CWG 2022: ವೇಟ್‌ಲಿಫ್ಟಿಂಗ್​ನಲ್ಲಿ ಭಾರತಕ್ಕೆ ಎರಡನೇ ಪದಕ; 61 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ..!

CWG 2022: ವೇಟ್‌ಲಿಫ್ಟಿಂಗ್‌ನೊಂದಿಗೆ ಖಾತೆಯನ್ನು ತೆರೆದ ನಂತರ, ಭಾರತಕ್ಕೆ ಅದೇ ಸ್ಪರ್ಧೆಯಲ್ಲಿ ಮತ್ತೊಂದು ಪದಕ ಸಿಕ್ಕಿತು. ಈ ಬಾರಿ ಭಾರತದ ಗುರುರಾಜ ಪೂಜಾರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.

CWG 2022: ವೇಟ್‌ಲಿಫ್ಟಿಂಗ್​ನಲ್ಲಿ ಭಾರತಕ್ಕೆ ಎರಡನೇ ಪದಕ; 61 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ..!
Gururaja
Follow us
TV9 Web
| Updated By: ಪೃಥ್ವಿಶಂಕರ

Updated on:Jul 30, 2022 | 7:47 PM

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 (Birmingham Commonwealth Games 2022)ರ ಎರಡನೇ ದಿನದಂದು ಭಾರತವು ತನ್ನ ಎರಡನೇ ಪದಕವನ್ನು ಪಡೆದುಕೊಂಡಿದೆ. ವೇಟ್ ಲಿಫ್ಟಿಂಗ್​ನಲ್ಲಿ ಖಾತೆ ತೆರೆದ ಭಾರತಕ್ಕೆ ಇದೇ ಸ್ಪರ್ಧೆಯಲ್ಲಿ ಮತ್ತೊಂದು ಪದಕ ಲಭಿಸಿದೆ. ಈ ಬಾರಿ ಭಾರತದ ಗುರುರಾಜ ಪೂಜಾರಿ (Gururaja Pujari) ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. 29ರ ಹರೆಯದ ವೇಟ್ ಲಿಫ್ಟರ್ ಪುರುಷರ 61 ಕೆಜಿ ತೂಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಸತತ ಎರಡನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಗುರುರಾಜ ಒಟ್ಟು 269 ಕೆ.ಜಿ. ತೂಕ ಎತ್ತಿದರು. ಈ ವಿಭಾಗದ ಚಿನ್ನವನ್ನು ಗೆದ್ದ ಅಜ್ನಿಲ್ ಬಿನ್ ಮುಹಮ್ಮದ್ ಅವರು ಒಟ್ಟು 285 ಕೆಜಿ ಎತ್ತುವ ಮೂಲಕ ಸಿಡಬ್ಲ್ಯೂಜಿಯಲ್ಲಿ ಹೊಸ ದಾಖಲೆ ನಿರ್ಮಿಸಿದರು.

ಜುಲೈ 29 ರಂದು ಕ್ರೀಡಾಕೂಟದ ಮೊದಲ ದಿನ ಭಾರತಕ್ಕೆ ಯಾವುದೇ ಪದಕ ಸಿಗಲಿಲ್ಲ, ಆದರೆ ಎರಡನೇ ದಿನ ವೇಟ್‌ಲಿಫ್ಟರ್‌ಗಳು ದೇಶದ ಖಾತೆಯನ್ನು ತೆರೆದರು. ಮೊದಲ 55 ಕೆಜಿ ವಿಭಾಗದಲ್ಲಿ 21ರ ಹರೆಯದ ಸಂಕೇತ್ ಸರ್ಗರ್ ಬೆಳ್ಳಿ ಪದಕದೊಂದಿಗೆ ಶುಭಾರಂಭ ಮಾಡಿದರು. ಕೇವಲ ಒಂದು ಕಿಲೋ ಅಂತರದಲ್ಲಿ ಚಿನ್ನ ಗೆಲ್ಲುವ ಅವಕಾಶ ಕಳೆದುಕೊಂಡರು. ನಂತರ ಸುಮಾರು 2 ಗಂಟೆಗಳ ಬಳಿಕ ಗುರುರಾಜ ಪೂಜಾರಿ ದೇಶಕ್ಕೆ ಎರಡನೇ ಚಿನ್ನ ತಂದುಕೊಟ್ಟರು.

ಇದನ್ನೂ ಓದಿ
Image
CWG 2022: ಕೇವಲ ಒಂದೇ ಒಂದು ಕೆ.ಜಿ ಭಾರ ಪದಕದ ಬಣ್ಣವನ್ನೇ ಬದಲಾಯಿಸಿತು..!
Image
CWG 2022: ಚಿನ್ನ ಜಸ್ಟ್ ಮಿಸ್; ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಬೆಳ್ಳಿಯೊಂದಿಗೆ ಭಾರತದ ಖಾತೆ ತೆರೆದ ಸಂಕೇತ್ ಸರ್ಗರ್..!
Image
CWG 2022: ಭಾರತದೆದುರು ಆಡುವ ಮುನ್ನವೇ ಪಾಕಿಸ್ತಾನಕ್ಕೆ ಹೀನಾಯ ಸೋಲಿನ ರುಚಿ ತೋರಿದ ಕ್ರಿಕೆಟ್ ಶಿಶು ಬಾರ್ಬಡೋಸ್

ಕರ್ನಾಟಕದ ಉಡುಪಿ ಜಿಲ್ಲೆಯ ಗುರುರಾಜ ಪೂಜಾರಿ ಈ ಹಿಂದೆ 2018ರ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದರು. ನಂತರ 56 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ಗೆದ್ದರು. ಈ ಬಾರಿ ವಿಭಾಗ ಬದಲಿಸಿದ ಗುರುರಾಜ 61 ಕೆಜಿ ವಿಭಾಗದಲ್ಲಿ ಅಖಾಡಕ್ಕಿಳಿದು ಕಂಚು ಗೆದ್ದಿದ್ದಾರೆ.

ವೇಟ್‌ಲಿಫ್ಟಿಂಗ್‌ನಲ್ಲಿ ದೇಶದ ಅತಿದೊಡ್ಡ ಸ್ಪರ್ಧಿ ಇನ್ನೂ ಸ್ಪರ್ಧಿಸದ ಕಾರಣ ಶನಿವಾರ ಭಾರತಕ್ಕೆ ಇನ್ನಷ್ಟು ಉತ್ತಮವಾಗಿದೆ ಎಂದು ನಿರೀಕ್ಷಿಸಲಾಗಿದೆ. ಈ ಇಬ್ಬರು ಪುರುಷರ ಈವೆಂಟ್‌ಗಳ ನಂತರ, ಇಂದು ಭಾರತೀಯ ವೇಟ್‌ಲಿಫ್ಟರ್‌ಗಳು ಎರಡು ಮಹಿಳಾ ಸ್ಪರ್ಧೆಗಳಲ್ಲಿ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ. ಇದರಲ್ಲಿ ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಹಾಗೂ ಮಾಜಿ ವಿಶ್ವಚಾಂಪಿಯನ್ ಮೀರಾಬಾಯಿ ಚಾನು 49 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಚಾನು ಅವರನ್ನು ಈಗಾಗಲೇ ಈ ಈವೆಂಟ್‌ನಲ್ಲಿ ಚಿನ್ನದ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಮೀರಾಬಾಯಿ ಹೊರತುಪಡಿಸಿ, ಇತರ ಸ್ಪರ್ಧಿ ಬಿಂದಿಯಾರಾಣಿ ದೇವಿ 55 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

Published On - 6:15 pm, Sat, 30 July 22

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ