AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಶೂಟೌಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಕಂಚಿನ ಪದಕ ಗೆದ್ದ ಭಾರತ ಮಹಿಳಾ ಹಾಕಿ ತಂಡ

CWG 2022: ಕಂಚಿನ ಪದಕದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಭಾರತ ಮಹಿಳಾ ತಂಡ ಕಂಚಿನ ಪದಕ ಗೆದ್ದಿದೆ. ಇದರೊಂದಿಗೆ ಭಾರತದ ಚೀಲದಲ್ಲಿ ಮತ್ತೊಂದು ಪದಕ ಬಿದ್ದಿದೆ.

CWG 2022: ಶೂಟೌಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಕಂಚಿನ ಪದಕ ಗೆದ್ದ ಭಾರತ ಮಹಿಳಾ ಹಾಕಿ ತಂಡ
TV9 Web
| Edited By: |

Updated on:Aug 07, 2022 | 4:23 PM

Share

ಭಾರತ ಮಹಿಳಾ ಹಾಕಿ ತಂಡ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ (Commonwealth Games) ಅದ್ಭುತ ದಾಖಲೆ ಮಾಡಿದೆ. ಕಂಚಿನ ಪದಕದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಭಾರತ ಮಹಿಳಾ ತಂಡ ಕಂಚಿನ ಪದಕ ಗೆದ್ದಿದೆ. ಇದರೊಂದಿಗೆ ಭಾರತದ ಚೀಲದಲ್ಲಿ ಮತ್ತೊಂದು ಪದಕ ಬಿದ್ದಿದೆ. ಭಾರತ ಮತ್ತು ನ್ಯೂಜಿಲೆಂಡ್ (India and New Zealand) ಮಹಿಳಾ ತಂಡಗಳ ನಡುವಿನ ಕಂಚಿನ ಪದಕದ ಪಂದ್ಯವು ರೋಚಕವಾಗಿತ್ತು. ಎರಡೂ ತಂಡಗಳಿಂದ ಅತ್ಯುತ್ತಮ ಪ್ರದರ್ಶನ ಕಂಡುಬಂತು. ಆದರೆ ಕೊನೆಯಲ್ಲಿ, ಭಾರತದ ಮಹಿಳಾ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಕಂಚಿನ ಪದಕದ ಪಂದ್ಯದ ಮೊದಲ ಕ್ವಾರ್ಟರ್ ಗೋಲು ರಹಿತವಾಗಿತ್ತು. ಉಭಯ ತಂಡಗಳು ಸಾಕಷ್ಟು ಪ್ರಯತ್ನ ಮಾಡಿದರೂ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಇದರ ನಂತರ ಭಾರತ ತಂಡ ಎರಡನೇ ಕ್ವಾರ್ಟರ್‌ನಲ್ಲಿ 1-0 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಆದರೆ ಮೂರನೇ ಕ್ವಾರ್ಟರ್ ಮತ್ತೆ ಗೋಲು ರಹಿತವಾಗಿತ್ತು. ಪಂದ್ಯದ ಎರಡನೇ ಗೋಲು ಮತ್ತು ನ್ಯೂಜಿಲೆಂಡ್‌ನಿಂದ ಮೊದಲ ಗೋಲು ನಾಲ್ಕನೇ ಕ್ವಾರ್ಟರ್‌ನ ಕೊನೆಯ ಕ್ಷಣಗಳಲ್ಲಿ ಕಂಡುಬಂದಿತು, ನಂತರ ಪಂದ್ಯ 4 ಕ್ವಾರ್ಟರ್‌ಗಳ ನಂತರ 1-1 ರಿಂದ ಡ್ರಾದಲ್ಲಿ ಕೊನೆಗೊಂಡಿತು.

ಇದನ್ನೂ ಓದಿ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಬಂಗಾರ; 57 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ರವಿ ದಹಿಯಾ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ; 50 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಪೂಜಾ ಗೆಹ್ಲೋಟ್
Image
CWG 2022 Winner List Day 9: 9ನೇ ದಿನ ಪದಕಗಳ ಭೇಟೆಯಾಡಿದ ಭಾರತ; ಇಲ್ಲಿದೆ ಪೂರ್ಣ ವಿವರ

ಶೂಟೌಟ್‌ನಲ್ಲಿ ಕಂಚಿನ ಪದಕ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕಂಚಿನ ಪದಕದ ಪಂದ್ಯ ಶೂಟೌಟ್‌ನಲ್ಲಿ ನಿರ್ಧಾರವಾಯಿತು. ಅದರಲ್ಲಿ ಭಾರತ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಭಾರತದ ಪರ ಗೋಲ್‌ಕೀಪರ್ ಸವಿತಾ ನ್ಯೂಜಿಲೆಂಡ್‌ನ 3 ಶೂಟ್‌ಗಳನ್ನು ವಿಫಲಗೊಳಿಸಿ ಪಂದ್ಯವನ್ನು ಭಾರತದತ್ತ ತಿರುಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಶೂಟೌಟ್‌ನಲ್ಲಿ ಭಾರತ ಮೂರು ಗೋಲುಗಳನ್ನು ಗಳಿಸಿದರೆ, ಗೋಲ್‌ಕೀಪರ್ ಸವಿತಾ ಮೂರು ಗೋಲುಗಳನ್ನು ಉಳಿಸಿದರು. 16 ವರ್ಷಗಳ ನಂತರ ಭಾರತೀಯ ಮಹಿಳಾ ಹಾಕಿ ತಂಡವು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕಾದ ವಿಚಾರ.

Published On - 3:14 pm, Sun, 7 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?