ರಾಜ್ಯ ಕ್ರೀಡಾ ಸಚಿವರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 31 ಜಿಲ್ಲೆಗಳಲ್ಲಿ ಖೇಲೊ ಇಂಡಿಯಾ ಕೇಂದ್ರಗಳ ಸ್ಥಾಪನೆಗೆ ಅಸ್ತು!

ಕ್ರೀಡಾಪಟುಗಳ ಆಯ್ಕೆ ಮತ್ತು ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮಾಜಿ ಚಾಂಪಿಯನ್​ಗಳು ಸದರಿ ಕೇಂದ್ರದಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ರಾಜ್ಯ ಕ್ರೀಡಾ ಸಚಿವರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 31 ಜಿಲ್ಲೆಗಳಲ್ಲಿ ಖೇಲೊ ಇಂಡಿಯಾ ಕೇಂದ್ರಗಳ ಸ್ಥಾಪನೆಗೆ ಅಸ್ತು!
ಖೇಲೊ ಇಂಡಿಯಾ
Follow us
ಅರುಣ್​ ಕುಮಾರ್​ ಬೆಳ್ಳಿ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 25, 2021 | 8:16 PM

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಆಗಮಿಸಿದ್ದಾಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಎಲ್ಲ 31 ಜಿಲ್ಲೆಗಳಲ್ಲಿ ಖೇಲೊ ಇಂಡಿಯಾದ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ಖೇಲೊ ಇಂಡಿಯಾದ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಇದು ನಿಜಕ್ಕೂ ರಾಜ್ಯದ ಕ್ರೀಡಾಪಟುಗಳಿಗೆ ಸಂತಸದ ಸುದ್ದಿ, ಇದರ ಲಾಭವನ್ನು ಪ್ರತಿಯೊಬ್ಬ ಕ್ರೀಡಾಪಟುವು ಪಡೆದುಕೊಳ್ಳಬೇಕು ಎಂದು ಸಚಿವ ಡಾ. ನಾರಾಯಣಗೌಡ ಸಲಹೆ ಮಾಡಿದ್ದಾರೆ.

‘ಒಂದು ಜಿಲ್ಲೆ ಒಂದು ಕ್ರೀಡೆ’ ಎಂಬ ಪರಿಕಲ್ಪನೆ ಅಡಿಯಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಖೇಲೊ ಇಂಡಿಯಾ ಯೋಜನೆ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲೂ ಖೇಲೊ ಇಂಡಿಯಾ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಕೇಂದ್ರದ ಕ್ರೀಡಾ ಸಚಿವ ಕಿರಣ್ ರಿಜಿಜು ಬೆಂಗಳೂರಿಗೆ ಆಗಮಿಸಿದ್ದಾಗ, ಸಚಿವ ಡಾ. ನಾರಾಯಣ ಗೌಡ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ರಾಜ್ಯದ 31 ಜಿಲ್ಲೆಗಳಲ್ಲೂ ಖೇಲೊ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅನುದಾನ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಅಂದು ಸಚಿವರಿಗೆ ನೀಡಿದ ಭರವಸೆಯಂತೆ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡುವ ಅಧಿಸೂಚನೆ ಹೊರಡಿಸಿದೆ.

ಕ್ರೀಡಾಪಟುಗಳ ಆಯ್ಕೆ ಮತ್ತು ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮಾಜಿ ಚಾಂಪಿಯನ್​ಗಳು ಸದರಿ ಕೇಂದ್ರದಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕ್ರೀಡಾಪಟುಗಳನ್ನು ಗುರುತಿಸಿ ಆಯ್ಕೆ ಮಾಡುವ ಜವಾಬ್ದಾರಿ ಅವರ ಮೇಲಿರಲಿದೆ. ಕೇಂದ್ರದ ಹಲವು ಮಾರ್ಗಸೂಚಿಗಳಂತೆ ತರಬೇತುದಾರರು ಕಾರ್ಯನಿರ್ವಹಿಸಬೇಕು. ಅಲ್ಲದೆ ಪ್ರತಿ ಕೇಂದ್ರದಲ್ಲಿ ಪುರುಷ ಹಾಗೂ ಮಹಿಳಾ ತರಬೇತುದಾರರು ಕಡ್ಡಾಯವಾಗಿ ಇರಬೇಕು.

ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಕ್ರೀಡಾ ಸೌಕರ್ಯಗಳ ಉನ್ನತೀಕರಣಕ್ಕಾಗಿ 5 ಲಕ್ಷ ರೂ ಮತ್ತು ತರಬೇತುದಾರರು ತಾಂತ್ರಿಕ ಸಿಬ್ಬಂದಿಗಳ ಗೌರವಧನಕ್ಕಾಗಿ ಮತ್ತು ಕ್ರೀಡಾ ಉಪಕರಣಗಳ ಪೂರೈಕೆಗೆ ವಾರ್ಷಿಕ 5 ಲಕ್ಷ ರೂ.ಗಳನ್ನು ನೀಡಲಿದೆ. ಈ ಯೋಜನೆಯು ಮುಂದಿನ 4 ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ.

ಈ ಕೇಂದ್ರದ ಮೂಲಕ ಕ್ರೀಡಾಪಟುಗಳು ಉತ್ತಮ ತರಬೇತಿ ಪಡೆದು, ಸಾಧನೆ ಮಾಡಲು ಅವಕಾಶ ಇದೆ. ಕ್ರೀಡಾಪಟುಗಳು ಇದನ್ನು ಸದುಪಯೋಗಪಡಿಸಿಕೊಂಡು ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರಿಗು, ಕೇಂದ್ರ ಕ್ರೀಡಾ ಸಚಿವ ಕಿರಣ ರಿಜಿಜು, ಕೇಂದ್ರದಲ್ಲಿ ಸಚಿವರಾಗಿರುವ ಕರ್ನಾಟಕಕದ ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದಗೌಡ ಅವರನ್ನು ಸಚಿವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ: Virat Kohli: ವಿರಾಟ್​ ಕೊಯ್ಲಿಗೆ ‘ಮನಿ ಹೈಸ್ಟ್​’ ಪ್ರೊಫೆಸರ್ ಪಾತ್ರ? ವೈರಲ್​ ಆಯ್ತು ಹೊಸ ಲುಕ್​

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’