2024 ರಿಂದ 2031 ರವರೆಗೆ ನಡೆಯಲಿರುವ ವಿಶ್ವಕಪ್ (World Cup) ಸೇರಿದಂತೆ ಪ್ರಮುಖ ಟೂರ್ನಿಗಳ ಆತಿಥೇಯ ರಾಷ್ಟ್ರಗಳ ಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪ್ರಕಟಿಸಿದೆ. 2024-2031ರ ಅವಧಿಯಲ್ಲಿ ಒಟ್ಟು 8 ಟೂರ್ನಿಗಳು ನಡೆಯಲಿದ್ದು, ಅದರಲ್ಲಿ ಎರಡು ಏಕದಿನ ವಿಶ್ವಕಪ್, ನಾಲ್ಕು ಟಿ20 ವಿಶ್ವಕಪ್ ಹಾಗೂ ಎರಡು ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಈ ಟೂರ್ನಿಯನ್ನು ಆಯೋಜಿಸಲು ಆಯೋಜಿಸಲು ಐಸಿಸಿಯ 11 ಪೂರ್ಣ ಸದಸ್ಯ ರಾಷ್ಟ್ರಗಳು ಮತ್ತು ಮೂರು ಸಹಾಯಕ ಸದಸ್ಯ ರಾಷ್ಟ್ರವನ್ನು ಆಯ್ಕೆ ಮಾಡಲಾಗಿದೆ.
ಅದರಂತೆ 2024 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಆಯೋಜನೆಯಾಗಲಿದೆ. ಹಾಗೆಯೇ 2025ರಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಇನ್ನು 2026ರ ಟಿ20 ವಿಶ್ವಕಪ್ ಅನ್ನು ಶ್ರೀಲಂಕಾ ಹಾಗೂ ಭಾರತ ಜಂಟಿಯಾಗಿ ಆಯೋಜಿಸಲಿದೆ. 2027ರ ಏಕದಿನ ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸಲಿದೆ.
2028ರ ಟಿ20 ವಿಶ್ವಕಪ್ ಅನ್ನು ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ನಡೆಸಲಾಗುತ್ತದೆ. 2029ರ ಚಾಂಪಿಯನ್ಸ್ ಟ್ರೋಫಿ ಭಾರತದಲ್ಲಿ ನಡೆಯಲಿದ್ದು, ಹಾಗೆಯೇ 2030ರ ಟಿ20 ವಿಶ್ವಕಪ್ಗೆ ಇಂಗ್ಲೆಂಡ್-ಐರ್ಲೆಂಡ್-ಸ್ಕಾಟ್ಲೆಂಡ್ ಆತಿಥ್ಯವಹಿಸಲಿದೆ. ಅದೇ ರೀತಿ 2031 ಏಕದಿನ ವಿಶ್ವಕಪ್ ಅನ್ನು ಭಾರತ ಹಾಗೂ ಬಾಂಗ್ಲಾದೇಶದಲ್ಲಿ ನಡೆಸಲಾಗುತ್ತದೆ. ಈ ಮೂಲಕ ಐಸಿಸಿ ಮುಂದಿನ ಟೂರ್ನಿಗಳನ್ನು ನೆರೆಹೊರೆ ದೇಶಗಳಲ್ಲಿ ಜಂಟಿಯಾಗಿ ಆಯೋಜಿಸಲು ನಿರ್ಧರಿಸಿದೆ.
ಇಲ್ಲಿ 2025ರ (ಪಾಕಿಸ್ತಾನ್) ಮತ್ತು 2029ರ (ಭಾರತ) ಚಾಂಪಿಯನ್ಸ್ ಟ್ರೋಫಿಯನ್ನು ಹೊರತುಪಡಿಸಿದರೆ ಉಳಿದೆಲ್ಲಾ ಟೂರ್ನಿಗಳು ಜಂಟಿಯಾಗಿ ಆಯೋಜನೆಗೊಳ್ಳಲಿರುವುದು ವಿಶೇಷ. ಇನ್ನು 2022 ರ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಇದರ ಬಳಿಕ 2023 ರ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. ಈ ಎರಡು ವಿಶ್ವಕಪ್ ಬಳಿಕ ಎಲ್ಲಾ ವಿಶ್ವಕಪ್ಗಳಿಗೆ ಎರಡು ಮತ್ತು ಮೂರು ರಾಷ್ಟ್ರಗಳು ಜಂಟಿಯಾಗಿ ಆತಿಥ್ಯವಹಿಸಲಿರುವುದು ವಿಶೇಷ.
Are you ready for the best-ever decade of men’s white-ball cricket?
Eight new tournaments announced ?
14 different host nations confirmed ?
Champions Trophy officially returns ?https://t.co/OkZ2vOpvVQ pic.twitter.com/uwQHnna92F— ICC (@ICC) November 16, 2021
ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್: ಚಾಂಪಿಯನ್ ಪಟ್ಟಕ್ಕೇರಿದ 6 ತಂಡಗಳು
ಇದನ್ನೂ ಓದಿ: Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!
(14 ICC Members to host ICC men’s events post 2023)
Published On - 5:51 pm, Tue, 16 November 21