AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರೋಚಕ ಪಂದ್ಯ… ಅಂತಿಮ ನಿಮಿಷದಲ್ಲಿ ಗೆದ್ದ ಬ್ರೆಝಿಲ್

FIFA World Cup 2026: ಫಿಫಾ ವಿಶ್ವಕಪ್​ನ ರೌಂಡ್ ಆಫ್ 32 ಸುತ್ತಿನಲ್ಲಿ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದು ಕೆನಡಾ ತಂಡ ಮುಂದಿನ ಹಂತಕ್ಕೇರಿದೆ. ಇದೀಗ ಬ್ರೆಝಿಲ್ ತಂಡವು ಜಪಾನ್ ತಂಡಕ್ಕೆ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.

ರಣರೋಚಕ ಪಂದ್ಯ... ಅಂತಿಮ ನಿಮಿಷದಲ್ಲಿ ಗೆದ್ದ ಬ್ರೆಝಿಲ್
Brazil Image Credit source: AP Photo/Manu Fernandez)
ಝಾಹಿರ್ ಯೂಸುಫ್
|

Updated on: Jun 30, 2026 | 7:25 AM

Share

ಫಿಫಾ ವಿಶ್ವಕಪ್ 2026ರ ರೌಂಡ್ ಆಫ್-32 ಸುತ್ತಿನ 2ನೇ ಪಂದ್ಯದಲ್ಲಿ ಬ್ರೆಝಿಲ್ ತಂಡ ರೋಚಕ ಜಯ ಸಾಧಿಸಿದೆ. ಹೂಸ್ಟನ್‌ನ ಎನ್‌ಆರ್‌ಜಿ ಸ್ಟೇಡಿಯಂನಲ್ಲಿ ನಡೆದ ಈ ನಾಕೌಟ್ ಪಂದ್ಯದಲ್ಲಿ ಬ್ರೆಝಿಲ್ ಮತ್ತು ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಆರಂಭದಿಂದಲೇ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಮ್ಯಾಚ್​ನಲ್ಲಿ ಮೊದಲ ಗೋಲು ಬಾರಿಸಿದ್ದು ಜಪಾನ್. ಆದರೆ ಪಂದ್ಯ ಗೆದ್ದಿದ್ದು ಬ್ರೆಝಿಲ್ ಎಂಬುದು ವಿಶೇಷ.

ಮೊದಲಾರ್ಧದಲ್ಲಿ ಜಪಾನ್ ಪರಾಕ್ರಮ:

ಈ ಪಂದ್ಯದ ಆರಂಭದಿಂದಲೂ ಜಪಾನ್ ಆಟಗಾರರು ಬ್ರೆಝಿಲ್‌ಗೆ ತೀವ್ರ ಪೈಪೋಟಿ ನೀಡಿದ್ದರು. ಪಂದ್ಯದ 29ನೇ ನಿಮಿಷದಲ್ಲಿ ಬ್ರೆಝಿಲ್‌ನ ಡ್ಯಾನಿಲೋ ಮಾಡಿದ ಸಣ್ಣ ತಪ್ಪನ್ನು ಬಳಸಿಕೊಂಡ ಜಪಾನ್‌ನ ಕೈಶು ಸಾನೊ, ಬ್ರೆಝಿಲ್ ಗೋಲ್‌ಕೀಪರ್ ಅಲಿಸನ್ ಬೆಕರ್ ಅವರನ್ನು ವಂಚಿಸಿ ಮೊದಲ ಗೋಲ್ ಬಾರಿಸಿದರು. ಈ ಮೂಲಕ ಜಪಾನ್ ತಂಡವು ಮೊದಲಾರ್ಧದಲ್ಲಿ 1-0 ಮುನ್ನಡೆ ಕಾಯ್ದುಕೊಂಡಿತು.

ಬ್ರೆಝಿಲ್ ಭರ್ಜರಿ ಕಂಬ್ಯಾಕ್:

ದ್ವಿತೀಯಾರ್ಧದಲ್ಲಿ ಪಂದ್ಯದ ಗತಿಯನ್ನು ಬದಲಿಸಲು ಬ್ರೆಝಿಲ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಹೊಸ ತಂತ್ರ ರೂಪಿಸಿದರು. ಪಂದ್ಯದ 56ನೇ ನಿಮಿಷದಲ್ಲಿ ಕಾರ್ನರ್ ಕಿಕ್ ಮೂಲಕ ಸಿಕ್ಕ ಅವಕಾಶವನ್ನು ಬಳಸಿಕೊಂಡ ಅನುಭವಿ ಆಟಗಾರ ಕ್ಯಾಸೆಮಿರೊ, ತಲೆಯಿಂದ ಚೆಂಡನ್ನು ಜಪಾನ್ ನೆಟ್‌ಗೆ ತಳ್ಳುವ ಮೂಲಕ 1-1 ಗೋಲುಗಳ ಸಮಬಲ ತಂದರು.

ಮಾರ್ಟಿನೆಲ್ಲಿ ಮ್ಯಾಜಿಕ್:

ಉಭಯ ತಂಡಗಳ ಗೋಲು 1-1 ಅಂತರದಿಂದ ಸಮಗೊಳ್ಳುತ್ತಿದ್ದಂತೆ ಪೈಪೋಟಿ ತೀವ್ರಗೊಂಡಿತು. ಇದಾಗ್ಯೂ ಎರಡೂ ತಂಡಳಿಗೆ ಎರಡನೇ ಗೋಲು ಬಾರಿಸಲು ಸಾಧ್ಯವಾಗಲಿಲ್ಲ. ಪರಿಣಾಮ ಪಂದ್ಯ ಮುಕ್ತಾಯದ ಹಂತಕ್ಕೆ ಬಂದಾಗಲೂ ಉಭಯ ತಂಡಗಳು 1-1 ಸಮಬಲದಲ್ಲಿದ್ದವು.

ಆದರೆ, ಇಂಜುರಿ ಟೈಮ್‌ನ 95ನೇ ನಿಮಿಷದಲ್ಲಿ ಬ್ರೂನೋ ಗಿಮರೈಸ್ ನೀಡಿದ ಅದ್ಭುತ ಪಾಸ್ ಅನ್ನು ರಿಸೀವ್ ಮಾಡಿದ ಗೇಬ್ರಿಯಲ್ ಮಾರ್ಟಿನೆಲ್ಲಿ, ಜಪಾನ್ ರಕ್ಷಣಾ ಕೋಟೆಯನ್ನು ಭೇದಿಸಿ ಗೋಲ್ ಬಾರಿಸಿದರು. ಈ ಕೊನೆಯ ಕ್ಷಣದ ಗೋಲ್ ಇಡೀ ಕ್ರೀಡಾಂಗಣದಲ್ಲಿದ್ದ ಬ್ರೆಝಿಲ್ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು.

ಪಂದ್ಯ ಕೊನೆಗೊಳ್ಳಲು ನಿಮಿಷಗಳು ಮಾತ್ರ ಬಾಕಿ ಇರುವಾಗ ಮೂಡಿಬಂದ ಈ ಗೋಲಿನೊಂದಿಗೆ ಬ್ರೆಝಿಲ್ ತಂಡವು 2-1 ಅಂತರದಿಂದ ಗೆದ್ದು ಪ್ರಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದೆ.

ಇದನ್ನೂ ಓದಿ: ಫಿಫಾ ವಿಶ್ವಕಪ್ 2026 ನಾಕೌಟ್ ವೇಳಾಪಟ್ಟಿ ಪ್ರಕಟ

ಬ್ರೆಝಿಲ್ ಮುಂದಿನ ಎದುರಾಳಿ ಯಾರು?

ಈ ರೋಚಕ ಗೆಲುವಿನೊಂದಿಗೆ ಬ್ರೆಝಿಲ್ ತಂಡ ಮುಂದಿನ ಹಂತಕ್ಕೆ ಲಗ್ಗೆ ಇಟ್ಟಿದೆ. ಜುಲೈ 5 ರಂದು ನ್ಯೂಯಾರ್ಕ್ ನ್ಯೂಜೆರ್ಸಿ ಸ್ಟೇಡಿಯಂನಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಬ್ರೆಝಿಲ್ ತಂಡವು ನಾರ್ವೆ ಅಥವಾ ಐವರಿ ಕೋಸ್ಟ್ ತಂಡವನ್ನು ಎದುರಿಸಲಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ