CWG 2022: ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು: 20ಕ್ಕೇರಿದ ಭಾರತದ ಪದಕಗಳ ಸಂಖ್ಯೆ

Indian medal winners at CWG 2022: ಕಾಮನ್​ ವೆಲ್ತ್ ಗೇಮ್ಸ್ 2022ರಲ್ಲಿ ಭಾರತ ಈವರೆಗೆ ಒಟ್ಟು 20 ಪದಕಗಳನ್ನು ಬಾಜಿಕೊಂಡಿದೆ. ಇದರಲ್ಲಿ ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು ಪಡೆದುಕೊಂಡಿದೆ.

CWG 2022: ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು: 20ಕ್ಕೇರಿದ ಭಾರತದ ಪದಕಗಳ ಸಂಖ್ಯೆ
CWG 2022 India
TV9kannada Web Team

| Edited By: Vinay Bhat

Aug 05, 2022 | 8:34 AM

ಕಾಮನ್​ ವೆಲ್ತ್ ಗೇಮ್ಸ್ 2022ರಲ್ಲಿ (Commonwealth Games 2022) ಭಾರತದ ಪದಕದ ಬೇಟೆ ಮುಂದುವರೆದಿದೆ. ಈವರೆಗೆ ಒಟ್ಟು 20 ಪದಕಗಳನ್ನು ಬಾಜಿಕೊಂಡಿದೆ. ಇದರಲ್ಲಿ ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು ಪಡೆದುಕೊಂಡಿದೆ. ಭಾರತಕ್ಕೆ ಇದುವರೆಗೆ ಬಂದಿರುವ 20 ಪದಕಗಳ ಪೈಕಿ 10 ಪದಕಗಳು ವೇಟ್​ ಲಿಫ್ಟಿಂಗ್ ​​ನಿಂದಲೇ ಆಗಿದೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಇತ್ತ ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ (Murali Sreeshankar) ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಬೆಳ್ಳಿ ಗೆದ್ದ ಮೊದಲ ಪುರುಷ ಲಾಂಗ್​ಜಂಪರ್ ಶ್ರೀಶಂಕರ್ ಆಗಿದ್ದಾರೆ. 8.08ಮೀ ಜಿಗಿತದ ಮೂಲಕ ಭಾರತಕ್ಕೆ (India) ಐತಿಹಾಸಿಕ ಬೆಳ್ಳಿ ಗೆದ್ದುಕೊಟ್ಟರು.

ಇನ್ನು ಮೀರಾಬಾಯಿ ಚಾನು ಭಾರತಕ್ಕೆ ಕಾಮನ್‌ವೆಲ್ತ್ ಗೇಮ್ಸ್​​ನಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟರು. ಚಾನು 49 ಕೆಜಿ ತೂಕ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತುವ ಮೂಲಕ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಸ್ನ್ಯಾಚ್‌ ನಲ್ಲಿ 88 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ ನಲ್ಲಿ 113 ಕೆಜಿ ಎತ್ತುವ ಮೂಲಕ ಪ್ರಶಸ್ತಿ ಗೆದ್ದು ದಾಖಲೆ ಕೂಡ ಮಾಡಿದರು.

ವೇಟ್‌ ಲಿಫ್ಟರ್‌ ಹರ್ಜಿಂದರ್ ಕೌರ್ ಅವರು ಕಂಚಿನ ಪದಕ ಗೆದ್ದು ಬೀಗಿದರು. ಮಹಿಳೆಯರ 71kg ವಿಭಾಗದಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ ಕೌರ್ ಕಂಚಿಗೆ ಕೊರಳೊಡ್ಡಿದರು. ಅಂತೆಯೆ ಯುವ ವೇಟ್‌ ಲಿಫ್ಟರ್‌ ಅಚಿಂತಾ ಶೆಯುಲಿ ಅವರು ಚಿನ್ನದ ಪದಕ ಬಾಜಿಕೊಂಡರು. ಪುರುಷರ 73kg ವಿಭಾಗದಲ್ಲಿ ಒಟ್ಟು 313 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ 20 ವರ್ಷದ ವೇಟ್​​ ಲಿಫ್ಟರ್ ಬಂಗಾರಕ್ಕೆ ಕೊರಳೊಡ್ಡಿದರು.

ಜೆರೆಮಿ ಲಾಲ್ರಿನ್ನುಂಗಾ ಕಾಮನ್‌ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟರು. ಸಂಕೇತ್ ಮಹಾದೇವ್ ಸಾಗರ್ ಕೂಡ ಪುರುಷರ ವೇಟ್‌ ಲಿಫ್ಟಿಂಗ್‌ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾದರು. ಕರ್ನಾಟಕದ ವೇಟ್‌ ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಮಿಂಚಿದ್ದಾರೆ. 55 ಕೆಜಿ ವಿಭಾಗದ ವೇಟ್​ ಲಿಫ್ಟಿಂಗ್​ ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಇದನ್ನೂ ಓದಿ

ಪುರುಷರ 109 ಕೆಜಿ ತೂಕ ವಿಭಾಗದಲ್ಲಿ ಭಾರತದ ಲವ್‌ಪ್ರೀತ್ ಸಿಂಗ್ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟರು. ವೇಟ್‌ಲಿಫ್ಟರ್‌ ಗುರ್​ದೀಪ್ ಸಿಂಗ್ ಅವರು ಕೂಡ ಬೆಳ್ಳಿ ಪದಕ ಗೆದ್ದು ಬೀಗಿದರು. ಇದರ ನಡುವೆ ಪುರುಷರ ಹೈ ಜಂಪ್​ನಲ್ಲಿ ಭಾರತದ ತೇಜಸ್ವಿನ್ ಶಂಕರ್ ಪದಕ ಗೆದ್ದು ಇತಿಹಾಸ ನಿರ್ಮಿಸಿದರು. ಫೈನಲ್​ ಪಂದ್ಯದಲ್ಲಿ ಶಂಕರ್ 2.22 ಮೀಟರ್ ಜಿಗಿದು ಕಂಚಿನ ಪದಕಕ್ಕೆ ಕೊರಳೊಡ್ಡಿದರು. ಅತ್ತ ಸೌರವ್ ಘೋಷಾಲ್ ಅವರು ಸ್ಕ್ವಾಷ್‌ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ವಿಕಾಸ್ ಠಾಕೂರ್ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. ಪುರುಷರ 96 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಕಾಣಿಸಿಕೊಂಡ ವಿಕಾಸ್ ಠಾಕೂರ್ ಒಟ್ಟು 346 ಕೆಜಿ ಭಾರ ಎತ್ತುವ ಮೂಲಕ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಟ್ಟರು. ತೂಲಿಕಾ ಮಾನ್ ಅವರು ಮಹಿಳಾ ಜೂಡೊ ಸ್ಪರ್ಧೆಯ 78 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada