AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ಟಿ20 ಲೀಗ್​ನತ್ತ ಮುಖ ಮಾಡಿದ 13 ಭಾರತೀಯರು

SA20 2026: ಸೌತ್ ಆಫ್ರಿಕಾ ಟಿ20 ಲೀಗ್​ನ 4ನೇ ಸೀಸನ್​ ಜನವರಿ 1, 2026 ರಿಂದ ಶುರುವಾಗಲಿದೆ. ಜೋಹಾನ್ಸ್ ಬರ್ಗ್​​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ಹಾಗೂ ಜೋಹಾನ್ಸ್​ ಬರ್ಗ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಟೂರ್ನಿಗಾಗಿ ಮುಂದಿನ ತಿಂಗಳು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ 13 ಭಾರತೀಯ ಕ್ರಿಕೆಟಿಗರು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ಟಿ20 ಲೀಗ್​ನತ್ತ ಮುಖ ಮಾಡಿದ 13 ಭಾರತೀಯರು
Sa20
ಝಾಹಿರ್ ಯೂಸುಫ್
|

Updated on: Aug 23, 2025 | 8:55 AM

Share

ಸೌತ್ ಆಫ್ರಿಕಾ ಟಿ20 ಲೀಗ್ (SA20)​ ಆಟಗಾರರ ಹರಾಜಿಗೆ ಡೇಟ್ ಫಿಕ್ಸ್ ಆಗಿದೆ. ಸೆಪ್ಟೆಂಬರ್ 9 ರಂದು ನಡೆಯಲಿರುವ ಹರಾಜಿಗಾಗಿ 13 ಭಾರತೀಯರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಆಟಗಾರರಾದ ಪಿಯೂಷ್ ಚಾವ್ಲಾ, ಸಿದ್ಧಾರ್ಥ್ ಕೌಲ್ ಮತ್ತು ಅಂಕಿತ್ ರಾಜ್‌ಪೂತ್ ಕೂಡ ಈ ಪಟ್ಟಿಯಲ್ಲಿರುವುದು ವಿಶೇಷ.

ಅಂದರೆ ಭಾರತೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ 13 ಆಟಗಾರರು ಇದೀಗ ಸೌತ್ ಆಫ್ರಿಕಾ ಟಿ20 ಲೀಗ್​​ನಲ್ಲಿ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. ಹೀಗಾಗಿ ಇನ್ಮುಂದೆ ಈ ಆಟಗಾರರು ಐಪಿಎಲ್​​ನಲ್ಲಿ ಅಥವಾ ರಾಜ್ಯ ತಂಡದ ಪರ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಅದರಂತೆ ಸೌತ್ ಆಫ್ರಿಕಾ ಟಿ20 ಲೀಗ್​​ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಪಿಯೂಷ್ ಚಾವ್ಲಾ (ಉತ್ತರ ಪ್ರದೇಶ್)
  • ಸಿದ್ಧಾರ್ಥ್ ಕೌಲ್ (ಪಂಜಾಬ್)
  • ಅಂಕಿತ್ ರಜಪೂತ್ (ಉತ್ತರ ಪ್ರದೇಶ್)
  • ನಿಖಿಲ್ ಜಗ (ರಾಜಸ್ಥಾನ್)
  • ಮೊಹಮ್ಮದ್ ಫೈದ್ (ರಾಜ್ಯವನ್ನು ಉಲ್ಲೇಖಿಸಲಾಗಿಲ್ಲ)
  • ಕೆ.ಎಸ್. ನವೀನ್ (ತಮಿಳುನಾಡು)
  • ಅನ್ಸಾರಿ ಮರೂಫ್ (ರಾಜ್ಯವನ್ನು ಉಲ್ಲೇಖಿಸಲಾಗಿಲ್ಲ)
  • ಮಹೇಶ್ ಅಹಿರ್ (ಗುಜರಾತ್)
  • ಸರುಲ್ ಕನ್ವರ್ (ಪಂಜಾಬ್)
  • ಅನುರೀತ್ ಸಿಂಗ್ ಕಥುರಿಯಾ (ದೆಹಲಿ)
  • ಇಮ್ರಾನ್ ಖಾನ್ (ಉತ್ತರ ಪ್ರದೇಶ್)
  • ವೆಂಕಟೇಶ್ ಗಾಳಿಪೆಲ್ಲಿ (ರಾಜ್ಯ ಉಲ್ಲೇಖಿಸಲಾಗಿಲ್ಲ)
  • ಅತುಲ್ ಯಾದವ್ (ಉತ್ತರ ಪ್ರದೇಶ್)

ಈ 13 ಆಟಗಾರರಲ್ಲಿ ಪಿಯೂಷ್ ಚಾವ್ಲಾ ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು. ಹಾಗೆಯೇ ಸಿದ್ಧಾರ್ಥ್​ ಕೌಲ್ ಕೆಕೆಆರ್ ಹಾಗೂ ಆರ್​ಸಿಬಿ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಅಂಕಿತ್ ರಜಪೂತ್ ರಾಜಸ್ಥಾನ್ ರಾಯಲ್ಸ್ ತಂಡದ ಪರ ಕಣಕ್ಕಿಳಿದಿದ್ದರು.

ಸೌತ್ ಆಫ್ರಿಕಾ ಟಿ20 ಲೀಗ್ ಆಡಿದ ಮೊದಲ ಭಾರತೀಯ ಯಾರು?

ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದ ಮೂಲಕ ನಿವೃತ್ತಿ ಘೋಷಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ 2025 ರಲ್ಲಿ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್ ಪರ ಕಣಕ್ಕಿಳಿದಿದ್ದರು. ಈ ಮೂಲಕ SA20 ಲೀಗ್ ಆಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದರು.

ಇನ್ನು ಪಾರ್ಲ್ ರಾಯಲ್ಸ್ ಪರ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ 7 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಕೇವಲ ಒಂದು ಅರ್ಧಶತಕ ಬಾರಿಸಲಷ್ಟೇ ಶಕ್ತರಾಗಿದ್ದರು. ಇನ್ನುಳಿದ 6 ಇನಿಂಗ್ಸ್​ಗಳಲ್ಲೂ ಅವರು ವಿಫಲರಾಗಿದ್ದಾರೆ. ಈ ಮೂಲಕ 7 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 128 ರನ್​ಗಳು.

ಇದನ್ಣೂ ಓದಿ: ವಿಶ್ವ ದಾಖಲೆಯಾಟ… 378 ರನ್​​ಗಳೊಂದಿಗೆ ಇತಿಹಾಸ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್​ಕೆ

ಇದೀಗ ದಿನೇಶ್ ಕಾರ್ತಿಕ್ ಅವರ ಹಾದಿಯಲ್ಲೇ ಐಪಿಎಲ್​ಗೆ ಗುಡ್ ಬೈ ಪಿಯೂಷ್ ಚಾವ್ಲಾ, ಸಿದ್ಧಾರ್ಥ್ ಕೌಲ್, ಅಂಕಿತ್ ರಜಪೂತ್ ಸೌತ್ ಆಫ್ರಿಕಾ ಟಿ20 ಲೀಗ್​ನತ್ತ ಮುಖ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ