CWG 2022: ಕಾಮನ್​ವೆಲ್ತ್ ಗೇಮ್ಸ್​ನಿಂದ ನೀರಜ್ ಚೋಪ್ರಾ ಔಟ್

Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ನಂತರ, ನೀರಜ್‌ ಚೋಪ್ರಾಗೆ ಎಂಆರ್​ಐ ಸ್ಕ್ಯಾನ್ ಮಾಡಲಾಗಿತ್ತು. ಅದರಲ್ಲಿ ಅವರ ತೊಡೆಸಂದು ಭಾಗಕ್ಕೆ ಗಂಭೀರ ಗಾಯವಾಗಿರುವುದು ಕಂಡು ಬಂದಿದೆ.

CWG 2022: ಕಾಮನ್​ವೆಲ್ತ್ ಗೇಮ್ಸ್​ನಿಂದ ನೀರಜ್ ಚೋಪ್ರಾ ಔಟ್
Neeraj Chopra
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 26, 2022 | 1:14 PM

ಜುಲೈ 28 ರಿಂದ ಬರ್ಮಿಂಗ್​ಹ್ಯಾಮ್​ನಲ್ಲಿ ಶುರುವಾಗಲಿರುವ ಕಾಮನ್​ವೆಲ್ತ್​ ಗೇಮ್ಸ್​ನಿಂದ (CWG 2022) ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra)  ಹೊರಬಿದ್ದಿದ್ದಾರೆ. ಕ್ರೀಡಾಕೂಟದ ಪ್ರಾರಂಭಕ್ಕೂ ಮುನ್ನ ಪ್ರಮುಖ ಜಾವೆಲಿನ್ ಸ್ಪರ್ಧಿ ಹೊರಬೀಳುವ ಮೂಲಕ ಭಾರತ ತಂಡವು ದೊಡ್ಡ ಹಿನ್ನಡೆ ಅನುಭವಿಸಿದೆ. ಕೆಲ ದಿನಗಳ ಹಿಂದೆ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಗಾಯಗೊಂಡಿದ್ದು, ಹೀಗಾಗಿ ಕಾಮನ್​ವೆಲ್ತ್ ಗೇಮ್ಸ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ವಿಶೇಷ ಎಂದರೆ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಗಾಯದ ಹೊರತಾಗಿಯೂ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ವಿಶ್ವ ಅಥ್ಲೆಟಿಕ್ಸ್​ನಲ್ಲಿ 88.13 ಮೀಟರ್ ಎಸೆಯುವ ವೇಳೆ ಕಾಲಿಗೆ ಗಾಯವಾಗಿತ್ತು. ಹೀಗಾಗಿ ಮುಂಬರುವ ಕಾಮನ್​ವೆಲ್ತ್​ ಕ್ರೀಡಾಕೂಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಕಮರಿದ ಚಿನ್ನದ ನಿರೀಕ್ಷೆ:

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಫೌಲ್‌ನೊಂದಿಗೆ ಆರಂಭಿಸಿದರು. ಇದರ ನಂತರ ಅದ್ಭುತವಾಗಿ ಕಂಬ್ಯಾಕ್ ಮಾಡಿದ್ದ ಚೋಪ್ರಾ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ನಾಲ್ಕನೇ ಎಸೆತದ ನಂತರವೇ ಅವರ ತೊಡೆ ಭಾಗದಲ್ಲಿ ಗಾಯವಾಗಿದ್ದು, ಹೀಗಾಗಿ ಕಾಮನ್​ವೆಲ್ತ್​ ಗೇಮ್ಸ್​ ಭಾಗವಹಿಸುವುದು ಸೂಕ್ತವಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ವಿಶೇಷ ಎಂದರೆ ವಿಶ್ವ ಅಥ್ಲೆಟಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ನೀರಜ್ ಚೋಪ್ರಾ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದರು. ಅಲ್ಲದೆ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕಾರಣ ಬರ್ಮಿಂಗ್​ಹ್ಯಾಮ್​ನಲ್ಲೂ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಬಳಿಕ ಈ ಬಗ್ಗೆ ಮಾತನಾಡಿದ್ದ ನೀರಜ್ ಚೋಪ್ರಾ,  ಕಾಮನ್‌ವೆಲ್ತ್‌ನಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡುವುದಾಗಿ ಹೇಳಿದ್ದರು. ಆದರೆ ಇದೀಗ ಗಾಯದ ಕಾರಣ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ. ಇದರೊಂದಿಗೆ ಜಾವೆಲಿನ್ ಎಸೆತದಲ್ಲಿ ಭಾರತದ ಚಿನ್ನದ ಕನಸು ಕೂಡ ಬಹುತೇಕ ಕಮರಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದರೊಂದಿಗೆ ಆಗಸ್ಟ್ 7 ರಂದು ಕಾಮನ್​ವೆಲ್ತ್ ಕ್ರೀಡಾಕೂಟದಲ್ಲಿ ನಡೆಯಲಿರುವ ಜಾವೆಲಿನ್ ಸ್ಪರ್ಧೆಯು ಏಕಪಕ್ಷೀಯವಾಗಲಿದೆ. ಏಕೆಂದರೆ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್​ಗೆ ನೀರಜ್ ಚೋಪ್ರಾ ಒಬ್ಬರೇ ಉತ್ತಮ ಪೈಪೋಟಿ ನೀಡುತ್ತಿದ್ದರು. ಹೀಗಾಗಿ ಕಾಮನ್​ವೆಲ್ತ್ ಗೇಮ್ಸ್​ನಲ್ಲೂ ಇಬ್ಬರಿಂದ ರೋಚಕ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೀಗ ನೀರಜ್ ಚೋಪ್ರಾ ಹೊರಬಿದ್ದಿದ್ದು, ಹೀಗಾಗಿ ಭಾರತದ ಉಳಿದ ಸ್ಪರ್ಧಿಗಳಿಂದ ಚಿನ್ನವನ್ನು ನಿರೀಕ್ಷಿಸಬೇಕಿದೆ.

ನೀರಜ್ ಚೋಪ್ರಾಗೆ ಒಂದು ತಿಂಗಳ ವಿಶ್ರಾಂತಿ:

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ನಂತರ, ನೀರಜ್‌ ಚೋಪ್ರಾಗೆ ಎಂಆರ್​ಐ ಸ್ಕ್ಯಾನ್ ಮಾಡಲಾಗಿತ್ತು. ಅದರಲ್ಲಿ ಅವರ ತೊಡೆಸಂದು ಭಾಗಕ್ಕೆ ಗಂಭೀರ ಗಾಯವಾಗಿರುವುದು ಕಂಡು ಬಂದಿದೆ. ಹೀಗಾಗಿ ನೀರಜ್‌ಗೆ ಒಂದು ತಿಂಗಳ ಕಾಲ ವಿಶ್ರಾಂತಿ ನೀಡುವಂತೆ ವೈದ್ಯರು ಸೂಚಿಸಿದ್ದಾರೆ. ಗಾಯದ ಕಾರಣ ನೀರಜ್ 2019 ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಿಂದ ಹೊರಗುಳಿದಿದ್ದರು. ನಂತರ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದು ಚಿನ್ನ ಗೆದ್ದಿದ್ದು ಈಗ ಇತಿಹಾಸ.

22ನೇ ಕಾಮನ್​ವೆಲ್ತ್ ಗೇಮ್ಸ್:

ಜುಲೈ 28 ರಿಂದ ಇಂಗ್ಲೆಂಡ್​ನ ಬರ್ಮಿಂಗ್​ಹ್ಯಾಮ್​ನ ಕ್ರೀಡಾಂಗಣದಲ್ಲಿ 22ನೇ ಕಾಮನ್​ವೆಲ್ತ್ ಗೇಮ್ಸ್​ಗೆ ಚಾಲನೆ ಸಿಗಲಿದೆ. ಈ ಕ್ರೀಡಾಕೂಟದಲ್ಲಿ 72 ರಾಷ್ಟ್ರಗಳು ಭಾಗವಹಿಸುತ್ತಿದ್ದು, ಭಾರತದಿಂದ ಒಟ್ಟು 215 ಸ್ಪರ್ಧಿಗಳು ಕಾಣಿಸಿಕೊಳ್ಳಲಿದ್ದಾರೆ. ಗುರುವಾರದಿಂದ ಶುರುವಾಗಲಿರುವ ಕಾಮನ್​ವೆಲ್ತ್​ ಗೇಮ್ಸ್​ಗೆ ಆಗಸ್ಟ್ 8 ರಂದು ತೆರೆಬೀಳಲಿದೆ. 2018 ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತವು ಒಟ್ಟು 66 ಪದಕ ಗೆದ್ದಿತ್ತು. ಅಲ್ಲದೆ ಕಳೆದ ಕೆಲ ವರ್ಷಗಳಿಂದ ಭಾರತವು ಪದಕ ಪಟ್ಟಿಯಲ್ಲಿ ಟಾಪ್ – 5 ನಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಈ ಬಾರಿ ಕೂಡ ಭಾರತದ ಸ್ಪರ್ಧಾಳುಗಳಿಂದ ಹೆಚ್ಚಿನ ಪದಕಗಳನ್ನು ನಿರೀಕ್ಷಿಸಬಹುದು.

Published On - 12:47 pm, Tue, 26 July 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ