AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಗಳೊಳಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ

Team India for 2026 T20 World Cup: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪ್ರತಿಷ್ಠಿತ ಪಂದ್ಯಾವಳಿಗೆ ಭಾರತ ತಂಡವನ್ನು ಡಿಸೆಂಬರ್ 20 ರಂದು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಅದೇ ದಿನ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಗೂ ತಂಡವನ್ನು ಆಯ್ಕೆ ಮಾಡಲಾಗುವುದು. ಸೂರ್ಯಕುಮಾರ್ ಯಾದವ್ ಮತ್ತು ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

24 ಗಂಟೆಗಳೊಳಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ
Team India
ಪೃಥ್ವಿಶಂಕರ
|

Updated on: Dec 19, 2025 | 7:35 PM

Share

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಅದರಂತೆ ಈ ಮಿನಿ ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗುತ್ತಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವಿದೆ. ಇದೆಲ್ಲದರ ನಡುವೆ ಈ ಚುಟುಕು ವಿಶ್ವ ಸಮರಕ್ಕರ ಟೀಂ ಇಂಡಿಯಾವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐ (BCCI) ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಆ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾವನ್ನು ಡಿಸೆಂಬರ್ 20 ರಂದು ಪ್ರಕಟಿಸಲಾಗುತ್ತದೆ ಎಂಬ ಮಾಹಿತ ನೀಡಿದೆ.

ತಂಡವನ್ನು ಯಾವಾಗ ಪ್ರಕಟಿಸಲಾಗುತ್ತದೆ?

2026 ರ ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ಸರಣಿಗೆ ಡಿಸೆಂಬರ್ 20 ರಂದು ಟೀಂ ಇಂಡಿಯಾವನ್ನು ಘೋಷಿಸಲಾಗುವುದು ಎಂದು ಈಗಾಗಲೇ ವರದಿಗಳಿದ್ದವು. ಆದಾಗ್ಯೂ, ಬಿಸಿಸಿಐ ಈಗ ಅಧಿಕೃತವಾಗಿ ಸುದ್ದಿಯನ್ನು ದೃಢಪಡಿಸಿದೆ. ಭಾರತೀಯ ತಂಡದ ಆಯ್ಕೆ ಮಧ್ಯಾಹ್ನ 1:30 ಕ್ಕೆ ನಡೆಯಲಿದ್ದು, ನಂತರ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸರಣಿ ಯಾವಾಗ?

ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ ವೈಟ್-ಬಾಲ್ ಸರಣಿಯನ್ನು ಆಡಲಿದೆ. ಈ ಸರಣಿಯು 2026 ರ ಟಿ20 ವಿಶ್ವಕಪ್ ಪ್ರಾರಂಭವಾಗುವ ಮೊದಲು ನಡೆಯಲಿದೆ. ಈ ಸರಣಿಯು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20ಪಂದ್ಯಗಳು ಸೇರಿದಂತೆ ಎಂಟು ಪಂದ್ಯಗಳನ್ನು ಒಳಗೊಂಡಿರುತ್ತದೆ. ಏಕದಿನ ಸರಣಿಯು ಜನವರಿ 11, 14 ಮತ್ತು 18 ರಂದು ವಡೋದರಾ, ರಾಜ್‌ಕೋಟ್ ಮತ್ತು ಇಂದೋರ್‌ನಲ್ಲಿ ನಡೆಯಲಿವೆ.

ಏಕದಿನ ಸರಣಿಯ ನಂತರ, ಐದು ಪಂದ್ಯಗಳ ಟಿ20 ಸರಣಿಯು ಜನವರಿ 21 ರಿಂದ 31 ರವರೆಗೆ ನಡೆಯಲಿದ್ದು, ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಎರಡನೇ ಟಿ20 ಜನವರಿ 23 ರಂದು ರಾಯ್‌ಪುರದಲ್ಲಿ, ಮೂರನೇ ಪಂದ್ಯ ಜನವರಿ 25 ರಂದು ಗುವಾಹಟಿಯಲ್ಲಿ ನಡೆಯಲಿದೆ. ನಾಲ್ಕನೇ ಟಿ20 ಜನವರಿ 28 ರಂದು ವೈಜಾಗ್‌ನಲ್ಲಿ ನಡೆಯಲಿದ್ದು, ಕೊನೆಯ ಟಿ20 ಜನವರಿ 31 ರಂದು ತಿರುವನಂತಪುರದಲ್ಲಿ ನಡೆಯಲಿದೆ.

ICC Awards: ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಶಫಾಲಿ ವರ್ಮಾಗೆ ಐಸಿಸಿ ಪ್ರಶಸ್ತಿ

2026 ರ ಟಿ20 ವಿಶ್ವಕಪ್ ಯಾವಾಗ ನಡೆಯಲಿದೆ?

2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಿ ಮಾರ್ಚ್ 8 ರವರೆಗೆ ನಡೆಯಲಿದೆ. ಈ ಐಸಿಸಿ ಟೂರ್ನಮೆಂಟ್ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿವೆ. ಆದ್ದರಿಂದ, ಈ ಟೂರ್ನಮೆಂಟ್‌ನಲ್ಲಿ ಭಾರತ ತಂಡವು ಪ್ರಬಲ ಸ್ಪರ್ಧಿಯಾಗಲಿದೆ.

ಭಾರತ ಸಂಭಾವ್ಯ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್. ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ