CWG 2022: ಭಾರತಕ್ಕೆ ಎರಡನೇ ಚಿನ್ನದ ಪದಕ; ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ ..!

CWG 2022: ಎರೆಮಿ ಲಾಲ್ರಿನ್ನುಂಗಾ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಮೀರಾಬಾಯಿ ಚಾನು ನಂತರ, ಜೆರೆಮಿ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 300 ಕೆ.ಜಿ. ತೂಕ ಎತ್ತುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

CWG 2022: ಭಾರತಕ್ಕೆ ಎರಡನೇ ಚಿನ್ನದ ಪದಕ; ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ ..!
Follow us
TV9 Web
| Updated By: ಪೃಥ್ವಿಶಂಕರ

Updated on:Jul 31, 2022 | 5:18 PM

ಎರೆಮಿ ಲಾಲ್ರಿನ್ನುಂಗಾ (Jeremy Lalrinnunga) ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ (Commonwealth Games 2022) ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಮೀರಾಬಾಯಿ ಚಾನು ನಂತರ, ಜೆರೆಮಿ ವೇಟ್‌ಲಿಫ್ಟಿಂಗ್‌ನಲ್ಲಿ (weightlifting) ಒಟ್ಟು 300 ಕೆ.ಜಿ. ತೂಕ ಎತ್ತುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಜೆರೆಮಿ ಸ್ನ್ಯಾಚ್‌ನಲ್ಲಿ 140 ಕೆಜಿ ಭಾರ ಹಾಗೂ ಜರ್ಕ್ನಲ್ಲಿ 160 ಕೆಜಿ ಎತ್ತಿದರು. ಮೂರನೇ ಪ್ರಯತ್ನದಲ್ಲಿ 165 ಕೆಜಿ ಎತ್ತಲು ಬಯಸಿದ್ದರು, ಆದರೆ ಜೆರೆಮಿಗೆ ಅದು ಸಾಧ್ಯವಾಗಲಿಲ್ಲ.

ಭಾರತದ ಖಾತೆಯಲ್ಲಿ 2 ಚಿನ್ನ

ಜೆರೆಮಿ 300 ಕೆಜಿ ಭಾರ ಎತ್ತುವ ಮೂಲಕ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ದಾಖಲೆ ನಿರ್ಮಿಸಿದ್ದಾರೆ. ಒಟ್ಟು 293 ಎತ್ತಿದ ಸಮೋವಾದ ನೆವೊ ಬೆಳ್ಳಿ ಗೆಲ್ಲುವಲ್ಲಿ ಯಶಸ್ವಿಯಾದರು. ಚಿನ್ನದ ಮೇಲೆ ಕಣ್ಣಿಟ್ಟಿದ್ದ ನೆವೊ, ಕ್ಲೀನ್ ಮತ್ತು ಜರ್ಕ್‌ನಲ್ಲಿ ತಮ್ಮ ಮೂರನೇ ಪ್ರಯತ್ನದಲ್ಲಿ 174 ಕೆಜಿ ಎತ್ತಲು ಪ್ರಯತ್ನಿಸಿದರು, ಆದರೆ ಅವರಿಗೆ 174 ಕೆಜಿ ಎತ್ತಲು ಸಾಧ್ಯವಾಗಲಿಲ್ಲ. ಜೆರೆಮಿ ಅವರ ಈ ಚಿನ್ನದೊಂದಿಗೆ, 2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 2 ಚಿನ್ನ, 2 ಬೆಳ್ಳಿ ಮತ್ತು ಒಂದು ಕಂಚು ಸೇರಿದಂತೆ ಒಟ್ಟು 5 ಪದಕಗಳು ಬಂದಿವೆ. ಭಾರತ ಈ ಎಲ್ಲಾ ಪದಕಗಳನ್ನು ಗೆದ್ದಿರುವುದು ವೇಟ್‌ಲಿಫ್ಟಿಂಗ್‌ನಲ್ಲಿ ಮಾತ್ರ.

ಜೆರೆಮಿ ಯೂತ್ ಒಲಿಂಪಿಕ್ ಚಾಂಪಿಯನ್

ಜೆರೆಮಿ ಅವರ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ಅವರು 2018 ರ ಯೂತ್ ಒಲಿಂಪಿಕ್ಸ್‌ನಲ್ಲಿ 62 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಜೊತೆಗೆ ಯೂತ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಹಾಗೆಯೇ ಏಷ್ಯನ್ ವೇಟ್​ಲಿಫ್ಟಿಂಗ್ ಚಾಂಪಿಯನ್​ಷಿಪ್​ನಲ್ಲೂ ಬೆಳ್ಳಿ ಪದಕ ಗೆದ್ದಿದ್ದರು. ಜೆರೆಮಿ ಮೊದಲ ಬಾಕ್ಸರ್ ಆಗಿದ್ದರು ಎಂಬ ವಿಚಾರ ಕೆಲವೇ ಜನರಿಗೆ ತಿಳಿದಿದೆ. ಅವರ ತಂದೆ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಬಾಕ್ಸರ್ ಆಗಿದ್ದರು ಮತ್ತು ಅವರ ಮಗ ಕೂಡ ಬಾಕ್ಸರ್ ಆಗಬೇಕೆಂದು ಬಯಸಿದ್ದರು. ಆದರೆ ಜೆರೆಮಿ ಸ್ವಲ್ಪ ಸಮಯದ ನಂತರ ಬಾಕ್ಸಿಂಗ್ ತೊರೆದು ವೇಟ್​ಲಿಫ್ಟಿಂಗ್ ಆಯ್ಕೆ ಮಾಡಿದರು.

Published On - 3:58 pm, Sun, 31 July 22