ಕೊರೊನಾ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ಟೀಂ ಇಂಡಿಯಾ ಮುಖ್ಯ ಕೋಚ್​ ರವಿಶಾಸ್ತ್ರಿ

Covid Vaccine: ಭಾರತ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಕೂಡ ಎರಡನೇ ಹಂತದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ಅನ್ನು ಮಂಗಳವಾರ ತೆಗೆದುಕೊಂಡರು.

ಕೊರೊನಾ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ಟೀಂ ಇಂಡಿಯಾ ಮುಖ್ಯ ಕೋಚ್​ ರವಿಶಾಸ್ತ್ರಿ
ಟೀಂ ಇಂಡಿಯಾ ಮುಖ್ಯ ಕೋಚ್​ ರವಿಶಾಸ್ತ್ರಿ
Follow us
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 02, 2021 | 7:53 PM

ಅಹಮದಾಬಾದ್: ಕೊರೊನಾವೈರಸ್ ಲಸಿಕೆಯ ಎರಡನೇ ಹಂತದ ಲಸಿಕೆ ನೀಡುವ ಅಭಿಯಾನ ದೇಶಾದ್ಯಂತ ಪ್ರಾರಂಭವಾಗಿದೆ. ಭಾರತ ಕ್ರಿಕೆಟ್​ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಕೂಡ ಮಂಗಳವಾರ ಕೊರೊನಾ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡರು. ಲಸಿಕೆ ತೆಗೆದುಕೊಳ್ಳುವ ಚಿತ್ರವನ್ನು ರವಿಶಾಸ್ತ್ರಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶಾಸ್ತ್ರಿ ಪ್ರಸ್ತುತ ಭಾರತೀಯ ತಂಡದೊಂದಿಗೆ ಅಹಮದಾಬಾದ್‌ನಲ್ಲಿದ್ದು, ಗುರುವಾರದಿಂದ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದೆ. ಅವರು ಅಹಮದಾಬಾದ್‌ನ ಅಪೊಲೊ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್​ ಅನ್ನು ತೆಗೆದುಕೊಂಡರು. ರವಿಶಾಸ್ತ್ರಿ ಅವರಿಗೆ 58 ವರ್ಷ ವಯಸ್ಸಾಗಿದ್ದು, ಎರಡನೇ ಹಂತದಲ್ಲಿ ಲಸಿಕೆ ಪಡೆದುಕೊಳ್ಳುವವರ ಪಟ್ಟಿಯಲ್ಲಿ ರವಿಶಾಸ್ತ್ರಿ ಕೂಡ ಇದ್ದಾರೆ.

ಲಸಿಕೆ ಪಡೆಯುವ ಚಿತ್ರವನ್ನ ಇನ್ಸ್​ಟಾಗ್ರಾಮ್​ನಲ್ಲಿ ಹಂಚಿಕೊಂಡ ಶಾಸ್ತ್ರಿ ಲಸಿಕೆ ಪಡೆಯುವ ಚಿತ್ರವನ್ನು ಶಾಸ್ತ್ರಿ ಅವರು ಸಾಮಾಜಿಕ ಜಾಲತಾಣ ಇನ್ಸ್​ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಶಾಸ್ತ್ರಿ ಹಂಚಿಕೊಂಡಿರುವ ಚಿತ್ರದಲ್ಲಿ, ಅವರು ಟೀಂ ಇಂಡಿಯಾ ಜರ್ಸಿ ತೊಟ್ಟಿದ್ದಾರೆ. ಅವರ ಪಕ್ಕದಲ್ಲಿ ನಿಂತಿರುವ ನರ್ಸ್ ಪಿಪಿಇ ಕಿಟ್ ಧರಿಸಿ ಲಸಿಕೆ ನೀಡುತ್ತಿರುವುದು ಕಂಡುಬರುತ್ತದೆ. ‘ಕೊರೊನಾ ಲಸಿಕೆಯ ಮೊದಲ ಡೋಸ್ ಇಂದು ತೆಗೆದುಕೊಂಡಿದ್ದೇನೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಭಾರತವನ್ನು ಸಶಕ್ತಗೊಳಿಸುತ್ತಿರುವ ವೈದ್ಯಕೀಯ ವೃತ್ತಿಪರರು ಮತ್ತು ವಿಜ್ಞಾನಿಗಳಿಗೆ ಅನೇಕ ಧನ್ಯವಾದಗಳು. ಅಹಮದಾಬಾದ್‌ನ ಅಪೊಲೊ ಆಸ್ಪತ್ರೆಯಲ್ಲಿ ಕಾಂತಾಬೆನ್ ಮತ್ತು ಅವರ ತಂಡ ತೋರಿಸಿದ ವೃತ್ತಿಪರತೆ ನನ್ನನ್ನು ತುಂಬಾ ಆಕರ್ಷಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಎರಡನೇ ಹಂತದ ವ್ಯಾಕ್ಸಿನೇಷನ್ ಪ್ರಾರಂಭ ಸೋಮವಾರದಿಂದ, ದೇಶಾದ್ಯಂತ ಎರಡನೇ ಹಂತದ ವ್ಯಾಕ್ಸಿನೇಷನ್ ಪ್ರಾರಂಭಿಸಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ಸರ್ಕಾರಿ ಆಸ್ಪತ್ರೆಗಳಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ವ್ಯಾಕ್ಸಿನೇಷನ್‌ನ ಈ ಹೊಸ ಅಭಿಯಾನದ ಪ್ರಯೋಜನವನ್ನು 27 ಕೋಟಿ ಜನರು ಪಡೆಯಲ್ಲಿದ್ದಾರೆ. ಲಸಿಕೆ ನೀಡುವ ಅಭಿಯಾನವನ್ನು ಚುರುಕುಗೊಳಿಸುವ ಕಾರ್ಯವನ್ನು 12 ಸಾವಿರಕ್ಕೂ ಹೆಚ್ಚು ಸರ್ಕಾರಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಹಿಸಲಾಗಿದೆ.

ಇದನ್ನೂ ಓದಿ: Covid 19 Vaccination: ಕೊರೊನಾ ಲಸಿಕೆಗೆ ‘ತೋಳು ಮಡಚಿದ’ ಆರೋಗ್ಯ ಸಚಿವ ಡಾ.ಹರ್ಷವರ್ಧನ್​, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ