WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್

ನೂತನ ಡಬ್ಲ್ಯುಎಫ್‌ಐ ಅಧ್ಯಕ್ಷರಾದ ಸಂಜಯ್ ಸಿಂಗ್ ಅವರು ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಆಪ್ತರಾಗಿದ್ದು, ಈ ಕಾರಣದಿಂದಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಹೇಳಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದಿದ್ದಾರೆ.

WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್
ಸಾಕ್ಷಿ ಮಲ್ಲಿಕ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 6:09 PM

ಭಾರತೀಯ ಕುಸ್ತಿ ಫೆಡರೇಷನ್ (WFI) ಚುನಾವಣೆಗೆ ಇಂದು (ಗುರುವಾರ) ಮತದಾನ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್ ಆಯ್ಕೆ ಆಗಿದ್ದಾರೆ. ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದು ವಿವಾದಕ್ಕೀಡಾಗಿದ್ದ ಡಬ್ಲ್ಯುಎಫ್‌ಐನ ನಿರ್ಗಮಿತ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಅವರ ಆಪ್ತರಾಗಿದ್ದ ಸಂಜಯ್ ಸಿಂಗ್ ಡಬ್ಲ್ಯುಎಫ್‌ಐ ಅಧ್ಯಕ್ಷರಾದ ಬೆನ್ನಲ್ಲೇ ಒಲಿಂಪಿಕ್ ಪದಕ ವಿಜೇತೆ ಮತ್ತು ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ. ನೂತನ ಡಬ್ಲ್ಯುಎಫ್‌ಐ ಅಧ್ಯಕ್ಷರಾದ ಸಂಜಯ್ ಸಿಂಗ್ ಅವರು ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಆಪ್ತರಾಗಿದ್ದು, ಈ ಕಾರಣದಿಂದಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಹೇಳಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದಿದ್ದಾರೆ.

ಈ ಫಲಿತಾಂಶ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರಿಗೆ ನಿರಾಸೆಯನ್ನು ತಂದಿದೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ “ಸಂಜಯ್ ಸಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿ ಆಯ್ಕೆಯಾದ ನಂತರ, ಮಹಿಳಾ ಕುಸ್ತಿಪಟುಗಳು ಕಿರುಕುಳವನ್ನು ಎದುರಿಸುತ್ತಲೇ ಇರುತ್ತಾರೆ. ಇಲ್ಲಿ ನಮಗೆ ನ್ಯಾಯ ಹೇಗೆ? ಮತ್ತು ಅದನ್ನು ಹೇಗೆ ಪಡೆದುಕೊಳ್ಳುವುದು ಎಂದು ಗೊತ್ತಾಗುತ್ತಿಲ್ಲ. ಈ ಘಟನೆಯಿಂದ ನಮ್ಮ ಕುಸ್ತಿ ವೃತ್ತಿಜೀವನದ ಭವಿಷ್ಯವು ಕತ್ತಲೆಯಲ್ಲಿದೆ. ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

“ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರದೃಷ್ಟಕರ, ನಾವು ಯಾವುದೇ ಪಕ್ಷದೊಂದಿಗೆ ನಂಟು ಹೊಂದಿಲ್ಲ, ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ, ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೆವು, ಆದರೆ ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಹಾಯಕ WFI ಅಧ್ಯಕ್ಷರಾಗಿದ್ದಾರೆ.” ಎಂದು ಮಾಧ್ಯಮಗಳೊಂದಿಗೆ ಒಲಂಪಿಕ್ ಕಂಚಿನ ಪದಕ ವಿಜೇತ ಪುನಿಯಾ ಹೇಳಿದ್ದಾರೆ.

ಕುಸ್ತಿ ಸಂಸ್ಥೆಯು ಮಹಿಳಾ ಮುಖ್ಯಸ್ಥರನ್ನು ಪಡೆಯಬೇಕೆಂಬ ಆಸೆ ಇತ್ತು, ಆದರೆ ಅದು ನಡೆಯಲಿಲ್ಲ. ಇದಕ್ಕಾಗಿ ನಾವು ಹೋರಾಟ ಮಾಡಿದ್ದೇವು ಆದರೆ ಇಂದು ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಆಪ್ತರೇ ಅಧ್ಯಕ್ಷರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದು ಹೇಳಿ ಸಾಕ್ಷಿ ಮಲಿಕ್ ತುಂಬಾ ನೋವಿನಿಂದಲ್ಲೇ ತನ್ನ ಬೂಟುಗಳನ್ನು ಮೇಜಿನ ಮೇಲೆ ಇಟ್ಟರು.

ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

ಜಂತರ್ ಮಂತರ್‌ನಲ್ಲಿ ಈ ಆರೋಪಕ್ಕೆ ಸಂಬಂಧಿಸಿದಂತೆ ಭಾರೀ ದೊಡ್ಡ ಮಟ್ಟದಲ್ಲಿ ಹಲವು ಕುಸ್ತಿಪಟು ಪ್ರತಿಭಟನೆಯನ್ನು ನಡೆಸಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಈ ಪ್ರತಿಭಟನೆಯನ್ನು ನಡೆಸಲಾಗಿತ್ತು. ಸರ್ಕಾರದ ಅವರ ಮೇಲೆ ತನಿಖೆಗೆ ಆದೇಶದ ನಂತರ ಈ ಪ್ರತಿಭಟನೆಯನ್ನು ಹಿಂಪಡೆದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಯಾವುದೇ ಸಹಾಯಕ ಅಥವಾ ಸಂಬಂಧಿ ಕುಸ್ತಿ ಸಂಸ್ಥೆಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಕುಸ್ತಿಪಟುಗಳಿಗೆ ಭರವಸೆ ನೀಡಲಾಯಿತು. ಬ್ರಿಜ್ ಭೂಷಣ್ ಅವರ ಪುತ್ರ ಪ್ರತೀಕ್ ಮತ್ತು ಅಳಿಯ ವಿಶಾಲ್ ಸಿಂಗ್ ಚುನಾವಣಾ ಸ್ಪರ್ಧೆಗೆ ಮಾಡುವ ಸಾಧ್ಯತೆಗಳು ಇತ್ತು. ಆದರೆ ಅವರ ಸಹಾಯಕ ಸಂಜಯ್ ಸಿಂಗ್ ಅವರು ಅಧ್ಯಕ್ಷರಾಗಿದ್ದಾರೆ.

ಸಂಜಯ್ ಸಿಂಗ್ ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು WFI ಯ ಕೊನೆಯ ಕಾರ್ಯಕಾರಿ ಮಂಡಳಿಯಲ್ಲಿ ಹಾಗೂ 2019 ರಿಂದ ಅದರ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಚುನಾವಣೆಯಲ್ಲಿ ಗೆದ್ದ ನಂತರ ಇದು ಸುಳ್ಳಿನ ಮೇಲೆ ಸತ್ಯದ ಗೆಲುವು ಎಂದು ಸಂಜಯ್ ಸಿಂಗ್ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Thu, 21 December 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ