ಕಾಮನ್‌ವೆಲ್ತ್ ಗೇಮ್ಸ್ (Commonwealth Games) ಜುಲೈ 28 ರಿಂದ ಪ್ರಾರಂಭವಾಗಲಿದ್ದು, ಇದನ್ನು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಆಯೋಜಿಸಲಾಗಿದೆ. ಕಾಮನ್‌ವೆಲ್ತ್ ಕ್ರೀಡಾಕೂಟ ಆರಂಭವಾಗಲು ಇನ್ನೇನು ದಿನಗಣನೆ ಬಾಕಿ ಇದೆ. 22ನೇ ಆವೃತ್ತಿಯು ಜುಲೈ 28 ರಂದು ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಒಟ್ಟು 72 ರಾಷ್ಟ್ರಗಳು ಕಾಮನ್‌ವೆಲ್ತ್ ಗೇಮ್ಸ್‌ನ ಸದಸ್ಯರಾಗಿದ್ದಾರೆ. ಈ ಎಲ್ಲಾ ದೇಶಗಳ ಒಟ್ಟು 5000 ಕ್ಕೂ ಹೆಚ್ಚು ಆಟಗಾರರು ವಿವಿಧ ಕ್ರೀಡೆಗಳಲ್ಲಿ ತಮ್ಮ ಶಕ್ತಿ ಪ್ರದರ್ಶಿಸಲಿದ್ದಾರೆ. ಬರ್ಮಿಂಗ್ಹ್ಯಾಮ್ (Birmingham) ಮೊದಲ ಬಾರಿಗೆ ಈ ಆಟವನ್ನು ಆಯೋಜಿಸುತ್ತಿದೆ. ಲಂಡನ್ ಮತ್ತು ಮ್ಯಾಂಚೆಸ್ಟರ್‌ನಲ್ಲಿ 1934 ರ ಪಂದ್ಯಗಳ ನಂತರ ಮೂರನೇ ಬಾರಿಗೆ ಇಂಗ್ಲೆಂಡ್‌ನಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ.
ಭಾರತದ ಧ್ವಜದಾರಿ ಯಾರು?
ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಇದರಲ್ಲಿ 30,000ಕ್ಕೂ ಹೆಚ್ಚು ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಇರುತ್ತಾರೆ. ಭಾರತೀಯ ಕಾಲಮಾನ ಬೆಳಗ್ಗೆ 11.30ಕ್ಕೆ ಸಮಾರಂಭ ಆರಂಭವಾಗಲಿದೆ. ಅಥ್ಲೆಟಿಕ್ಸ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಚಿನ್ನದ ಪದಕ ವಿಜೇತ, ಭಾರತದ ನೀರಜ್ ಚೋಪ್ರಾ ಉದ್ಘಾಟನಾ ಸಮಾರಂಭದಲ್ಲಿ ಧ್ವಜಾರೋಹಣ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂಜುರಿಯಿಂದಾಗಿ ಈ ಬಾರಿಯ ಕಾಮನ್‌ವೆಲ್ತ್ ಕೀಡಾಕೂಟದಿಂದ ನೀರಜ್ ಹಿಂದೆ ಸರಿದಿದ್ದಾರೆ. ಹೀಗಾಗಿ ಭಾರತದ ಧ್ವಜದಾರಿ ಯಾರ ಎಂಬ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ಕಳೆದ ಬಾರಿ ಅಂದರೆ 2018 ರಲ್ಲಿ ಗೋಲ್ಡ್ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್ನಲ್ಲಿ ಭಾರತದ ಧ್ವಜಧಾರಿಯಾಗಿ ಪಿವಿ ಸಿಂಧು ಭಾರತವನ್ನು ಮುನ್ನಡೆಸಿದ್ದರು. ಹೀಗಾಗಿ ಈ ಬಾರಿಯೂ ಅವರೆ ಭಾರತದ ಧ್ವಜದಾರಿಯಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭ ಯಾವಾಗ ನಡೆಯಲಿದೆ?
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭ ಜುಲೈ 28 ರಂದು ನಡೆಯಲಿದೆ
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭ ಯಾವಾಗ ಪ್ರಾರಂಭವಾಗುತ್ತದೆ?
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭವು ಸ್ಥಳೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಆದರೆ ಭಾರತದಲ್ಲಿ 11.30 ಕ್ಕೆ ವೀಕ್ಷಿಸಬಹುದಾಗಿದೆ.
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭ ಎಲ್ಲಿ ನಡೆಯಲಿದೆ?
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭವು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕಾಮನ್‌ವೆಲ್ತ್ ಗೇಮ್ಸ್ 2022 ರ ಉದ್ಘಾಟನಾ ಸಮಾರಂಭವನ್ನು ಎಲ್ಲಿ ವೀಕ್ಷಿಸಬಹುದು?
ಬರ್ಮಿಂಗ್ಹ್ಯಾಮ್ ಪಂದ್ಯಗಳನ್ನು ಸೋನಿ TEN 1, Sony TEN 2, Sony TEN 3, Sony SIX ಮತ್ತು Sony TEN 4 ಚಾನಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ LIV ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಸಹ ಲಭ್ಯವಿರುತ್ತದೆ. ಸೋನಿ ನೆಟ್‌ವರ್ಕ್ ಹೊರತುಪಡಿಸಿ, ಡಿಡಿ ಸ್ಪೋರ್ಟ್ಸ್ ಭಾರತದಲ್ಲಿ ಉದ್ಘಾಟನಾ ಸಮಾರಂಭವನ್ನು ಲೈವ್ ಸ್ಟ್ರೀಮ್ ಮಾಡುತ್ತದೆ.
ಕಾಮನ್‌ವೆಲ್ತ್ ಗೇಮ್ಸ್ 2022 ಯಾವಾಗ ಕೊನೆಗೊಳ್ಳುತ್ತದೆ?
ಕಾಮನ್‌ವೆಲ್ತ್ ಕ್ರೀಡಾಕೂಟವು ಸೋಮವಾರ, ಆಗಸ್ಟ್ 8, 2022 ರಂದು ಮುಕ್ತಾಯಗೊಳ್ಳಲಿದ್ದು, ಹಾಕಿಯನ್ನು ಅಂತಿಮ ಪಂದ್ಯವಾಗಿ ಆಡಲಾಗುತ್ತದೆ.
ಕಾಮನ್‌ವೆಲ್ತ್ ಗೇಮ್ಸ್ 2022 ರ ಮುಕ್ತಾಯ ಸಮಾರಂಭ ಯಾವಾಗ?
ಕಾಮನ್‌ವೆಲ್ತ್ ಕ್ರೀಡಾಕೂಟದ ಸಮಾರೋಪ ಸಮಾರಂಭವು ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಸೋಮವಾರ 8 ಆಗಸ್ಟ್ 2022 ರಂದು ಉದ್ಘಾಟನಾ ಸಮಾರಂಭದಂತೆಯೇ ನಡೆಯಲಿದೆ. ಸಮಾರಂಭವು ಸ್ಥಳೀಯ ಸಮಯ (ಯುಕೆ) 12:30 ಕ್ಕೆ ಪ್ರಾರಂಭವಾಗುತ್ತದೆ ಮತ್ತು 2:30 ಕ್ಕೆ ಕೊನೆಗೊಳ್ಳುತ್ತದೆ