CWG 2022: ಆಫ್ರಿಕಾ ವಿರುದ್ಧ ರೋಚಕ ಜಯ: ಫೈನಲ್ಗೆ ಲಗ್ಗೆಯಿಟ್ಟ ಭಾರತ ಪುರುಷರ ಹಾಕಿ ತಂಡ
India vs South Africa, CWG 2022 Men's Hockey: ಭಾರತ ಪುರುಷರ ಹಾಕಿ ತಂಡ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಬರ್ಮಿಂಗ್ಹ್ಯಾಮ್ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 3-2 ಗೋಲುಗಳ ಅಂತರದಿಂದ ಸೋಲಿಸಿ ರೋಚಕ ಜಯ ಸಾಧಿಸಿತು.
ಕಾಮನ್‌ವೆಲ್ತ್ ಗೇಮ್ಸ್ನಲ್ಲಿ (Commonwealth Games 2022) ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಭಾರತ ಪುರುಷರ ಹಾಕಿ ತಂಡ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಬರ್ಮಿಂಗ್ಹ್ಯಾಮ್ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು (India vs South Africa) 3-2 ಗೋಲುಗಳ ಅಂತರದಿಂದ ಸೋಲಿಸಿ ರೋಚಕ ಜಯ ಸಾಧಿಸಿತು. ಆರಂಭದಿಂದಲೂ ಸಾಕಷ್ಟು ರೋಚಕತೆ ಸೃಷ್ಟಿಸಿದ ಪಂದ್ಯದ ಮೊದಲ ಕ್ವಾರ್ಟರ್ನಲ್ಲಿ ಉಭಯ ತಂಡಗಳಿಗೆ ಯಾವುದೇ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಎರಡನೇ ಕ್ವಾರ್ಟರ್ ನಲ್ಲಿ ಭಾರತ ಎರಡು ಗೋಲು ಗಳಿಸಿತು. ಅಭಿಷೇಕ್ ಅವರು ಭಾರತದ ಖಾತೆ ತೆರೆದರೆ, ಮನದೀಪ್ ಸಿಂಗ್ (Mandeep Singh) ಏಕಾಂಗಿ ಸಾಹಸದಲ್ಲಿ ಗೋಲು ಗಳಿಸಿ ಮುನ್ನಡೆಯನ್ನು 2-0ಗೆ ವಿಸ್ತರಿಸಿದರು. ನಾಲ್ಕನೇ ಕ್ವಾರ್ಟರ್ನಲ್ಲಿ ಭಾರತ ಮುನ್ನಡೆ ಕಾಯ್ದುಕೊಂಡಿತು. ಪಂದ್ಯದ ಕೊನೆಯ ವೇಳೆಗೆ ಉಭಯ ತಂಡಗಳು ತಲಾ ಒಂದು ಗೋಲು ಗಳಿಸಿದವು. ಕೊನೆ ಹಂತದಲ್ಲಿ ಆಫ್ರಿಕಾವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದ ಭಾರತ ಜಯ ಸಾಧಿಸಿ ಫೈನಲ್ಗೆ ಪ್ರವೇಸಿಸಿದೆ.
ಭಾರತ ಪುರುಷರ ಹಾಕಿ ತಂಡ ಫೈನಲ್‍ನಲ್ಲಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ವಿಜೇತ ತಂಡವನ್ನು ಎದುರಿಸಲಿದೆ. ಸೆಮಿಫೈನಲ್‍ನಲ್ಲಿ ಸೋತ ತಂಡಗಳು ಕಂಚಿನ ಪದಕಕ್ಕಾಗಿ ಸೆಣೆಸಲಿವೆ. ಇದೀಗ ಭಾರತ ಒಟ್ಟು 40 ಪದಕವನ್ನು ಬಾಜಿಕೊಂಡಿದ್ದು 13 ಚಿನ್ನ, 11 ಬೆಳ್ಳಿ ಮತ್ತು 16 ಕಂಚಿನ ಪದಕ ಗೆದ್ದುಕೊಂಡಿದೆ.
Indian men’s hockey team beats South Africa 3-2 to reach CWG 2022 final
Read @ANI Story | https://t.co/ObypfsSagm#IndianHockeyTeam #SouthAfrica #CWG2022 #Finals pic.twitter.com/WTIjDlK1t6
— ANI Digital (@ani_digital) August 6, 2022
ಮಹಿಳಾ ಹಾಕಿ ತಂಡಕ್ಕೆ ಸೋಲು:
ಭಾರತ ಮಹಿಳಾ ಹಾಕಿ ತಂಡದವರು ಕಾಮನ್‌ವೆಲ್ತ್ ಕೂಟದ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ವೀರೋಚಿತ ಸೋಲು ಅನುಭವಿಸಿದರು. ರೋಚಕ ಪಂದ್ಯದಲ್ಲಿ ಸವಿತಾ ಪೂನಿಯಾ ಬಳಗ ಪೆನಾಲ್ಟಿ ಶೂಟೌಟ್‌ನಲ್ಲಿ 0-3 ರಲ್ಲಿ ಪರಾಭವಗೊಂಡಿತು. ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತಕ್ಕೆ ಅದೃಷ್ಟ ಕೈಕೊಟ್ಟಿತು. ಲಾಲ್‌ರೆಮ್ಸಿಯಾಮಿ, ನೇಹಾ ಗೋಯಲ್ ಮತ್ತು ನವನೀತ್ ಕೌರ್ ಅವರು ಮೊದಲ ಮೂರು ಪ್ರಯತ್ನಗಳಲ್ಲಿ ಗೋಲು ಗಳಿಸಲು ವಿಫಲರಾದರು. ಕಂಚಿನ ಪದಕಕ್ಕಾಗಿ ಭಾನುವಾರ ನಡೆಯುವ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್‌ನ ಸವಾಲು ಎದುರಿಸಲಿದೆ.
ಭವಿನಾ ಪಟೇಲ್ಗೆ ಚಿನ್ನ:
ಭಾರತೀಯ ಕಾಲಮಾನದ ಪ್ರಕಾರ ಶನಿವಾರ ತಡರಾತ್ರಿ ನಡೆದ ಪ್ಯಾರಾ ಟೇಬಲ್ ಟೆನ್ನಿಸ್ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಆಟಗಾರ್ತಿ ಭವಿನಾ ಪಟೇಲ್ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ನೈಜೀರಿಯಾದ ಇಫೆಚುಕ್ವುಡೆ ಕ್ರಿಸ್ಟಿಯಾನಾ ಇಕ್ಪಿಯೋಯಿ ಅವರನ್ನು ಮಣಿಸಿ ಬಂಗಾರದ ಪದಕ ಬಾಜಿಕೊಂಡಿದ್ದಾರೆ. ಅತ್ಯುತ್ತಮ ಆಟ ಪ್ರದರ್ಶಿಸಿದ ಪಟೇಲ್, 12-10, 11-2, 11-9 ರಲ್ಲಿ ಇಕ್ಪಿಯೊಯಿ ವಿರುದ್ಧ ಪ್ರಾಬಲ್ಯ ಸಾಧಿಸಿದರು. ಆಡಿದ ಮೂರು ಸುತ್ತುಗಳಲ್ಲಿಯೂ ಪರಾಕ್ರಮ ಮೆರೆದ ಪಟೇಲ್, ಅಂತಿಮವಾಗಿ ಐತಿಹಾಸಿಕ ಸಾಧನೆ ತೋರಿದ್ದಾರೆ. ಭಾರತದ ಮತ್ತೋರ್ವ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಸೋನಾಲ್ಬೆನ್ ಮನುಭಾಯ್ ಪಟೇಲ್ ಅವರು ಇಂಗ್ಲೆಂಡ್‌ನ ಸ್ಯೂ ಬೈಲಿಯನ್ನು ಸೋಲಿಸಿ ಕಂಚಿನ ಪದಕ ಸಂಪಾದಿಸಿದರು.