AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಅಥ್ಲೀಟ್‌ಗೆ ಟಿಕೆಟ್ ನೀಡಿದ ಬಿಜೆಪಿ

Lok Sabha Elections 2024: ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಕ್ರೀಡಾ ಲೋಕದ ಯಾರಿಗಾದರೂ ಟಿಕೆಟ್ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಕೇಂದ್ರೀಕೃತವಾಗಿತ್ತು. ಅಲ್ಲದೆ ಈ ಮೊದಲು ಹಲವು ಕ್ರಿಕೆಟಿಗರ ಹೆಸರುಗಳು ಚರ್ಚೆಯಾಗುತ್ತಿದ್ದವು. ಆದರೆ ಬಿಜೆಪಿ ಹಿರಿಯ ಪ್ಯಾರಾ-ಅಥ್ಲೀಟ್ ದೇವೇಂದ್ರ ಝಜಾರಿಯಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

Lok Sabha Elections 2024: ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಅಥ್ಲೀಟ್‌ಗೆ ಟಿಕೆಟ್ ನೀಡಿದ ಬಿಜೆಪಿ
ದೇವೇಂದ್ರ ಝಜಾರಿಯಾ
ಪೃಥ್ವಿಶಂಕರ
|

Updated on: Mar 03, 2024 | 5:45 PM

Share

ಇನ್ನು ಕೆಲವೇ ದಿನಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Elections 2024) ನಡೆಯಲಿದ್ದು, ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಹಂತಹಂತವಾಗಿ ಘೋಷಿಸುತ್ತಿವೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಮಾರ್ಚ್ 2 ರ ಶನಿವಾರದಂದು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ವಿವಿಧ ರಾಜ್ಯಗಳ 195 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ಉದ್ದೇಶದಿಂದ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಪಿ ನಡ್ಡಾ ನೇತೃತ್ವದ ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಅಳೆದು ತೂಗಿ ಅರ್ಹರಿಗೆ ಟಿಕೆಟ್ ನೀಡುವ ಕೆಲಸ ಮಾಡಿದೆ. ಅಂತಹವರಲ್ಲಿ ಕ್ರೀಡಾ ಲೋಕದ ಸಾಧಕ ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ದೇವೇಂದ್ರ ಝಜಾರಿಯಾ (Devendra Jhajharia) ಕೂಡ ಒಬ್ಬರು.

ಪ್ಯಾರಾ ಅಥ್ಲೀಟ್‌ನನ್ನು ಕಣಕ್ಕಿಳಿಸಿದ ಬಿಜೆಪಿ

ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಕ್ರೀಡಾ ಲೋಕದ ಯಾರಿಗಾದರೂ ಟಿಕೆಟ್ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಕೇಂದ್ರೀಕೃತವಾಗಿತ್ತು. ಅಲ್ಲದೆ ಈ ಮೊದಲು ಹಲವು ಕ್ರಿಕೆಟಿಗರ ಹೆಸರುಗಳು ಚರ್ಚೆಯಾಗುತ್ತಿದ್ದವು. ಆದರೆ ಬಿಜೆಪಿ ಹಿರಿಯ ಪ್ಯಾರಾ-ಅಥ್ಲೀಟ್ ದೇವೇಂದ್ರ ಝಜಾರಿಯಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಝಜಾರಿಯಾ ಅವರು ರಾಜಸ್ಥಾನದ ಚುರು ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ.

Gautam Gambhir: ಗೌತಮ್ ಗಂಭೀರ್ ರಾಜಕೀಯ ತೊರೆಯಲು ಅಸಲಿ ಕಾರಣ ಏನು ಗೊತ್ತಾ?

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ

ರಾಜಸ್ಥಾನದ 15 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸಿದ್ದು, 42 ವರ್ಷದ ದೇವೇಂದ್ರ ಝಜಾರಿಯಾ ಚುರು ಕ್ಷೇತ್ರದ ಟಿಕೆಟ್ ಪಡೆದಿದ್ದಾರೆ. ಝಜಾರಿಯಾ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುತ್ತಿದ್ದಾರೆ. ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ರಮುಖ ಅಥ್ಲೀಟ್‌ಗಳಲ್ಲಿ ಒಬ್ಬರಾದ ಝಜಾರಿಯಾ ದೇಶಕ್ಕಾಗಿ ಅನೇಕ ಪದಕಗಳನ್ನು ಗೆದ್ದಿದ್ದಾರೆ. 2004ರಲ್ಲಿ ನಡೆದ ಅಥೆನ್ಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಮೊದಲ ಪದಕ ಜಯಿಸಿದ್ದ ಝಜಾರಿಯಾ, ನಂತರ ಜಾವೆಲಿನ್‌ನಲ್ಲಿ 62.15 ಮೀಟರ್‌ ದೂರ ಎಸೆದು ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಟೋಕಿಯೊ ಕ್ರೀಡಾಕೂಟದಲ್ಲಿ ಬೆಳ್ಳಿ

ಅಥೆನ್ಸ್ ಮಾತ್ರವಲ್ಲದೆ ಝಜಾರಿಯಾ, 2016ರಲ್ಲಿ ನಡೆದ ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಮತ್ತೆ ಅದೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಇದಲ್ಲದೆ 2020 ರಲ್ಲಿ ನಡೆದ ಟೋಕಿಯೊ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಝಜಾರಿಯಾ ಗೆದ್ದಿದ್ದಾರೆ.

ಯುವರಾಜ್-ಶಮಿ ಬಗ್ಗೆ ಊಹಾಪೋಹ

ಅಭ್ಯರ್ಥಿಗಳ ಘೋಷಣೆಗೆ ಮೊದಲು ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್ ಹಾಗೂ ಸ್ಟಾರ್ ಕ್ರಿಕೆಟಿಗ ಯುವರಾಜ್ ಸಿಂಗ್ ಬಗ್ಗೆಯೇ ಹೆಚ್ಚಿನ ಊಹಾಪೋಹಗಳು ಹಬ್ಬಿದ್ದವು. ಕಳೆದ ಹಲವು ದಿನಗಳಿಂದ ಪಂಜಾಬ್‌ನ ಗುರುದಾಸ್‌ಪುರದಿಂದ ಯುವರಾಜ್‌ಗೆ ಟಿಕೆಟ್ ಸಿಗಬಹುದು ಎಂದು ಹೇಳಲಾಗುತ್ತಿತ್ತು. ಆದಾಗ್ಯೂ, ಶುಕ್ರವಾರ, ಯುವರಾಜ್ ಈ ವರದಿಗಳನ್ನು ಟ್ವೀಟ್‌ನಲ್ಲಿ ನಿರಾಕರಿಸಿದ್ದು, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಯುವರಾಜ್ ಹೊರತಾಗಿ, ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಬಗ್ಗೆಯೂ ವದಂತಿಗಳೂ ಇದ್ದವು. ಆದರೆ ಅದು ಕೂಡ ಸುಳ್ಳೇದು ಸಾಭೀತಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ