AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ಮಿಲ್ಖಾ ಸಿಂಗ್ ಆರೋಗ್ಯದಲ್ಲಿ ಏರುಪೇರು; ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲು

Milkha Singh: ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ ಮಿಲ್ಖಾ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ, ಭಾರತದ ಮಾಜಿ ಅಥ್ಲೀಟ್ ಕೊರೊನಾ ವರದಿ ಪಾಸಿಟಿವ್ ಬಂದಿತ್ತು.

ಕೊರೊನಾ ಸೋಂಕಿತ ಮಿಲ್ಖಾ ಸಿಂಗ್ ಆರೋಗ್ಯದಲ್ಲಿ ಏರುಪೇರು; ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲು
ಮಿಲ್ಖಾ ಸಿಂಗ್
ಪೃಥ್ವಿಶಂಕರ
|

Updated on: May 24, 2021 | 8:35 PM

Share

ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ ಮಿಲ್ಖಾ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ, ಭಾರತದ ಮಾಜಿ ಸ್ಪ್ರಿಂಟರ್ ಕೊರೊನಾ ವರದಿ ಪಾಸಿಟಿವ್ ಬಂದಿತ್ತು. ಮಿಲ್ಖಾ ಸಿಂಗ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರ ಮಗ ಜೀವ್ ಮಿಲ್ಖಾ ಸಿಂಗ್ ಅವರು ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ ಎಂದು ಹೇಳಿದರು. 91 ವರ್ಷದ ಮಿಲ್ಖಾ ಸಿಂಗ್ ಅವರು ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿದ್ದರು ಮತ್ತು ಚಂಡೀಗರ್​ನಲ್ಲಿರುವ ಅವರ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು. ಆದರೆ ಮಿಲ್ಖಾ ಸಿಂಗ್ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯವು ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಮಿಲ್ಖಾ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಮಿಲ್ಖಾ ಸಿಂಗ್ ಅವರ ಪುತ್ರ ಮತ್ತು ಭಾರತೀಯ ಗಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ಪಿಟಿಐಗೆ, ತಂದೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕೆಂದರೆ ಅವರು ತುಂಬಾ ದುರ್ಬಲರಾಗಿದ್ದರು. ಅವರು ಒಂದು ದಿನದಿಂದ ಏನನ್ನೂ ತಿನ್ನುತ್ತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಾವು ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲು ನಿರ್ಧರಿಸಿದ್ದೇವು. ಅವರು ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಮಗ ಜೀವ್ ಮಿಲ್ಖಾ, ನಮ್ಮ ತಂದೆಯವರು ಆಸ್ಪತ್ರೆಯಲ್ಲಿ ವೈದ್ಯರ ಆರೈಕೆಯಲ್ಲಿದ್ದಾರೆ. ಅವರು ತುಂಬಾ ಧೃಡ ಮನಸಿನ ವ್ಯಕ್ತಿ ಮತ್ತು ಯಾವಾಗಲೂ ಸಕಾರಾತ್ಮಕವಾಗಿ ಯೋಚಿಸುತ್ತಾರೆ. ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲ್ಲಿದ್ದಾರೆ ಎಂದಿದ್ದಾರೆ. ಜೀವ್ ಮಿಲ್ಖಾ ತನ್ನ ತಂದೆಯ ಕೊರೊನಾ ಪರೀಕ್ಷೆ ಸಕಾರಾತ್ಮಕವಾಗಿ ಬಂದಾಗ ದುಬೈನಲ್ಲಿದ್ದರು. ಆದರೆ ಈ ಸುದ್ದಿ ಬಂದ ಕೂಡಲೇ ಅವರು ಚಂಡೀಗರ್​ಗೆ ಮರಳಿದರು.

ಮಿಲ್ಖಾ ಸಿಂಗ್ ಅವರ ಬಗ್ಗೆ ಚಿತ್ರ ಮಾಡಲಾಗಿದೆ ಮಿಲ್ಖಾ ಸಿಂಗ್ ಅವರ ಜೀವನದ ಬಗ್ಗೆ ‘ಭಾಗ್ ಮಿಲ್ಖಾ ಭಾಗ್’ ಎಂಬ ಚಲನಚಿತ್ರವನ್ನು ಸಹ ಮಾಡಲಾಗಿದೆ, ಇದರಲ್ಲಿ ಮಿಲ್ಖಾ ಸಿಂಗ್ ಪಾತ್ರದಲ್ಲಿ ಫರ್ಹಾನ್ ಅಖ್ತರ್ ನಟಿಸಿದ್ದಾರೆ. ಈ ಚಿತ್ರಕ್ಕಾಗಿ, ಮಿಲ್ಖಾ ಸಿಂಗ್ ಅವರು ನಿರ್ಮಾಪಕರಿಂದ ಕೇವಲ 1 ರೂಪಾಯಿ ತೆಗೆದುಕೊಂಡು ಸುದ್ದಿಯಾಗಿದ್ದರು. ವಿಶೇಷವೆಂದರೆ ಆ 1 ರೂಪಾಯಿ ನೋಟನ್ನು 1958 ರಲ್ಲಿ ಮುದ್ರಿಸಲಾಯಿತು. ಈ ಒಂದು ರೂಪಾಯಿ ನೋಟು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಜೊತೆಗೆ ಮಿಲ್ಖಾ ಅವರ ಸಾಧನೆಯ ಜೊತೆಗೆ ಸಂಬಂಧ ಹೊಂದಿದೆ. ವಾಸ್ತವವಾಗಿ. ಸ್ವತಂತ್ರ ಭಾರತದ ಮೊದಲ ಚಿನ್ನದ ಪದಕವಾದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಿಲ್ಖಾ ಸಿಂಗ್ ಚಿನ್ನದ ಪದಕ ಗೆದ್ದ ವರ್ಷ ಇದು.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ