AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪುಗಳು ಸಹಜ, ನಮ್ಮ ಗುರಿ ವಿಶ್ವಕಪ್​: ಶ್ರೇಯಸ್ ಅಯ್ಯರ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಕ್ಲೀನ್ ಸ್ವೀಪ್ ಮುಖಭಂಗದ ನಂತರ, ನೂತನ ನಾಯಕ ಶ್ರೇಯಸ್ ಅಯ್ಯರ್ ಅವರು ತಮ್ಮ ಕಠಿಣ ನಿರ್ಧಾರಗಳು ಮತ್ತು ಭವಿಷ್ಯದ ಯೋಜನೆಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಸರಣಿ ಸೋಲಿನ ನಿರಾಶೆಯ ನಡುವೆಯೂ ಧೃತಿಗೆಡದ ಅವರು, ತಂಡದ ತಪ್ಪುಗಳನ್ನು ಒಪ್ಪಿಕೊಳ್ಳುತ್ತಲೇ ಯುವ ಆಟಗಾರರ ಬೆಂಬಲಕ್ಕೆ ನಿಂತಿದ್ದಾರೆ.

ತಪ್ಪುಗಳು ಸಹಜ, ನಮ್ಮ ಗುರಿ ವಿಶ್ವಕಪ್​: ಶ್ರೇಯಸ್ ಅಯ್ಯರ್
Shreyas Iyer Image Credit source: BCCI
ಝಾಹಿರ್ ಯೂಸುಫ್
|

Updated on: Jul 13, 2026 | 8:05 AM

Share

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಇದರ ನಡುವೆ ಭಾರತ ಟಿ20 ತಂಡದ ನಾಯಕ ಶ್ರೇಯಸ್ ಅಯ್ಯರ್ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರು ತಂಡದ ಭವಿಷ್ಯ ಹಾಗೂ ಆಟಗಾರರ ಮನೋಭಾವದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ವಿದೇಶದಲ್ಲಿ ಕಠಿಣ ಸವಾಲು:

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಪಡೆಯನ್ನು ಮುನ್ನಡೆಸಿದ್ದ ಅಯ್ಯರ್, ಈ ಪ್ರವಾಸವನ್ನು ಒಂದು ದೊಡ್ಡ ಕಲಿಕೆಯ ಹಂತ ಎಂದು ಕರೆದಿದ್ದಾರೆ. ಐರ್ಲೆಂಡ್ ವಿರುದ್ಧ 2-0 ಮತ್ತು ಇಂಗ್ಲೆಂಡ್ ವಿರುದ್ಧ 4-0 ಅಂತರದಿಂದ ಸೋತರೂ, ತಂಡದ ಮೇಲೆ ಭರವಸೆ ಕಳೆದುಕೊಳ್ಳದ ಅವರು, ಮುಂದಿನ ದಿನಗಳಲ್ಲಿ ನನ್ನ ಸುತ್ತ ಆಡುವ ಪ್ರತಿಯೊಬ್ಬ ಆಟಗಾರನನ್ನು ಬೆಳೆಸಲು ನಾನು ಅತ್ಯಂತ ಸಕಾರಾತ್ಮಕವಾಗಿ ಇರಬೇಕಾಗಿದೆ. ವಿಶೇಷವಾಗಿ ವಿದೇಶಿ ಪರಿಸ್ಥಿತಿಗಳಲ್ಲಿ ಇದು ತುಂಬಾ ಮುಖ್ಯ ಎಂದು ಹೇಳಿದ್ದಾರೆ.

ವಿಶ್ವಕಪ್ ಮೇಲೆ ಕಣ್ಣು:

ಮುಂದಿನ ಪ್ರಮುಖ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಶ್ರೇಯಸ್ ಅಯ್ಯರ್, ನಾವು ಆಸ್ಟ್ರೇಲಿಯಾದಲ್ಲಿ ವಿಶ್ವಕಪ್ (2028) ಆಡಲಿದ್ದೇವೆ. ಅದಕ್ಕೂ ಮುನ್ನ ಹಲವು ಸರಣಿಗಳನ್ನು ಆಡಬೇಕಾಗಿದೆ. ಆದ್ದರಿಂದ ಇಂತಹ ಕಠಿಣ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ತಂಡದಲ್ಲಿ ಅತ್ಯುತ್ತಮ ಒಗ್ಗಟ್ಟು ಮತ್ತು ಸೌಹಾರ್ದತೆಯ ಅಗತ್ಯವಿದೆ” ಎಂದು ಪ್ರತಿಪಾದಿಸಿದರು.

ವಿಮರ್ಶೆಗಿಂತ ಭವಿಷ್ಯದತ್ತ ಗಮನ:

ಸಾರ್ವಜನಿಕ ಮತ್ತು ಸಾಮಾಜಿಕ ಜಾಲತಾಣಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ಶ್ರೇಯಸ್, ಇದು ತಂಡದ ಪರಿವರ್ತನೆಯ ಅವಧಿಯಾಗಿದ್ದು ತಪ್ಪುಗಳು ಸಹಜ ಎಂದಿದ್ದಾರೆ. ಆಸ್ಟ್ರೇಲಿಯಾದಂತಹ ಬೌನ್ಸಿ ಪಿಚ್‌ಗಳನ್ನು ಎದುರಿಸಲು ಯುವ ಆಟಗಾರರಿಗೆ ಮಾನಸಿಕ ಧೈರ್ಯ ತುಂಬುವುದೇ ತಮ್ಮ ಮೊದಲ ಆದ್ಯತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯಾರೋ ಒಬ್ಬರ ಮೇಲೆ ತಪ್ಪು ಹೊರಿಸಲ್ಲ:

ಸರಣಿ ಸೋತಿದ್ದಕ್ಕೆ ತಂಡದ ಒಳಗಿನ ಯಾವುದೇ ಒಬ್ಬ ನಿರ್ದಿಷ್ಟ ಆಟಗಾರನನ್ನು ಹೊಣೆ ಮಾಡುವುದಿಲ್ಲ ಎಂದು ಅಯ್ಯರ್ ಸ್ಪಷ್ಟಪಡಿಸಿದ್ದಾರೆ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ನಾನು ಯಾರೊಬ್ಬರ ಕಡೆಗೂ ಬೆರಳು ತೋರಿಸುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಸೋತಿದ್ದೇವೆ ಮತ್ತು ಒಟ್ಟಾಗಿಯೇ ಇದರಿಂದ ಕಲಿಯುತ್ತೇವೆ ಎಂದು ತಂಡಕ್ಕೆ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ಯಾನಿಕ್ ಸಿನ್ನರ್ ವಿಂಬಲ್ಡನ್ ಚಾಂಪಿಯನ್

ಒಟ್ಟಾರೆಯಾಗಿ, ಐಸಿಸಿ ಟಿ20 ತಂಡಗಳ ಅಂಕ ಪಟ್ಟಿಯಲ್ಲಿ ಅಗ್ರ ಶ್ರೇಯಾಂಕವನ್ನು ಕಳೆದುಕೊಂಡಿರುವುದು ದೊಡ್ಡ ಹಿನ್ನಡೆಯಾದರೂ, ಟೀಮ್ ಇಂಡಿಯಾ ಕಠಿಣ ಪರಿಶ್ರಮದೊಂದಿಗೆ ಬಲಿಷ್ಠವಾಗಿ ಪುನರಾಗಮನ ಮಾಡಲಿದೆ ಎಂಬ ಭರವಸೆಯನ್ನು ಶ್ರೇಯಸ್ ಅಯ್ಯರ್ ವ್ಯಕ್ತಪಡಿಸಿದ್ದಾರೆ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ