AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, LIVE Streaming: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತಕ್ಕೆ ಪಾಕ್ ಎದುರಾಳಿ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IND vs PAK, LIVE Streaming: ಮೊದಲ ಪಂದ್ಯದಲ್ಲಿ ಸೋತಿರುವ ಉಭಯ ತಂಡಗಳಿಗೆ ಈ ಪಂದ್ಯದ ಗೆಲುವು ಬಹಳ ಮುಖ್ಯ. ಎರಡೂ ತಂಡಗಳು ಸೋತರೆ ಮುಂದಿನ ಸುತ್ತಿಗೆ ಹೋಗುವುದು ತುಂಬಾ ಕಷ್ಟ.

IND vs PAK, LIVE Streaming: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತಕ್ಕೆ ಪಾಕ್ ಎದುರಾಳಿ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
IND vs PAK
TV9 Web
| Updated By: ಪೃಥ್ವಿಶಂಕರ|

Updated on:Jul 30, 2022 | 3:24 PM

Share

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ (Commonwealth Games) ಭಾನುವಾರ ಭಾರತಕ್ಕೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಈ ದಿನ ಭಾರತ ಮತ್ತು ಪಾಕಿಸ್ತಾನ (India and Pakistan) ಮುಖಾಮುಖಿಯಾಗುತ್ತಿವೆ. ಭಾರತ ಮತ್ತು ಪಾಕಿಸ್ತಾನದ ಮಹಿಳಾ ಕ್ರಿಕೆಟ್ ತಂಡಗಳು ಪರಸ್ಪರ ಮುಖಾಮುಖಿಯಾಗಿ ತಮ್ಮ ಗೆಲುವಿನ ಖಾತೆ ತೆರೆಯಲು ಪ್ರಯತ್ನಿಸಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾದ ಎದುರು ಕಳೆದುಕೊಂಡರೆ, ಪಾಕಿಸ್ತಾನದ ತಂಡವು ಬಾರ್ಬಡೋಸ್‌ನಂತಹ ತಂಡಕ್ಕೆ ಶರಣಾಗಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆಸ್ಟ್ರೇಲಿಯಾ ವಿರುದ್ಧ ಎಂಟು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತ್ತು. ಆದರೆ ತಂಡದ ಬೌಲರ್‌ಗಳು ಈ ಗುರಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಪಂದ್ಯವನ್ನು ಕಳೆದುಕೊಂಡರು. ಆಸ್ಟ್ರೇಲಿಯ 19 ಓವರ್‌ಗಳಲ್ಲಿ ಏಳು ವಿಕೆಟ್‌ಗಳ ನಷ್ಟಕ್ಕೆ 157 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಪಾಕಿಸ್ತಾನದೊಂದಿಗೆ ಪಂದ್ಯ ನಡೆದಾಗಲೆಲ್ಲ ರೋಚಕತೆ ಉತ್ತುಂಗದಲ್ಲಿದ್ದು ಈ ಪಂದ್ಯ ಉಭಯ ದೇಶಗಳ ಕ್ರೆಡಿಬಿಲಿಟಿ ಆಗುವುದರಿಂದ ಎರಡೂ ತಂಡಗಳು ಈ ಪಂದ್ಯವನ್ನು ಗೆಲ್ಲಲು ಪ್ರಾಣಾರ್ಪಣೆ ಮಾಡಲಿವೆ.

ಬಾರ್ಬಡೋಸ್ ಮುಂದೆ ಸೋತ ಪಾಕ್

ಇದನ್ನೂ ಓದಿ
Image
CWG 2022: ಭಾರತದೆದುರು ಆಡುವ ಮುನ್ನವೇ ಪಾಕಿಸ್ತಾನಕ್ಕೆ ಹೀನಾಯ ಸೋಲಿನ ರುಚಿ ತೋರಿದ ಕ್ರಿಕೆಟ್ ಶಿಶು ಬಾರ್ಬಡೋಸ್
Image
Ind vs Aus: 49 ರನ್​ಗಳಿಗೆ 5 ವಿಕೆಟ್‌ ಉರುಳಿದರೂ ಭಾರತಕ್ಕೆ ಸೋಲು; ಕಣ್ಣೀರಿಟ್ಟ ಹರ್ಮನ್‌ಪ್ರೀತ್‌-ರೇಣುಕಾ..!
Image
CWG 2022: ಟೇಬಲ್ ಟೆನಿಸ್‌ನಲ್ಲಿ ಶುಭಾರಂಭ ಮಾಡಿದ ಭಾರತ; ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಮನಿಕಾ ಬಾತ್ರಾ..!

ಬಾರ್ಬಡೋಸ್‌ನಂತಹ ಹೊಸದಾಗಿ ಉದಯೋನ್ಮುಖ ತಂಡದ ಮುಂದೆ ಪಾಕಿಸ್ತಾನ ಸೋಲುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ನಾಲ್ಕು ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ 129 ರನ್‌ಗಳನ್ನು ದಾಟಲು ಸಾಧ್ಯವಾಗಲಿಲ್ಲ. ಅವರಿಗೂ ಈ ಪಂದ್ಯದಲ್ಲಿ ಗೆಲುವಿನ ಅವಶ್ಯಕತೆಯಿದೆ. ಎರಡೂ ತಂಡಗಳು ಸೋತರೆ ಮುಂದಿನ ಸುತ್ತಿಗೆ ಹೋಗುವುದು ತುಂಬಾ ಕಷ್ಟ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯವು ಜುಲೈ 31 ಭಾನುವಾರದಂದು ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಕ್ರೀಡಾಕೂಟದ ಲೀಗ್ ಸುತ್ತಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ಪಾಕಿಸ್ತಾನ ನಡುವೆ ಕಾಮನ್‌ವೆಲ್ತ್ ಕ್ರೀಡಾಕೂಟದ ಲೀಗ್ ಸುತ್ತಿನ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯದ ನೇರ ಪ್ರಸಾರ ಸೋನಿ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ?

ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಮನ್‌ವೆಲ್ತ್ ಗೇಮ್ಸ್‌ನ ಲೀಗ್ ಸುತ್ತಿನ ಪಂದ್ಯ ಸೋನಿ ಲಿವ್‌ನಲ್ಲಿ ನೇರ ಪ್ರಸಾರವಾಗಲಿದೆ.

Published On - 3:24 pm, Sat, 30 July 22