CWG 2022: ಫೈನಲ್​ನಲ್ಲಿ ಪಾಕಿಸ್ತಾನದ ಕುಸ್ತಿಪಟುವನ್ನು ಉಸಿರುಗಟ್ಟಿಸಿ ಭಾರತಕ್ಕೆ ಚಿನ್ನ ಗೆದ್ದ ನವೀನ್..!

CWG 2022: ಭಾರತದ ಪುರುಷ ಕುಸ್ತಿಪಟು ನವೀನ್ ಶನಿವಾರ ಕಾಮನ್‌ವೆಲ್ತ್ ಗೇಮ್ಸ್‌ನ 74 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನವೀನ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ತಾಹಿರ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು.

CWG 2022: ಫೈನಲ್​ನಲ್ಲಿ ಪಾಕಿಸ್ತಾನದ ಕುಸ್ತಿಪಟುವನ್ನು ಉಸಿರುಗಟ್ಟಿಸಿ ಭಾರತಕ್ಕೆ ಚಿನ್ನ ಗೆದ್ದ ನವೀನ್..!
Naveen
Follow us
TV9 Web
| Updated By: ಪೃಥ್ವಿಶಂಕರ

Updated on:Aug 06, 2022 | 11:41 PM

ಭಾರತದ ಪುರುಷ ಕುಸ್ತಿಪಟು (male wrestler) ನವೀನ್ ಶನಿವಾರ ಕಾಮನ್‌ವೆಲ್ತ್ ಗೇಮ್ಸ್‌ನ ( Commonwealth Games) 74 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನವೀನ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ತಾಹಿರ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು. ಈ ಕ್ರೀಡಾಕೂಟದಲ್ಲಿ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಇದು ಆರನೇ ಚಿನ್ನದ ಪದಕವಾಗಿದೆ. ನವೀನ್ ಎದುರು ಪಾಕಿಸ್ತಾನದ ಕುಸ್ತಿಪಟು ಎಲ್ಲಿಯೂ ನಿಲ್ಲಲಾರದೆ ಸುಲಭವಾಗಿ ಸೋಲನುಭವಿಸಿದರು.

ತಾಹಿರ್, ನವೀನ್ ವಿರುದ್ಧ ಲೆಗ್ ಅಟ್ಯಾಕ್ ಮಾಡಲು ಪ್ರಯತ್ನಿಸಿದರು. ನವೀನ್ ಕೂಡ ಅದೇ ಪ್ರಯತ್ನ ಮಾಡಿದರು, ಆದರೆ ತಾಹಿರ್ ಜಾಣತನದಿಂದ ನವಿನ್ ಜಾಲಕ್ಕೆ ಬೀಳುವುದರಿಂದ ತಪ್ಪಿಸಿಕೊಂಡರು. ಈ ಮಧ್ಯೆ, ರೆಫರಿ ತಾಹಿರ್‌ಗೆ ನಿಷ್ಕ್ರಿಯತೆಗೆ (passivity) ಸವಾಲು ಹಾಕಿದರು. ಇದಾದ ಬೆನ್ನಲ್ಲೇ ನವೀನ್ ತಾಹಿರ್ ಅವರನ್ನು ಕೆಳಕ್ಕೆ ಕೆಡವಿ ಎರಡು ಪಾಯಿಂಟ್ಸ್ ಪಡೆದರು. ಮೊದಲ ಸುತ್ತಿನ ಅಂತ್ಯಕ್ಕೆ ನವೀನ್ 2-0 ಮುನ್ನಡೆ ಸಾಧಿಸಿದ್ದರು.

ಇದನ್ನೂ ಓದಿ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಬಂಗಾರ; 57 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ರವಿ ದಹಿಯಾ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ; 50 ಕೆಜಿ ವಿಭಾಗದಲ್ಲಿ ಕಂಚು ಗೆದ್ದ ಪೂಜಾ ಗೆಹ್ಲೋಟ್
Image
CWG 2022 Winner List Day 9: 9ನೇ ದಿನ ಪದಕಗಳ ಭೇಟೆಯಾಡಿದ ಭಾರತ; ಇಲ್ಲಿದೆ ಪೂರ್ಣ ವಿವರ

ಎರಡನೇ ಸುತ್ತಿನಲ್ಲಿ ರಕ್ಷಣಾತ್ಮಕ ಆಟ

ಪಾಕಿಸ್ತಾನಿ ಕುಸ್ತಿಪಟು ಎರಡನೇ ಸುತ್ತಿನಲ್ಲಿ ರಕ್ಷಣಾತ್ಮಕ ಆಟಕ್ಕೆ ಮುಂದಾದರು. ಇಲ್ಲಿ ನವೀನ್ ಮೇಲುಗೈ ಸಾಧಿಸಿ ಮೂರು ಅಂಕಗಳನ್ನು ಗಳಿಸಿದರು ಮತ್ತು ಸ್ಕೋರ್ ಅನ್ನು 5-0 ಮಾಡಿದರು. ನಂತರ ನವೀನ್ ನಾಲ್ಕು ಪಾಯಿಂಟ್ಸ್ ಬೆಟ್ಟಿಂಗ್ ಮಾಡುವ ಮೂಲಕ ಸ್ಕೋರ್ ಅನ್ನು 9-0 ಗೆ ತೆಗೆದುಕೊಂಡು ಹೊದರು. ಇಲ್ಲಿ ನವೀನ್‌ಗೆ ಇನ್ನೂ ಒಂದು ಪಾಯಿಂಟ್ ಅಗತ್ಯವಿತ್ತು, ಅದರಿಂದ ಅವನು ತಾಂತ್ರಿಕ ಪ್ರಾವೀಣ್ಯತೆಯ ಆಧಾರದ ಮೇಲೆ ಪಂದ್ಯವನ್ನು ಗೆದ್ದುಕೊಂಡರು.

Published On - 11:13 pm, Sat, 6 August 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ