CWG 2022: ಭಾರತ ಮಹಿಳಾ ಕ್ರಿಕೆಟ್ ತಂಡದ ಮತ್ತೊಬ್ಬ ಆಟಗಾರ್ತಿಗೆ ಕೊರೊನಾ ಸೋಂಕು..!

CWG 2022: ಸೋಂಕಿತರಾಗಿರುವ ಇಬ್ಬರು ಆಟಗಾರ್ತಿರ ಹೆಸರುಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ CWG 2022 ರಲ್ಲಿ ಭಾರತದ ಮೊದಲ ಪಂದ್ಯವನ್ನು ಆಡಲು ಇಬ್ಬರೂ ಕ್ರಿಕೆಟಿಗರಿಗೆ ಸಾಧ್ಯವಾಗುವುದಿಲ್ಲ ಎಂಬುದು ಖಚಿತವಾಗಿದೆ.

CWG 2022: ಭಾರತ ಮಹಿಳಾ ಕ್ರಿಕೆಟ್ ತಂಡದ ಮತ್ತೊಬ್ಬ ಆಟಗಾರ್ತಿಗೆ ಕೊರೊನಾ ಸೋಂಕು..!
ಭಾರತ ಮಹಿಳಾ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Jul 26, 2022 | 7:45 PM

ಕಾಮನ್‌ವೆಲ್ತ್ ಗೇಮ್ಸ್ 2022 (Commonwealth Games 2022) ಪ್ರಾರಂಭವಾಗುವ ಮುನ್ನವೇ ಭಾರತೀಯ ಮಹಿಳಾ ಕ್ರಿಕೆಟ್ ತಂಡ ( Indian women’s cricket team) ಮತ್ತೊಂದು ಹಿನ್ನಡೆ ಅನುಭವಿಸಿದೆ. ಕೊರೊನಾ ವೈರಸ್ ಸೋಂಕಿನಿಂದ ಟೀಮ್ ಇಂಡಿಯಾದ ಮತ್ತೊಬ್ಬ ಸದಸ್ಯೆ ಬರ್ಮಿಂಗ್ಹ್ಯಾಮ್ಗೆ ತೆರಳಲು ಸಾಧ್ಯವಾಗಲಿಲ್ಲ. ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಟೀಮ್ ಇಂಡಿಯಾದಲ್ಲಿ ಇದು ಎರಡನೇ ಕೊರೊನಾ ಪ್ರಕರಣ ಎಂದು ಹೇಳಲಾಗಿದೆ. ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಇತ್ತೀಚೆಗೆ ಆಟಗಾರ್ತಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದರು. ಜುಲೈ 24 ರ ಭಾನುವಾರದಂದು ಭಾರತದ ತಂಡ ಬೆಂಗಳೂರಿನಿಂದ ಬರ್ಮಿಂಗ್ಹ್ಯಾಮ್ಗೆ ತೆರಳಿದೆ.

ಆಸ್ಟ್ರೇಲಿಯಾ ವಿರುದ್ಧ ಅವಕಾಶ ಸಿಗುವುದಿಲ್ಲ

ಇದನ್ನೂ ಓದಿ
Image
IND vs WI: ಟಿ20 ಸರಣಿಗೆ ಟ್ರೆನಿಡಾಡ್ ತಲುಪಿದ ರೋಹಿತ್ ಪಡೆ; ಕನ್ನಡಿಗ ರಾಹುಲ್ ಮಾತ್ರ ನಾಪತ್ತೆ!
Image
5 ಬೌಂಡರಿ, 9 ಸಿಕ್ಸರ್.. ಟಿ20 ಕ್ರಿಕೆಟ್​ನಲ್ಲಿ ದಾಖಲೆಯ ಶತಕ ಸಿಡಿಸಿದ 18ರ ಹರೆಯದ ಬ್ಯಾಟರ್! ಆದರೆ..?
Image
ಕೊನೆಯ ಓವರ್​ನಲ್ಲಿ 26 ರನ್ ಬಾರಿಸಿ ತಂಡಕ್ಕೆ ಅದ್ಭುತ ಗೆಲುವು ತಂದಿತ್ತ ನಂ.1 ಟಿ20 ಬೌಲರ್..! ವಿಡಿಯೋ ನೋಡಿ

ಸೋಂಕಿತರಾಗಿರುವ ಇಬ್ಬರು ಆಟಗಾರ್ತಿರ ಹೆಸರುಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ CWG 2022 ರಲ್ಲಿ ಭಾರತದ ಮೊದಲ ಪಂದ್ಯವನ್ನು ಆಡಲು ಇಬ್ಬರೂ ಕ್ರಿಕೆಟಿಗರಿಗೆ ಸಾಧ್ಯವಾಗುವುದಿಲ್ಲ ಎಂಬುದು ಖಚಿತವಾಗಿದೆ. ಮಹಿಳಾ ಕ್ರಿಕೆಟ್ ಅನ್ನು CWG ನಲ್ಲಿ ಮೊದಲ ಬಾರಿಗೆ ಸೇರಿಸಲಾಗಿದೆ, ಜೊತೆಗೆ 24 ವರ್ಷಗಳ ನಂತರ ಕಾಮನ್​ವೆಲ್ತ್​ಗೆ ಕ್ರಿಕೆಟ್ ಮರಳಿದೆ. ಟಿ20 ಮಾದರಿಯಲ್ಲಿ ಕ್ರಿಕೆಟ್ ಆಡಲಿದ್ದು, ಬಿ ಗುಂಪಿನಲ್ಲಿ ಭಾರತ ಜುಲೈ 29 ರಂದು ಮೊದಲ ಪಂದ್ಯದಲ್ಲಿ ಹಾಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಬೇಕಾಗಿದೆ.

ಬಿಸಿಸಿಐ ಮತ್ತು ಐಒಎ ಹೇಳಿದ್ದೇನು?

ಈ ನಿಟ್ಟಿನಲ್ಲಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(IOA) ನ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ PTI ಗೆ ತಿಳಿಸಿರುವ ಪ್ರಕಾರ, ಟೀಂ ಇಂಡಿಯಾದ ಮತ್ತೊಬ್ಬ ಆಟಗಾರ್ತಿಗೆ ಕೋವಿಡ್ -19 ಪಾಸಿಟಿವ್ ಆಗಿದ್ದು, ಇಬ್ಬರೂ ಆಟಗಾರ್ತಿಯರು ಭಾರತದಲ್ಲಿಯೇ ಉಳಿದಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಭಾರತೀಯ ಮಂಡಳಿಯಿಂದ ಅಧಿಕೃತವಾಗಿ ಏನನ್ನೂ ಹೇಳಲಾಗಿಲ್ಲ, ಆದರೆ ನಿಯಮಗಳ ಪ್ರಕಾರ, ಅವರ ಕೋವಿಡ್ ವರದಿ ನೆಗೆಟಿವ್ ಬಂದರೆ ಮಾತ್ರ ಇಬ್ಬರೂ ಆಟಗಾರ್ತಿಯರು ತಂಡವನ್ನು ಸೇರಿಕೊಳ್ಳಬಹುದು ಎಂದು ಬಿಸಿಸಿಐ ಮೂಲ ತಿಳಿಸಿದೆ.

ಎರಡನೇ ಪಂದ್ಯಕ್ಕೆ ವಾಪಸ್?

ಇಬ್ಬರೂ ಆಟಗಾರ್ತಿಯರು ಫಿಟ್ ಆಗಿದ್ದರೆ ಜುಲೈ 31 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಗ್ರೂಪ್ ಹಂತದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನವನ್ನು ಹೊರತುಪಡಿಸಿ ಭಾರತವು ಬಾರ್ಬಡೋಸ್ ವಿರುದ್ಧವೂ ಪಂದ್ಯವನ್ನು ಆಡಬೇಕಾಗಿದೆ. ಇವುಗಳಲ್ಲದೆ, ಆತಿಥೇಯ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ಕೂಡ ಕ್ರೀಡಾಕೂಟದ ಭಾಗವಾಗಿದೆ. ಫೈನಲ್ ಸೇರಿದಂತೆ ಎಲ್ಲಾ ಪಂದ್ಯಗಳು ಬರ್ಮಿಂಗ್‌ಹ್ಯಾಮ್‌ನ ಪ್ರಸಿದ್ಧ ಎಜ್‌ಬಾಸ್ಟನ್ ಮೈದಾನದಲ್ಲಿ ನಡೆಯಲಿವೆ.

ಬೆಂಗಳೂರಿನಲ್ಲಿ ತಯಾರಿ

ಈ ತಿಂಗಳ ಆರಂಭದಲ್ಲಿ ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಏಕದಿನ ಮತ್ತು ಟಿ20 ಸರಣಿಗೆ ತನ್ನ ಸಿದ್ಧತೆಯನ್ನು ಚುರುಕುಗೊಳಿಸಿತ್ತು. ಅಂದಿನಿಂದ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಂಡ ಅಭ್ಯಾಸದಲ್ಲಿ ತೊಡಗಿತ್ತು. ತಂಡದ ನಿರ್ಗಮನದ ಮೊದಲು, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಡುವ ಬಗ್ಗೆ ಭಾರತದ ನಾಯಕಿ ಹರ್ಮನ್‌ಪ್ರೀತ್ ಮಾತನಾಡಿ, “ನಮಗೆ ಆಗಾಗ್ಗೆ ಈ ಕ್ರೀಡಾಕೂಟದಲ್ಲಿ ಆಡಲು ಅವಕಾಶ ಸಿಗುವುದಿಲ್ಲ, ಆದ್ದರಿಂದ ಈ ಅವಕಾಶ ನಮಗೆ ಮುಖ್ಯವಾಗಿದೆ ಎಂದಿದ್ದರು.

Published On - 7:44 pm, Tue, 26 July 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ