸ್​ಗೆ ಅಮೆರಿಕ ಬಹಿಷ್ಕಾರ: ಬಹಿರಂಗ ಎಚ್ಚರಿಕೆ ನೀಡಿದ ಚೀನಾ
Beijing Winter Olympics
Follow us
| Updated By: ಝಾಹಿರ್ ಯೂಸುಫ್

Updated on:Dec 07, 2021 | 5:06 PM

ಬೀಜಿಂಗ್ 2022 ರ ಚಳಿಗಾಲದ ಒಲಂಪಿಕ್ಸ್​ ಅನ್ನು ಅಮೆರಿಕ ಬಹಿಷ್ಕರಿಸಿದೆ. ಚೀನಾದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಂದಿಟ್ಟು, ಅಮೆರಿಕವು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ಗೆ ರಾಜತಾಂತ್ರಿಕ ಬಹಿಷ್ಕಾರ ಹಾಕಿರುವುದಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಉಭಯ ದೇಶಗಳ ವಾಕ್ಸಮರ ಮುಂದುವರೆದಿದೆ. ಅಮೆರಿಕ ಚಳಿಗಾಲದ ಒಲಿಂಪಿಕ್ಸ್​ಗೆ ಬಹಿಷ್ಕಾರ ಹಾಕುತ್ತಿದ್ದಂತೆ, ಇತ್ತ ಚೀನಾ ಸರ್ಕಾರವು, ಇದಕ್ಕೆ ಯುನೈಟೆಡ್ ಸ್ಟೇಟ್ಸ್​ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಮೂಲಕ ಅಮೆರಿಕಾಗೆ ಚೀನಾ ಬಹಿರಂಗವಾಗಿಯೇ ಎಚ್ಚರಿಕೆ ರವಾನಿಸಿದೆ.

ಮುಂದಿನ ವರ್ಷದ ಫೆಬ್ರವರಿಯಲ್ಲಿ ಪ್ರಾರಂಭವಾಗಲಿರುವ ಕ್ರೀಡಾಕೂಟದಲ್ಲಿ ಅಮೆರಿಕ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದೆ. ಚೀನಾದಲ್ಲಿನ ಉಯ್ಘರ್ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ “ಜನಾಂಗೀಯ ಹತ್ಯೆ”ಯನ್ನು ಪ್ರಸ್ತಾಪಿಸಿ, ಮಾನವನ ಹಕ್ಕು ಉಲ್ಲಂಘನೆಯಾಗುತ್ತಿರುವ ದೇಶದ ಕ್ರೀಡಾಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ತಿಳಿಸಿದೆ.

ಸುಳ್ಳು ಮತ್ತು ವದಂತಿಗಳ ಆಧಾರದ ಮೇಲೆ ಸೈದ್ಧಾಂತಿಕ ಪೂರ್ವಾಗ್ರಹದಿಂದ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಯುಎಸ್ ಪ್ರಯತ್ನವು ಕೆಟ್ಟ ಉದ್ದೇಶಗಳನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ತಿಳಿಸಿದ್ದಾರೆ.

ವಿಂಟರ್ ಒಲಿಂಪಿಕ್ಸ್ ಎಂಬುದು ರಾಜಕೀಯ ವೇದಿಕೆಯಲ್ಲ. ಅಮೆರಿಕ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಮತ್ತು ದುರ್ಬಲಗೊಳಿಸಲು ಮುಂದಾಗಿದ್ದಾರೆ ಝಾವೊ ನೇರವಾಗಿ ಆರೋಪಿಸಿದ್ದಾರೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, ಚೀನಾದ ಶಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಇತರ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪರಿಗಣಿಸಿ ಆಡಳಿತವು ಯಾವುದೇ ರಾಜತಾಂತ್ರಿಕ ಅಥವಾ ಅಧಿಕೃತ ಪ್ರಾತಿನಿಧ್ಯವನ್ನು ಗೇಮ್ಸ್‌ಗೆ ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ಅಮೆರಿಕ ಸರ್ಕಾರದ ನಡೆಯನ್ನು ಯುಎಸ್‌ನಲ್ಲಿ ಮಾನವ ಹಕ್ಕುಗಳ ಸಂಘಟನೆ ಮತ್ತು ರಾಜಕಾರಣಿಗಳು ಸ್ವಾಗತಿಸಿದ್ದಾರೆ.

ಕೊರೋನಾ ವಿಚಾರವಾಗಿ ಈ ಹಿಂದೆ ಚೀನಾ-ಅಮೆರಿಕ ನಡುವೆ ಶೀತಮ ಸಮರ ಏರ್ಪಟ್ಟಿತ್ತು. ಇದೀಗ ವಿಂಟರ್ ಒಲಿಂಪಿಕ್ಸ್ ಸಂಬಂಧ ಉಭಯ ದೇಶಗಳ ರಾಜತಾಂತ್ರಿಕ ಮತ್ತಷ್ಟು ಹದಗೆಡುವ ಸೂಚನೆ ನೀಡುತ್ತಿದೆ.

ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್​: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

(Beijing Warns US Will “Pay The Price” For Olympics Diplomatic Boycott)

Published On - 5:04 pm, Tue, 7 December 21

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ