CWG 2022: 13 ಚಿನ್ನ, 11 ಬೆಳ್ಳಿ, 16 ಕಂಚು: 40ಕ್ಕೇರಿದ ಭಾರತದ ಪದಕಗಳ ಸಂಖ್ಯೆ

Commonwealth Games 2022: ಭಾರತಕ್ಕೆ ಇದುವರೆಗೆ ಬಂದಿರುವ 40 ಪದಕಗಳ ಪೈಕಿ 12 ಕುಸ್ತಿಯಿಂದಾದರೆ, 10 ಪದಕಗಳು ವೇಟ್​ ಲಿಫ್ಟಿಂಗ್ ​​ನಿಂದ ಬಂದಿದೆ. ಮೀರಾಬಾಯಿ ಚಾನು ಭಾರತಕ್ಕೆ ಕಾಮನ್‌ವೆಲ್ತ್ ಗೇಮ್ಸ್​​ನಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟರು.

CWG 2022: 13 ಚಿನ್ನ, 11 ಬೆಳ್ಳಿ, 16 ಕಂಚು: 40ಕ್ಕೇರಿದ ಭಾರತದ ಪದಕಗಳ ಸಂಖ್ಯೆ
CWG 2022 India
Follow us
TV9 Web
| Updated By: Vinay Bhat

Updated on:Aug 07, 2022 | 10:27 AM

ಕಾಮನ್​ ವೆಲ್ತ್ ಗೇಮ್ಸ್ 2022ರಲ್ಲಿ (Commonwealth Games 2022) ಭಾರತದ ಪದಕದ ಬೇಟೆ ಮುಂದುವರೆದಿದೆ. ಈವರೆಗೆ ಒಟ್ಟು 40 ಪದಕಗಳನ್ನು ಬಾಜಿಕೊಂಡಿದೆ. ಇದರಲ್ಲಿ ಹದಿಮೂರು ಚಿನ್ನ, ಹನ್ನೊಂದು ಬೆಳ್ಳಿ ಹಾಗೂ ಹದಿನಾರು ಕಂಚು ಪಡೆದುಕೊಂಡಿದೆ. ಭಾರತಕ್ಕೆ ಇದುವರೆಗೆ ಬಂದಿರುವ 40 ಪದಕಗಳ ಪೈಕಿ 12 ಕುಸ್ತಿಯಿಂದಾದರೆ, 10 ಪದಕಗಳು ವೇಟ್​ ಲಿಫ್ಟಿಂಗ್ ​​ನಿಂದ ಬಂದಿದೆ. ಮೀರಾಬಾಯಿ ಚಾನು ಭಾರತಕ್ಕೆ ಕಾಮನ್‌ವೆಲ್ತ್ ಗೇಮ್ಸ್​​ನಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟರು. ಕೊನೆಯದಾಗಿ ಶನಿವಾರದ ಅಂತ್ಯಕ್ಕೆ ಪ್ಯಾರಾ ಟೇಬಲ್ ಟೆನ್ನಿಸ್ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಆಟಗಾರ್ತಿ ಭವಿನಾ ಪಟೇಲ್ (Bhavina Patel) ಬಂಗಾರ ಗೆದ್ದ ಸಾಧನೆ ಮಾಡಿದರು. ಈ ಮೂಲಕ ಭಾರತ 13 ಚಿನ್ನದ (Gold) ಪದಕ ಬಾಜಿಕೊಂಡಿತು.

ಕುಸ್ತಿಯಲ್ಲಿ ಭಾರತಕ್ಕೆ ಅತಿ ಹೆಚ್ಚು ಪದಕ ಮೂಡಿಬಂತು. ಆರು ಚಿನ್ನ, ಒಂದು ಬೆಳ್ಳಿ ಮತ್ತು ಐದು ಕಂಚು ಕುಸ್ತಿ ವಿಭಾಗದಿಂದ ಬಂದಿದೆ. ಭಾರತದ ಪುರುಷ ಕುಸ್ತಿಪಟು ನವೀನ್ 74 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದರು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ತಾಹಿರ್ ಅವರನ್ನು ಸೋಲಿಸಿ ಪದಕ ಬಾಜಿಕೊಂಡರಿ. ವಿನೇಶ್ ಫೋಗಟ್ ಕೂಡ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಅನುಭವಿ ಕುಸ್ತಿಪಟು ವಿನೇಶ್ ಅವರು ನಾರ್ಡಿಕ್ ಮಾದರಿಯಿಂದ ಈ ವಿಭಾಗದ ಎಲ್ಲ ಮೂರು ಪಂದ್ಯಗಳನ್ನು ಗೆದ್ದರು. ಸತತ ಮೂರನೇ ಬಾರಿಗೆ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು.

ಇನ್ನು ರವಿ ದಹಿಯಾ ಕಾಮನ್‌ವೆಲ್ತ್ ಗೇಮ್ಸ್ ಪುರುಷರ 57 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್‌ನಲ್ಲಿ ರವಿ ಅವರು ನೈಜೀರಿಯಾ ಆಟಗಾರನನ್ನು ತಾಂತ್ರಿಕ ದಕ್ಷತೆಯ ಆಧಾರದ ಮೇಲೆ ಸೋಲಿಸಿ ಪದಕ ಗೆದ್ದರು. ಈ ಪಂದ್ಯದಲ್ಲಿ ರವಿ 10-0 ಅಂತರದಿಂದ ಗೆದ್ದರು. ಮಹಿಳಾ ಕುಸ್ತಿಪಟು ಪೂಜಾ ಗೆಹ್ಲೋಟ್ 50 ಕೆಜಿ ತೂಕ ವಿಭಾಗದಲ್ಲಿ ಸ್ಕಾಟಿಷ್ ಕುಸ್ತಿಪಟುವನ್ನು 12-2 ರಿಂದ ತಾಂತ್ರಿಕ ದಕ್ಷತೆಯಲ್ಲಿ ಸೋಲಿಸುವ ಮೂಲಕ ಕಂಚಿನ ಪದಕವನ್ನು ಗೆದ್ದರು.

ಇದನ್ನೂ ಓದಿ
Image
Rohit Sharma: ಭಾರತದ ಸರಣಿ ಗೆಲುವನ್ನು ವಿಶೇಷವಾಗಿ ಆಚರಿಸಿದ ರೋಹಿತ್ ಶರ್ಮಾ: ಏನು ಮಾಡಿದ್ರು ನೋಡಿ
Image
CWG 2022: ಆಫ್ರಿಕಾ ವಿರುದ್ಧ ರೋಚಕ ಜಯ: ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಹಾಕಿ ತಂಡ
Image
CWG 2022: ಕಾಮನ್​ವೆಲ್ತ್​ನಲ್ಲಿ ಭಾರತಕ್ಕೆ 13ನೇ ಚಿನ್ನ: ಬಂಗಾರಕ್ಕೆ ಕೊರಳೊಡ್ಡಿದ ಭವಿನಾ ಪಟೇಲ್
Image
CWG 2022: ಫೈನಲ್​ನಲ್ಲಿ ಪಾಕಿಸ್ತಾನದ ಕುಸ್ತಿಪಟುವನ್ನು ಉಸಿರುಗಟ್ಟಿಸಿ ಭಾರತಕ್ಕೆ ಚಿನ್ನ ಗೆದ್ದ ನವೀನ್..!

ಇತ್ತ ಕಾಮನ್​ವೆಲ್ತ್ ಗೇಮ್ಸ್​​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಭಾರತ ಪುರುಷರ ಹಾಕಿ ತಂಡ ಫೈನಲ್​ಗೆ ಪ್ರವೇಶ ಪಡೆದುಕೊಂಡಿದೆ. ಬರ್ಮಿಂಗ್​ಹ್ಯಾಮ್​ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 3-2 ಗೋಲುಗಳ ಅಂತರದಿಂದ ಸೋಲಿಸಿ ರೋಚಕ ಜಯ ಸಾಧಿಸಿತು. ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಕೂಡ ಪದಕ ಖಚಿತವಾಗಿದೆ. ಇಂಗ್ಲೆಂಡ್ ವಿರುದ್ಧ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಹರ್ಮನ್ ಪಡೆ 4 ರನ್​ಗಳ ರೋಚಕ ಜಯ ಸಾಧಿಸಿ ಫೈನಲ್​ಗೆ ಲಗ್ಗೆಯಿಟ್ಟಿದೆ.

Published On - 10:27 am, Sun, 7 August 22

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ