Mirabai Chanu: ಅಂದು ಕಟ್ಟಿಗೆ ಹೊತ್ತು ಇಂದು ಚಿನ್ನಕ್ಕೆ ಕೊರಳೊಡ್ಡಿದ ಮೀರಾಬಾಯಿ: ಬಂಗಾರದ ಹುಡುಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ

Commonwealth Games 2022: 2022ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ನಡೆದ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು (Mirabai Chanu) ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಆದರೆ, ಮೀರಾಬಾಯಿ ಈ ಮಟ್ಟದಲ್ಲಿ ಸಾಧನೆ ಮಾಡಲು ಅವರು ನಡೆದ ಬಂದ ಹಾದಿ ಸುಗಮವಾಗಿರಲಿಲ್ಲ.

Mirabai Chanu: ಅಂದು ಕಟ್ಟಿಗೆ ಹೊತ್ತು ಇಂದು ಚಿನ್ನಕ್ಕೆ ಕೊರಳೊಡ್ಡಿದ ಮೀರಾಬಾಯಿ: ಬಂಗಾರದ ಹುಡುಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ
Chanu Saikhom Mirabai
Follow us
TV9 Web
| Updated By: Vinay Bhat

Updated on:Jul 31, 2022 | 10:22 AM

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ 2022ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ (Commonwealth Games 2022) ಭಾರತ ಉತ್ತಮ ಪ್ರದರ್ಶನ ತೋರುತ್ತಿದೆ. ಶನಿವಾರ ನಡೆದ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು (Mirabai Chanu) ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಈ ಮೂಲಕ ಎರಡನೇ ದಿನ ಭಾರತ ಒಟ್ಟು ನಾಲ್ಕು ಪದಕಗಳನ್ನು ಬಾಜಿಕೊಂಡಿದೆ. 49 ಕೆಜಿ ತೂಕ ವಿಭಾಗದಲ್ಲಿ ಮೀರಾ ಒಟ್ಟು 201 ಕೆಜಿ ಭಾರ ಎತ್ತುವ ಮೂಲಕ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಸ್ನ್ಯಾಚ್‌ನಲ್ಲಿ 88 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 113 ಕೆಜಿ ಎತ್ತುವ ಮೂಲಕ ಪ್ರಶಸ್ತಿ ಗೆದ್ದು ದಾಖಲೆ ಕೂಡ ಮಾಡಿದ್ದಾರೆ. ಈ ಹಿಂದೆ 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿಯೂ ಮೀರಾಬಾಯಿ ಚಿನ್ನಕ್ಕೆ ಕೊರಳೊಡ್ಡಿದ್ದರು. ಇದೀಗ ಸತತ ಎರಡನೇ ಬಾರಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ (Tokyo Olympics) 2020 ರಲ್ಲೂ ಇವರು ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದರು.

ಆದರೆ, ಮೀರಾಬಾಯಿ ಈ ಮಟ್ಟದಲ್ಲಿ ಸಾಧನೆ ಮಾಡಲು ಅವರು ನಡೆದ ಬಂದ ಹಾದಿ ಸುಗಮವಾಗಿರಲಿಲ್ಲ. 12ನೇ ವಯಸ್ಸಿನಲ್ಲಿ ಅಣ್ಣನಿಗಿಂತ ಹೆಚ್ಚು ಕಟ್ಟಿಗೆ ಹೊತ್ತು ಸಾಗುತ್ತ ತನ್ನ ಶಕ್ತಿ ಪ್ರದರ್ಶಿಸಿದ ಮೀರಾಬಾಯಿ ಚಾನು ಇಂದು ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿರುವುದು ಅವರ ಕ್ರೀಡಾ ಬದುಕಿನ ಇನ್ನೊಂದು ಮುಖ. ಒಂದು ಕಾಲದಲ್ಲಿ ಉರುವಲಿಗಾಗಿ ಕಾಡಿನಲ್ಲಿ ಕಟ್ಟಿಗೆ ಸಂಗ್ರಹಿಸಿ ಮನೆಗೆ ಕೊಂಡೊಯ್ಯುತ್ತಿದ್ದ ಮೀರಾಬಾಯಿ ಚಾನು ಮುಂದೊಂದು ದಿನ ಇದು ವೇಟ್ಲಿಫ್ಟಿಂಗ್​ಗೆ ನೆರವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಮಣಿಪುರದ ಪುಟ್ಟ ಹಳ್ಳಿಯಲ್ಲಿ ಜನಿಸಿದ್ದ ಮೀರಾಬಾಯಿ ಅವರ ಮನೆಯಲ್ಲಿ ಕ್ರೀಡಾಪಟುಗಳಿದ್ದರು. ತಂದೆ, ಅಣ್ಣಂದಿರು ಫುಟ್ಬಾಲ್, ಸೆಪೆಕ್ ಟಕ್ರಾಗಳಲ್ಲಿ ಆಡುತ್ತಿದ್ದರು.

ಇಂಪಾಲದಿಂದ 20 ಕಿ.ಮೀ. ದೂರದಲ್ಲಿರುವ ನಾಂಗ್‌ಪಾಕ್‌ ಕಾಕ್ಚಿಂಗ್‌ ಗ್ರಾಮದ ಬಡ ಕುಟುಂಬಕ್ಕೆ ಸೇರಿದ ಮೀರಾಬಾಯಿ ಚಾನು, ಆರು ಮಕ್ಕಳಲ್ಲಿ ಅತ್ಯಂತ ಕಿರಿಯರು. ತನಗಿಂತ ನಾಲ್ಕು ವರ್ಷ ದೊಡ್ಡವನಾಗಿರುವ ಅಣ್ಣ ಸೈಕೊಮ್‌ ಸನಾತೊಂಬಾ ಮೈಟೈ ಅವರೊಂದಿಗೆ ಹತ್ತಿರದ ಬೆಟ್ಟಕ್ಕೆ ಹೋಗಿ ಕಟ್ಟಿಗೆಯನ್ನು ಸಂಗ್ರಹಿಸುತ್ತಿದ್ದರಂತೆ. ಒಂದು ದಿನ ಮೀರಾ ಅಣ್ಣ ತಾಯಿಯ ಬಳಿ ಬಂದು ನನಗೆ ಕಟ್ಟಿಗೆ ಮೂಟೆಯನ್ನು ಎತ್ತಲಾಗಲಿಲ್ಲ. ಆದರೆ ಮೀರಾ ಸುಲಭವಾಗಿ ಎತ್ತಿ ಮನೆಗೆ ತಂದಳು ಎಂದು ಹೇಳಿದರು.

ಇದನ್ನೂ ಓದಿ
Image
CWG 2022: ಇಂದು ಭಾರತ- ಪಾಕಿಸ್ತಾನ ಹೈವೋಲ್ಟೇಜ್ ಕದನ: ಸೋತರೆ ಕಾಮನ್​ವೆಲ್ತ್​ನಿಂದ ಔಟ್
Image
CWG 2022: ಒಂದೇ ದಿನ ನಾಲ್ಕು ಪದಕ: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತ ಭರ್ಜರಿ ಪ್ರದರ್ಶನ
Image
Bindyarani Devi: ಭಾರತಕ್ಕೆ ಮತ್ತೊಂದು ಪದಕ: ವೇಟ್​ ಲಿಫ್ಟಿಂಗ್​ನಲ್ಲಿ ಬೆಳ್ಳಿ ಗೆದ್ದ ಬಿಂದ್ಯಾರಾಣಿ
Image
CWG 2022 Day 3, Schedule: 3ನೇ ದಿನ ಭಾರತದ ಬುಟ್ಟಿಗೆ ಪದಕ ಹಾಕುವವರು ಯಾರು? ಇಲ್ಲಿದೆ ವೇಳಾಪಟ್ಟಿ

ಇದನ್ನ ಗಮನಿಸಿದ ಮೀರಾಬಾಯಿ ಅವರ ತಾಯಿ ಲೈಮಾ ಅವರಿಗೆ ತಮ್ಮ ಮಗಳನ್ನು ಕ್ರೀಡಾಪಟುವನ್ನಾಗಿ ರೂಪಿಸಬೇಕು ಎಂಬ ಹಂಬಲ ಶುರುವಾಯಿತು. ಬಾಲ್ಯದಲ್ಲಿ ಮೀರಾಬಾಯಿ ಆರ್ಚರಿ ಕಲಿಯಲು ಆಸಕ್ತಿ ತೋರಿಸಿದ್ದರು. ಆಗ ಅವರಿಗೆ ಪರಿಣತ ಕೋಚ್ ಸಿಗಲಿಲ್ಲ. ಹೀಗಾಗಿ ಸುಮ್ಮಮೆ ಕೂತಿದ್ದಾಗ ಮಣಿಪುರದ ಹಿರಿಯ ವೇಟ್ಲಿಫ್ಟಿರ್ ಕುಂಜುರಾಣಿದೇವಿ ಮತ್ತು ಅನಿತಾ ದೇವಿ ಅವರ ಸಾಧನೆಯನ್ನು ಒಂದು ಸಾಕ್ಷ್ಯಚಿತ್ರದಲ್ಲಿ ವೀಕ್ಷಿಸಿದರು. ಇದುವೆ ಇವರ ಜೀವನದ ಟರ್ನಿಂಗ್ ಪಾಯಿಂಟ್.

2007ರಲ್ಲಿ ಅವರು ತಮ್ಮ ಮನೆಯಿಂದ 60 ಕಿ.ಮೀ ದೂರದಲ್ಲಿದ್ದ ಕುಮಾನ್ ಲಂಪಕ್ ಕ್ರೀಡಾ ಸಂಕೀರ್ಣದಲ್ಲಿ ಅಭ್ಯಾಸಕ್ಕೆ ಸೇರಿದರು. ಪ್ರತಿದಿನವೂ ತರಬೇತಿಗೆ ಹೋಗಿ ಬರುವ ಗಡಿಬಿಡಿಯಲ್ಲಿ ಸರಿಯಾದ ಊಟ ಕೂಡ ಸಿಗುತ್ತಿರಲಿಲ್ಲ. ಈವೇಳೆ ಸಾಕಷ್ಟು ಕಷ್ಟ ಅನುಭವಿಸಿದ ಮೀರಾ ಒಂದು ದಿನ ಅಮ್ಮನ ಬಳಿ ಬಂದು ನಾನು ವೇಟ್ಲಿಫ್ಟಿಂಗ್ ಬಿಡುತ್ತೇನೆ ಎಂದು ಹೇಳಿದ್ದರಂತೆ. ಆಗ ಅವರ ತಾಯಿ ಲೈಮಾ ನೀನು ಯಾವುದೇ ಯೋಚನೆ ಮಾಡಬೇಡ. ನಿನ್ನ ಊಟ, ವಿದ್ಯಾಭ್ಯಾಸ ಮತ್ತು ಪ್ರಯಾಣದ ವ್ಯವಸ್ಥೆಗಳನ್ನು ಮಾಡುತ್ತೇವೆ. ಶ್ರದ್ಧೆಯಿಂದ ಸಾಧನೆ ಮಾಡು ಎಂದು ಭರವಸೆ ನೀಡಿದರು.

ಮೀರಾ ಅವರು ತಮ್ಮ ಯಶಸ್ಸಿನ ಯಾತ್ರೆ ಆರಂಭಿಸಲು ಸತತ ಐದು ವರ್ಷಗಳ ಕಾಲ ತಾಲೀಮು ನಡೆಸಿದರು. ಜೂನಿಯರ್ ವಿಭಾಗದಲ್ಲಿ ಮಿಂಚಿದರು. 2011ರಲ್ಲಿ ಅಂತರರಾಷ್ಟ್ರೀಯ ಯೂತ್ ಚಾಂಪಿಯನ್ ಷಿಪ್ ಮತ್ತು ದಕ್ಷಿಣ ಏಷ್ಯಾ ಜೂನಿಯರ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕಗಳನ್ನು ಗೆದ್ದು ಬೀಗಿದರು. 2013ರಲ್ಲಿ ಗುವಾಹಟಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ‘ಬೆಸ್ಟ್ ಲಿಫ್ಟರ್’ ಗೌರವಕ್ಕೆ ಕೂಡ ಪಾತ್ರರಾದರು. ಇದು ಅವರ ಕ್ರೀಡಾಜೀವನಕ್ಕೆ ಲಭಿಸಿದ ಮಹತ್ವದ ತಿರುವು. 2014ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದರು. 2014ರ ವಿಶ್ವ ಚಾಂಪಿಯನ್​ಶಿಪ್​ನಲ್ಲಿ 11ನೇ ಹಾಗೂ 2015ರಲ್ಲಿ ಒಂಬತ್ತನೇ ಸ್ಥಾನ ಪಡೆದರು.

ಮೀರಾಬಾಯಿ ರಿಯೊ ಡಿ ಜನೈರೊ 2016 ರಲ್ಲಿ ನಡೆದ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವ ಅವಕಾಶ ಪಡೆದರು. ಆದರೆ ಇಲ್ಲಿ ಅವರಿಗೆ ಪದಕ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದ ಫಲದಿಂದ 21ನೇ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ದಾಖಲೆಯೊಂದಿಗೆ ದೇಶಕ್ಕೆ ಮೊದಲ ಚಿನ್ನ ತಂದುಕೊಟ್ಟರು. ಟೋಕಿಯೋ ಒಲಿಂಪಿಕ್ಸ್ 2020 49 ಕೆಜಿ ವಿಭಾಗದ ಮಹಿಳಾ ವೇಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ಕೂಡ ಮಾಡಿದರು. ಅಲ್ಲದೆ ಕಳೆದ ವರ್ಷ ಒಲಿಂಪಿಕ್​ನಲ್ಲಿ ಮಹಿಳಾ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಪದಕ ಗೆದ್ದ ಎರಡನೇ ಮಹಿಳೆ ಎಂಬ ಗೌರವಕ್ಕೆ ಪಾತ್ರರಾದರು.

ಇಂದು ಕಾಮನ್​ವೆಲ್ತ್​ ಗೇಮ್ಸ್​​ನಲ್ಲೂ ಮೀರಾಬಾಯಿ ಚಿನ್ನವನ್ನು ಬಾಜಿಕೊಳ್ಳುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಿದಿದ್ದಾರೆ. ಮೀರಾ ಅವರ ಈ ಸಾಧನೆಗೆ ದೇಶಾದ್ಯಂತ ಸಾಕಷ್ಟು ಪ್ರಶಂಸೆಗಳು ಹರಿದು ಬರುತ್ತಿದೆ. ಭಾರತದ ಕ್ರೀಡಾಪ್ರೇಮಿಗಳು ಮೀರಾಭಾಯಿ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Published On - 10:21 am, Sun, 31 July 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ