ಮಾರ್ಷಲ್ ಆರ್ಟ್ಸ್ ಮಾಸ್ಟರ್ ಚಿನ್ಮಯ್ ಶರ್ಮಾ ಖಾತೆ ಸೇರಿದ ಮತ್ತೊಂದು ಗಿನ್ನೆಸ್ ವಿಶ್ವ ದಾಖಲೆ

Chinmay Sharma: ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಮಾರ್ಷಲ್ ಆರ್ಟ್ಸ್ ಮಾಸ್ಟರ್ ಚಿನ್ಮಯ್ ಶರ್ಮಾ ತಮ್ಮ "360 ಡಿಗ್ರಿ ಕಿಕ್" ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಇದರೊಂದಿಗೆ ಅವರು ನೂತನ ಗಿನ್ನಿಸ್ ವಿಶ್ವ ದಾಖಲೆಯನ್ನು ಸಹ ಸೃಷ್ಟಿಸಿದ್ದಾರೆ.

ಮಾರ್ಷಲ್ ಆರ್ಟ್ಸ್ ಮಾಸ್ಟರ್ ಚಿನ್ಮಯ್ ಶರ್ಮಾ ಖಾತೆ ಸೇರಿದ ಮತ್ತೊಂದು ಗಿನ್ನೆಸ್ ವಿಶ್ವ ದಾಖಲೆ
ಚಿನ್ಮಯ್ ಶರ್ಮಾ
Follow us
ಪೃಥ್ವಿಶಂಕರ
|

Updated on:Nov 09, 2024 | 7:34 PM

ಭಾರತ ಒಂದು ಕ್ರಿಕೆಟ್ ಧರ್ಮ ದೇಶ. ಇಲ್ಲಿ ಕ್ರಿಕೆಟ್‌ಗೆ ಸಿಗುವಷ್ಟು ಮನ್ನಣೆ ಇತರ ಆಟಗಳಿಗೆ ಹೆಚ್ಚಾಗಿ ಸಿಗುವುದಿಲ್ಲ. ಹೀಗಾಗಿಯೇ ಭಾರತದಲ್ಲಿ ಇತರ ಕ್ರೀಡೆಗಳ ಮೇಲೆ ಜನರು ತೀರ ಕಡಿಮೆ ಆಸಕ್ತಿ ತೊರುತ್ತಾರೆ. ಜೊತೆಗೆ ಆ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಳಿಸಿಕೊಳ್ಳುವುದಕ್ಕೂ ಹಿಂಜರಿಯುತ್ತಾರೆ. ಅಂತಹ ಕ್ರೀಡೆಗಳಲ್ಲಿ ಮಾರ್ಷಲ್ ಆರ್ಟ್ ಕೂಡ ಒಂದಾಗಿದೆ. ವಾಸ್ತವವಾಗಿ ಈ ಸಮರ ಕಲೆಯ ಮೂಲ ಭಾರತವೇ ಎಂದು ಹೇಳಲಾಗುತ್ತದೆಯಾದರೂ ಅದರ ಜನಪ್ರಿಯತೆ ಕೊರಿಯಾ, ಜಪಾನ್ ಮತ್ತು ಚೀನಾದಂತಹ ದೇಶಗಳಲ್ಲಿ ಹೆಚ್ಚಾಗಿದೆ. ಆದಾಗ್ಯೂ, ಕಳೆದ ಕೆಲವು ವರ್ಷಗಳಿಂದ ಈ ಸಮರ ಕಲೆಗಳ ಬಗೆಗಿನ ಗ್ರಹಿಕೆ ಬದಲಾಗಿದ್ದು, ಯುವ ಪೀಳಿಗೆ ಇದರ ಬಗ್ಗೆ ಹೆಚ್ಚು ಆಸಕ್ತಿ ತೊರುತ್ತಿದ್ದಾರೆ. ಅಂತಹವರಲ್ಲಿ ದೆಹಲಿಯ ನಿವಾಸಿ ಚಿನ್ಮಯ್ ಶರ್ಮಾ ಕೂಡ ಒಬ್ಬರಾಗಿದ್ದು, ಅತಿ ಚಿಕ್ಕ ವಯಸ್ಸಿನಲ್ಲೇ ಮಾರ್ಷಲ್ ಆರ್ಟ್ ಅನ್ನು ಕರಗತ ಮಾಡಿಕೊಳ್ಳುವ ಮೂಲಕ ಹಲವು ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ.

ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿ

ತನ್ನ ಐದನೇ ವಯಸ್ಸಿನಲ್ಲಿಯೇ ಮಾರ್ಷಲ್ ಆರ್ಟಿಸ್ಟ್ ಆಗಿ ತರಬೇತಿಯನ್ನು ಪ್ರಾರಂಭಿಸಿದ 27 ವರ್ಷದ ಚಿನ್ಮಯ್ ಶರ್ಮಾ ಇದುವರೆಗೆ ಹಲವಾರು ಗಿನ್ನೆಸ್ ವಿಶ್ವ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಇದೀಗ ಅವರ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅವರು 2.08 ಮೀ (6 ಅಡಿ 9 ಇಂಚು) ಎತ್ತರ 360 ಕಿಕ್ ಮಾಡುವ ಮೂಲಕ ಹೊಸ ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ.

ಚಿನ್ಮಯ್ ಶರ್ಮಾ ಅವರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಲೈಕ್ಸ್ ಮತ್ತು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ಅವರ ಈ ವಿಶಿಷ್ಟ ಸಾಧನೆಯನ್ನು ಕೆಲವರು ಹೊಗಳಿ ಕಾಮೆಂಟ್ ಮಾಡಿದರೆ, ಇನ್ನು ಕೆಲವರು ನಾನು ಕೂಡ ಈ ದಾಖಲೆ ಮಾಡಬಲ್ಲೆ ಎಂದು ಬರೆದುಕೊಂಡಿದ್ದಾರೆ.

ಸಮರ ಕಲೆ ಬೋಧಕರಾಗಿ ಕೆಲಸ

ಪ್ರಸ್ತುತ ಸಮರ ಕಲೆ ಬೋಧಕರಾಗಿ ಕೆಲಸ ಮಾಡುತ್ತಿರುವ ಚಿನ್ಮಯ್ ಶರ್ಮಾ, ಹಲವಾರು ಗಿನ್ನೆಸ್ ವಿಶ್ವ ದಾಖಲೆಗಳನ್ನು ಹೊಂದಿದ್ದಾರೆ. ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ಅವರು ಆತ್ಮರಕ್ಷಣೆ ಕಲೆಯ ಜೊತೆಗೆ ಕಳೆದ ಏಳು ವರ್ಷಗಳಿಂದ ಲಯನ್ ಇನ್‌ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್‌ನಲ್ಲಿ ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಬಾಲಕಿಯರು ಮತ್ತು ಮಹಿಳೆಯರಿಗೆ ಆತ್ಮರಕ್ಷಣೆ ಕಲೆ ಕಲಿಸಿದ್ದಾರೆ. 15 ವರ್ಷಗಳ ವೃತ್ತಿಜೀವನದಲ್ಲಿ, ಅವರು ಅನೇಕ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Sat, 9 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ