Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ

Asian Championships 2023: ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ
Bhavani Devi
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 19, 2023 | 6:53 PM

Asian Championships 2023: ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪೆನ್ಸರ್ ಭವಾನಿ ದೇವಿ (Bhavani Devi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟರ್‌ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ) ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟಿದ್ದಾರೆ. ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

ಆದರೆ ಸೆಮಿಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಭವಾನಿ 14-15 ಅಂತರದಿಂದ ಸೋಲನುಭವಿಸಿದರು. ಇದಾಗ್ಯೂ ಮೂರನೇ ಸ್ಥಾನ ಪಡೆಯುವ ಮೂಲಕ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಬರೆದರು.

ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೊಂಡಾಡಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿಯನ್ನು ಸೋಲಿಸಿ ಪದಕ ಗೆದ್ದಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಂದು ಅಂತ್ಯಕ್ಕೂ ಒಂದು ಆರಂಭವಿದೆ. ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ನಿಮ್ಮ ಅದ್ಭುತ ಸಾಧನೆಗಳು ಮತ್ತು ಆ ದಿನ ನೀವು ತೆಗೆದುಕೊಂಡ ಪ್ರತಿಜ್ಞೆಯು ಭಾರತಕ್ಕಾಗಿ ಫೆನ್ಸಿಂಗ್ ಕ್ರೀಡೆಯಲ್ಲಿ ಕನಸನ್ನು ನನಸಾಗಿಸಲು ಮೆಟ್ಟಿಲುಗಳಾಗಿವೆ.

ನಿಮ್ಮ ಈ ಸಾಧನೆಯು ಸಹ ಕ್ರೀಡಾಪಟುಗಳಿಗೆ ಸ್ಫೂರ್ತಿ ಆಗಲಿದೆ. ಅಲ್ಲದೆ ಈ ಕ್ರೀಡೆಗೂ ಅರ್ಹವಾದ ಮನ್ನಣೆಗೆ ಸಿಗುವಂತೆ ಮಾಡಲಿದೆ. ನಿಮ್ಮ ಪ್ರಯಾಣವು ಭಾರತೀಯ ಫೆನ್ಸಿಂಗ್‌ನಲ್ಲಿ ಹೊಸ ಯುಗಕ್ಕೆ ನಾಂದಿಯಾಡಲಿದೆ. ಈ ಮಹೋನ್ನತ ಸಾಧನೆಗಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಎತ್ತರಕ್ಕೆ ಏರುತ್ತಿರಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು