AUSW vs INDW: ಕೊರೊನಾ ಪಾಸಿಟಿವ್ ಇದ್ದರೂ ಕಣಕ್ಕಿಳಿದ ಆಟಗಾರ್ತಿ: ವಿವಾದದಲ್ಲಿ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ

Indian women Cricket: ಕಾಮನ್​ವೆಲ್ತ್ ಗೇಮ್ಸ್ ಕ್ರಿಕೆಟ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಭಾರತ ಬೆಳ್ಳಿ ಪದಕ ಬಾಚಿಕೊಂಡಿದೆ. ಆದರೀಗ ಕೊರೊನಾ ಪಾಸಿಟಿವ್ ಇದ್ದ ಆಟಗಾರ್ತಿ ತಲಿಯಾ ಮೆಘ್ರಾತ್ ಕಣಕ್ಕಿಳಿದಿದ್ದು ವಿವಾದಕ್ಕೆ ಕಾರಣವಾಗಿದೆ.

AUSW vs INDW: ಕೊರೊನಾ ಪಾಸಿಟಿವ್ ಇದ್ದರೂ ಕಣಕ್ಕಿಳಿದ ಆಟಗಾರ್ತಿ: ವಿವಾದದಲ್ಲಿ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ
INDW vs AUSW CWG 2022
Follow us
TV9 Web
| Updated By: Vinay Bhat

Updated on:Aug 08, 2022 | 10:39 AM

ಕಾಮನ್​ವೆಲ್ತ್ ಗೇಮ್ಸ್​ನಲ್ಲಿ (Commonwealth Games 2022) ಬಹಳ ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯಕ್ಕೆ ಅವಕಾಶ ನೀಡಲಾಯಿತು. ಅದರಂತೆ ಎರಡು ಗುಂಪುಗಳ ಒಟ್ಟು ಎಂಟು ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಅಂತಿಮವಾಗಿ ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ (India Women vs Australia Women) ಫೈನಲ್ ತಲುಪಿದವು. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್ ಕಾದಾಟದಲ್ಲಿ ಆಸ್ಟ್ರೇಲಿಯಾ 9 ರನ್​ಗಳ ಜಯ ಸಾಧಿಸಿ ಚಿನ್ನದ ಪದಕ ಬಾಚಿಕೊಂಡಿದೆ. ಗೆಲುವಿನ ಅಂಚಿನಲ್ಲಿ ಎಡವಿದ ಹರ್ಮನ್​ಪ್ರೀತ್ ಪಡೆ ಸೋತು ಬೆಳ್ಳಿಗೆ ತೃಪ್ತಿ ಪಡೆದುಕೊಂಡಿತು. ಆದರೀಗ ಇಂಡೋಆಸೀಸ್ ನಡುವಣ ಫೈನಲ್ ಕದನ ವಿವಾದಕ್ಕೆ ಕಾರಣವಾಗಿದೆ. ಯಾಕೆಂದರೆ ಕೊರೊನಾ ಪಾಸಿಟಿವ್ ಇದ್ದ ಆಟಗಾರ್ತಿ ತಲಿಯಾ ಮೆಘ್ರಾತ್ (Tahlia McGrath) ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ಕೋವಿಡ್ ಪಾಸಿಟಿವ್ ಇದ್ದರೂ ಭಾರತ ವಿರುದ್ಧದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಗಿಟ್ಟಿಸಿಕೊಂಡ ತಲಿಯಾ ಮೆಘ್ರಾತ್ ಬ್ಯಾಟಿಂಗ್​ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದಾರೆ. ಅಲ್ಲದೆ ಬೌಲಿಂಗ್ ಕೂಡ ಮಾಡಿದ್ದಾರೆ. ಮಾಸ್ಕ್ ಕೂಡ ಹಾಕಿರಲಿಲ್ಲ ಎಂದು ನೆಟ್ಟಿಗರು ಟ್ವಿಟರ್​ನಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಐಸಿಸಿ ನಿಯಮದಲ್ಲಿ ಇದಕ್ಕೆ ಒಪ್ಪಿಗೆ ಇದೆಯೇ? ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ
Image
Rohit Sharma: ಟ್ರೋಫಿ ಸ್ವೀಕರಿಸಲು ರೋಹಿತ್, ಕಾರ್ತಿಕ್, ಅಶ್ವಿನ್ ಮೈದಾನಕ್ಕೆ ಹೇಗೆ ಬಂದ್ರು ನೋಡಿ
Image
CWG 2022: 18 ಚಿನ್ನ, 15 ಬೆಳ್ಳಿ, 22 ಕಂಚು: 55ಕ್ಕೇರಿದ ಭಾರತದ ಪದಕಗಳ ಸಂಖ್ಯೆ
Image
CWG 2022: ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬೆಳ್ಳಿ ಗೆದ್ದು ಬೀಗಿದ ಸಾಗರ್ ಅಹ್ಲಾವತ್
Image
CWG 2022: ಟೇಬಲ್ ಟೆನಿಸ್ ಮಿಶ್ರ ಡಬಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಶರತ್- ಶ್ರೀಜಾ ಜೋಡಿ

ಪಂದ್ಯ ಆರಂಭಕ್ಕೂ ಮುನ್ನ ನಡೆದ ರಾಷ್ಟ್ರಗೀತೆಗೆ ಗೌರವ ಸೂಚಿಸುವ ಸಮಯದಲ್ಲಿ ತಲಿಯಾ ಮೈದಾನದಲ್ಲಿ ಹಾಜರಿರಲಿಲ್ಲ. ಅವರು ಡ್ರೆಸ್ಸಿಂಗ್ ರೂಮ್​ನಲ್ಲಿ ಒಬ್ಬರೇ ಮಾಸ್ಕ್ ಹಾಕಿಕೊಂಡ ಕೂತಿದ್ದರು. ಆದರೆ, ಬ್ಯಾಟಿಂಗ್ ಮಾಡುವಾಗ ನಾಲ್ಕನೇ ಕ್ರಮಾಂಕದಲ್ಲಿ ಮಾಸ್ಕ್ ಇಲ್ಲದೆ ಆಟವಾಡಿದ್ದಾರೆ. ಬೌಲಿಂಗ್ ಕೂಡ ಮಾಡಿದ್ದಾರೆ. ಸಂಭ್ರಮಾಚರಣೆ ವೇಳೆ ಯಾರ ಹತ್ತಿರ ಕೂಡ ಬರಲಿಲ್ಲ. ಸದ್ಯ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಈ ಪಂದ್ಯದಲ್ಲಿ ಮೊದಲು ಟಾಸ್​ ಗೆದ್ದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು. ಅಲಿಸ್ಸಾ ಹೀಲಿ (7 ರನ್​) ಮೂರನೇ ಓವರ್​ನಲ್ಲಿ ರೇಣುಕಾ ಸಿಂಗ್​ಗೆ ವಿಕೆಟ್​ ಒಪ್ಪಿಸಿದರು. ಆದರೆ, ನಂತರ ಜೊತೆಯಾದ ಬೆತ್ ಮೂನಿ ಹಾಗೂ ನಾಯಕಿ ಮೆಗ್ ಲ್ಯಾನಿಂಗ್ 50 ರನ್​ಗಳ ಜೊತೆಯಾಟ ನೀಡಿದರು. ತಂಡದ ಮೊತ್ತ 83 ಆಗಿದ್ದಾಗ ರನ್​ ಕದಿಯಲು ಹೋದ ಮೆಗ್ ಲ್ಯಾನಿಂಗ್ (36 ರನ್​) ರನೌಟ್​ಗೆ ಬಲಿಯಾದರು.

ಲ್ಯಾನಿಂಗ್​ ಔಟಾದ ಬಳಿಕ ಬಂದ ಆಟಗಾರ್ತಿಯರು ರನ್​ಗಳಿಸಲು ವಿಫಲರಾದರು. ಆಸ್ಟ್ರೇಲಿಯಾ ಪರ ಬೆತ್ ಮೂನಿ 41 ಎಸೆತಗಳಲ್ಲಿ 61 ರನ್ ಗಳಿಸಿದರೆ​ ಆಶ್ಲೀ ಗಾರ್ಡ್ನರ್ 25 ರನ್​ ಹಾಗೂ ಹೇನ್ಸ್ ಅಜೇಯ 18 ರನ್ ಕಲೆಹಾಕಿದ ಪರಿಣಾಮ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಿಗೆ 8 ವಿಕೆಟ್​ಗಳನ್ನು ಕಳೆದುಕೊಂಡು 161 ರನ್​ ಗಳಿಸಿತು. ಭಾರತದ ಪರ ರೆಣುಕಾ ಸಿಂಗ್ ಮತ್ತು ಸ್ನೇಹ ರಾಣ ತಲಾ ಎರಡು ವಿಕೆಟ್​ ಪಡೆದು ಮಿಂಚಿದರು.

162 ರನ್​ಗಳ ಗುರಿಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಭರ್ಜರಿ ಫಾರ್ಮ್​ನಲ್ಲಿದ್ದ ಸ್ಮೃತಿ ಮಂಧಾನ (6 ರನ್​) ಮತ್ತು ಶಪಾಲಿ ವರ್ಮಾ (11 ರನ್​) ಕಡಿಮೆ ರನ್‌ಗಳಿಗೆ ಪೆವಿಲಿಯನ್ ಸೇರಿದರು. ಬಳಿಕ ರೋಡ್ರಿಗಾಸ್ (33 ರನ್​) ಜತೆಗೂಡಿದ ಹರ್ಮನ್ ಪ್ರೀತ್ ಕೌರ್ ಇನಿಂಗ್ಸ್ ಕಟ್ಟಿದರು. ಈ ಜೋಡಿ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿ ಔಟಾಯಿತು.

ಕೌರ್ 43 ಎಸೆತಗಳಲ್ಲಿ 65 ರನ್ ಸಿಡಿಸಿದರು. ಇವರ ನಿರ್ಗಮನದ ಬಳಿಕ ಭಾರತ ಅಲ್ಪಾವಧಿಯಲ್ಲಿ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಕೊನೆಯ ಓವರ್‌ನಲ್ಲಿ ಭಾರತದ ಗೆಲುವಿಗೆ 11 ರನ್‌ಗಳ ಅಗತ್ಯವಿತ್ತು. ಆದರೆ, ನಿಗದಿತ 20 ಓವರ್​ಗಳಲ್ಲಿ ಸರ್ವ ಪತನಗೊಂಡು 152 ರನ್​ಗಳಿಸುವ ಮೂಲಕ ಆಸ್ಟ್ರೇಲಿಯಾ ವಿರುದ್ಧ 9 ರನ್​ಗಳ ಸೋಲು ಕಂಡಿತು. ಹೀಗಾಗಿ ಬೆಳ್ಳಿ ಪದಕವನ್ನು ಭಾರತ ಬಾಚಿಕೊಂಡಿತು.

Published On - 10:27 am, Mon, 8 August 22

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ