AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ben Stokes: ಟೆಸ್ಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಬೆನ್ ಸ್ಟೋಕ್ಸ್

Ben Stokes Records: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸುವ ಮೂಲಕ ಇಂಗ್ಲೆಂಡ್ ತಂಡದ ನಾಯಕ 43 ವರ್ಷಗಳ ಹಳೆಯ ರೆಕಾರ್ಡ್​ವೊಂದನ್ನು ಮುರಿದಿದ್ದಾರೆ. ಅದು ಕೂಡ ಇಂಗ್ಲೆಂಡ್​ನ ಮಾಜಿ ನಾಯಕ ಇಯಾನ್ ಬಾಥಮ್ ಬರೆದಿದ್ದ ದಾಖಲೆ ಎಂಬುದು ವಿಶೇಷ. ಇದೀಗ ಮಾಜಿ ನಾಯಕನ ವಿಶೇಷ ದಾಖಲೆಯನ್ನು ಇಂಗ್ಲೆಂಡ್​ನ ಹಾಲಿ ನಾಯಕ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on: Jul 29, 2024 | 12:59 PM

Share
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಹೊಸ ದಾಖಲೆ ಬರೆದಿದ್ದಾರೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ 4ನೇ ಇನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸ್ಟೋಕ್ಸ್ ಬಿರುಸಿನ ಇನಿಂಗ್ಸ್ ಆಡಿದರು.

1 / 6
ವಿಂಡೀಸ್ ನೀಡಿದ 81 ರನ್​ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡದಕ್ಕೆ ಸ್ಟೋಕ್ಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಪರಿಣಾಮ ಸ್ಟೋಕ್ಸ್ ಬ್ಯಾಟ್​ನಿಂದ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳು ಮೂಡಿಬಂತು. ಈ ಮೂಲಕ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 6
ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬೆನ್ ಸ್ಟೋಕ್ಸ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಮಾಜಿ ನಾಯಕ ಇಯಾನ್ ಬಾಥಮ್ ಹೆಸರಿನಲ್ಲಿತ್ತು. 1981 ರಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ  ಬಾಥಮ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ 43 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಬೆನ್ ಸ್ಟೋಕ್ಸ್ ಯಶಸ್ವಿಯಾಗಿದ್ದಾರೆ.

3 / 6
ಇದೇ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಹಾಗೂ ಬೆನ್ ಡಕೆಟ್ ಜೊತೆಗೂಡಿ ಕೇವಲ 4.2 ಓವರ್​ಗಳಲ್ಲಿ ತಂಡದ ಮೊತ್ತವನ್ನು 50 ರನ್​ಗಳ ಗಡಿದಾಟಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಐವತ್ತು ರನ್​ ಕಲೆಹಾಕಿದ ತಂಡವೆಂಬ ದಾಖಲೆಯನ್ನು ಇಂಗ್ಲೆಂಡ್ ನಿರ್ಮಿಸಿದೆ.

4 / 6
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ವೆಸ್ಟ್ ಇಂಡೀಸ್ ನೀಡಿದ 81 ರನ್​ಗಳ ಗುರಿಯನ್ನು ಇಂಗ್ಲೆಂಡ್ ಕೇವಲ 7.2 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ತಂಡ 3-0 ಅಂತರದಿಂದ ಗೆದ್ದುಕೊಂಡಿದೆ.

5 / 6
ಅಂದಹಾಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಿಸ್ಬಾ-ಉಲ್-ಹಕ್ ಹೆಸರಿನಲ್ಲಿದೆ. 2014 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮಿಸ್ಬಾ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ

ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ

RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ

‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ

ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ

ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ

ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ

ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ

ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ