CWG 2022: ಭಾರತಕ್ಕೆ ಆರನೇ ಚಿನ್ನ: ಪ್ಯಾರಾ ಪವರ್​ ಲಿಫ್ಟಿಂಗ್​ನಲ್ಲಿ ಇತಿಹಾಸ ನಿರ್ಮಿಸಿದ ಸುಧೀರ್

| Updated By: Vinay Bhat

Updated on: Aug 05, 2022 | 7:41 AM

ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ (Para Powerlifting ) ಭಾರತದ ಸುಧೀರ್ (Sudhir) ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

CWG 2022: ಭಾರತಕ್ಕೆ ಆರನೇ ಚಿನ್ನ: ಪ್ಯಾರಾ ಪವರ್​ ಲಿಫ್ಟಿಂಗ್​ನಲ್ಲಿ ಇತಿಹಾಸ ನಿರ್ಮಿಸಿದ ಸುಧೀರ್
Sudhir Gold CWG 2022
Follow us on

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಕಾಮನ್​ವೆಲ್ತ್ ಗೇಮ್ಸ್ 2022 ರಲ್ಲಿ (Commonwealth Games 2022) ಭಾರತದ ಪದಕದ ಬೇಟೆ ಮುಂದುವರೆದಿದೆ. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ (Para Powerlifting ) ಭಾರತದ ಸುಧೀರ್ (Sudhir) ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಈ ಮೂಲಕ ಭಾರತದ ಪದಕಗಳ ಸಂಖ್ಯೆ 20 ಕ್ಕೇರಿದೆ. ಸದ್ಯ ಭಾರತದ ಬಳಿ ಆರು ಚಿನ್ನ, ಏಳು ಬೆಳ್ಳಿ ಮತ್ತು 7 ಕಂಚಿನ ಪದಕವಿದೆ. 87 ಕೆ.ಜಿ. ಇರುವ ಸುಧೀರ್ ತಮ್ಮ ಮೊದಲ ಪ್ರಯತ್ನದಲ್ಲಿ 208 ಕೆ.ಜಿ ಭಾರ ಎತ್ತಿದರು. ಹೀಗೆ 132 ಕ್ಕೂ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದರು.

ಪ್ಯಾರಾ ಪವರ್ ಲಿಫ್ಟಿಂಗ್​ನಲ್ಲಿ ವಿಜೇತರನ್ನು ಪಾಯಿಂಟ್​ಗಳ ಆಧಾರದ ಮೇಲೆ ನಿರ್ಧರಿಸುವುದು ವಾಡಿಕೆ. ಇದರಲ್ಲಿ ಸ್ಪರ್ಧಿಯ ದೇಹದ ತೂಕ ಮತ್ತು ಅವನು ಅಥವಾ ಅವಳು ಎತ್ತುವ ತೂಕದ ಆಧಾರದ ಮೇಲೆ ಪಾಯಿಂಟ್ ಗಳನ್ನು ನಿರ್ಧರಿಸಲಾಗುತ್ತದೆ. ಸುಧೀರ್ ತಮ್ಮ ಎರಡನೇ ಪ್ರಯತ್ನದಲ್ಲಿ 212 ಕೆಜಿ ಎತ್ತಿ ದಾಖಲೆಯ 134.5 ಅಂಕಗಳನ್ನು ಗಳಿಸಿದರು. ಈ ಮೂಲಕ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಚಿನ್ನದ ಪದಕವನ್ನು ಬಾಜಿಕೊಂಡಿದ್ದಾರೆ.

ಇದನ್ನೂ ಓದಿ
ವಿಂಡೀಸ್​ ಪ್ರವಾಸದಲ್ಲಿ ತನ್ನ ನೆಚ್ಚಿನ ‘ಕಿಂಗ್’ ಮನೆಗೆ ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ; ಫೋಟೋ ನೋಡಿ
CWG 2022 Hockey: ಹರ್ಮನ್‌ಪ್ರೀತ್ ಸಿಂಗ್ ಹ್ಯಾಟ್ರಿಕ್ ಗೋಲು; ಸೆಮಿಫೈನಲ್​ ಪ್ರವೇಶಿಸಿದ ಭಾರತ ಪುರುಷ ಹಾಕಿ ತಂಡ
CWG 2022 Badminton: ಎದುರಾಳಿಗಳನ್ನು ಸುಲಭವಾಗಿ ಸೋಲಿಸಿ ಮುಂದಿನ ಸುತ್ತಿಗೆ ಲಗ್ಗೆ ಇಟ್ಟ ಸಿಂಧು ಮತ್ತು ಶ್ರೀಕಾಂತ್
ಇಂಗ್ಲೆಂಡ್ ಅಂಡರ್-19 ತಂಡದಲ್ಲಿ ಟೀಂ ಇಂಡಿಯಾ ಮಾಜಿ ವೇಗಿ ಆರ್​ಪಿ ಸಿಂಗ್ ಪುತ್ರನಿಗೆ ಸ್ಥಾನ

 

ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ವಿಶೇಷ ಎಂದರೆ ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಬೆಳ್ಳಿ ಗೆದ್ದ ಮೊದಲ ಪುರುಷ ಲಾಂಗ್​ಜಂಪರ್ ಶ್ರೀಶಂಕರ್ ಆಗಿದ್ದಾರೆ. 8.08ಮೀ ಜಿಗಿತದ ಮೂಲಕ ಭಾರತಕ್ಕೆ ಐತಿಹಾಸಿಕ ಬೆಳ್ಳಿ ಗೆದ್ದುಕೊಟ್ಟರು. ಈ ಮೂಲಕ ಸುರೇಶ್ ಬಾಬು ಬಳಿಕ ಪದಕ ಗೆದ್ದ ಭಾರತದ ಎರಡನೇ ಪುರುಷ ಲಾಂಗ್​ಜಂಪರ್ ಎನಿಸಿಕೊಂಡಿದ್ದಾರೆ. ಸುರೇಶ್ ಅವರು 1978ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದರು.

ಭಾರತೀಯ ಪುರುಷರ ಹಾಕಿ ತಂಡವು ಸೆಮಿಫೈನಲ್‌ಗೆ ಭರ್ಜರಿ ಗೆಲುವಿನೊಂದಿಗೆ ಪ್ರವೇಶಿಸಿತು. ಸ್ಟಾರ್ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರ ಅಮೋಘ ಹ್ಯಾಟ್ರಿಕ್ ಹಿನ್ನಲೆಯಲ್ಲಿ ಭಾರತ ತನ್ನ ಕೊನೆಯ ಪೂಲ್ ಬಿ ಪಂದ್ಯದಲ್ಲಿ ವೇಲ್ಸ್ ತಂಡವನ್ನು 4-1 ಗೋಲುಗಳಿಂದ ಸೋಲಿಸಿತು. ಪೂಲ್ ಹಂತದಲ್ಲಿ 4 ಪಂದ್ಯಗಳಲ್ಲಿ ಟೀಂ ಇಂಡಿಯಾ ಒಟ್ಟು 3 ಪಂದ್ಯಗಳನ್ನು ಗೆದ್ದಿದ್ದರೆ, 1 ಡ್ರಾ ಆಗಿತ್ತು.

Published On - 7:08 am, Fri, 5 August 22