Chris Morris; IPL Auction 2021: 16.25 ಕೋಟಿ ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದ ಕ್ರಿಸ್​ ಮೊರಿಸ್​

IPL Auction 2021: ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು.

Chris Morris; IPL Auction 2021: 16.25 ಕೋಟಿ ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದ ಕ್ರಿಸ್​ ಮೊರಿಸ್​
ಕ್ರಿಸ್​ ಮೊರಿಸ್
Follow us
ರಾಜೇಶ್ ದುಗ್ಗುಮನೆ
|

Updated on:Feb 18, 2021 | 6:36 PM

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

ಕ್ರಿಸ್​ ಮೊರಿಸ್​ಗೆ ಮುಂಬೈ ಇಂಡಿಯನ್ಸ್​​ ಮೊದಲ ಬಾರಿಗೆ ಬಿಡ್​ ಮಾಡಿತ್ತು. ಆರ್​ಸಿಬಿ ಕೂಡ ಇಂದಿನ ಪಂದ್ಯದಲ್ಲಿ ಬಿಡ್​ ಮಾಡಿತ್ತು. ಆರ್​ಸಿಬಿ ಕ್ರಿಸ್​ ಮಾರಿಸ್​ಗೆ 12.75 ಕೋಟಿ ರೂಪಾಯಿವರೆಗೆ ಬಿಡ್​ ಮಾಡಿತ್ತು. ಮೊರಿಸ್​ ಅವರನ್ನು ಪಡೆಯಲು ಮುಂಬೈ ಇಂಡಿಯನ್ಸ್​ ಹಾಗೂ ರಾಜಸ್ಥಾನ ರಾಯಲ್ಸ್​ ನಡುವೆ ಭಾರೀ ಪೈಪೋಟಿ ನಡೆದಿತ್ತು. ಈ ಮಧ್ಯೆ ಪಂಜಾಬ್​ ಕೂಡ ಹರಾಜಿನಲ್ಲಿ ಸೇರಿಕೊಂಡು 16 ಕೋಟಿ ರೂಪಾಯಿ ಕೂಗಿತ್ತು. ಕೊನೆಗೆ ರಾಜಸ್ಥಾನ್​ ರಾಯಲ್ಸ್​ 16.25 ಕೋಟಿ ರೂಪಾಯಿಗೆ ಖರೀದಿಸಿತು.

ವಿದೇಶಿ ಆಟಗಾರಾನೊಬ್ಬ ಇಷ್ಟು ದೊಡ್ಡ ಮೊತ್ತಕ್ಕೆ ಹರಾಜಾಗಿದ್ದು ಐಪಿಎಲ್​ ಇತಿಹಾಸದಲ್ಲಿ ಇದೇ ಮೊದಲು. ಕಳೆದ ಬಾರಿ ಪ್ಯಾಟ್​ ಕುಮ್ಮಿನ್ಸ್​ 15.5 ಕೋಟಿ ರೂಪಾಯಿಗೆ ಮಾರಾಟವಾಗಿದ್ದರು. ಈವರೆಗೆ ಅತಿ ಹೆಚ್ಚು ಬೆಲೆಗೆ ಮಾರಾಟವಾದ ವಿದೇಶಿ ಆಟಗಾರ ಇವರಾಗಿದ್ದರು.

ಇದನ್ನೂ ಓದಿ: IPL Auction 2021 Sold Players List: ಐಪಿಎಲ್​ 2021 ಹರಾಜಿನಲ್ಲಿ ಮಾರಾಟವಾದ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: IPL 2021 Auction; List of Unsold Players: ಐಪಿಎಲ್​ನಲ್ಲಿ ಮಾರಾಟವಾಗದೆ ಉಳಿದ ಸ್ಟಾರ್​ ಆಟಗಾರರ ಪಟ್ಟಿ ಇಲ್ಲಿದೆ

Published On - 4:39 pm, Thu, 18 February 21

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ